
ನನ್ನ ಮುಂದೆ ಸಾಕಷ್ಟು ಸವಾಲುಗಳಿವೆ : ದಕ್ಷಿಣಕನ್ನಡ ಜಿಲ್ಲೆ ನೂತನ ಕಾಂಗ್ರೆಸ್ ಅಧ್ಯಕ್ಷ, ಪದ್ಮರಾಜ್ ಆರ್ ಪೂಜಾರಿ.
news.ashwasurya.in
ಅಶ್ವಸೂರ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಪದ್ಮರಾಜ್ ಆರ್. ಪೂಜಾರಿ ಅವರು ತನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡುವಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಇಂದು ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ತಾನು 1992 ರಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಬಳಿಕ ದಕ್ಷಿಣಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಳೆದ ಚುನಾವಣೆ ಸಂದರ್ಭ ನನಗೆ ಅವಕಾಶ ನೀಡಿದ್ದು, ಈ ಚುನಾವಣೆಯಲ್ಲಿ ಸೋಲಾಗಿದ್ದರೂ ಅದನ್ನು ಸೋಲು ಎಂದು ಪರಿಗಣಿಸಿಲ್ಲ. ಅದರಿಂದ ಧೃತಿ ಗೆಟ್ಟಿಲ್ಲ. ಪ್ರತಿ ದಿನ ನಾನು ಕಾರ್ಯಕರ್ತರ ಜತೆಗೇ ಇದ್ದೇನೆ ಎಂದರು.

ಮುಂದಿನ ದಿನಗಳಲ್ಲಿ ಬಹಳಷ್ಟು ಸವಾಲುಗಳಿವೆ. ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನ ನೀಡಿದ ಪಕ್ಷದ ನಾಯಕರ ಮತ್ತು ಕಾರ್ಯಕರ್ತರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸುತ್ತೇನೆ. ಎಲ್ಲರನ್ನು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಸ್ಪಷ್ಟ ಬಹುಮತ ಬರುವ ಹಾಗೆ ಎಲ್ಲರೂ ಸೇರಿಕೊಂಡು ದುಡಿಯುತ್ತೇವೆ ಎಂದು ಹೇಳಿದರು.

