
ತೀರ್ಥಹಳ್ಳಿ : ಇದೆ ಸೆಪ್ಟಂಬರ್ 23 ರಂದು 10ನೇ ವರ್ಷದ ಸರ್ವ ಸದಸ್ಯರ ಮಹಾಸಭೆಗೆ ಸಜ್ಜಾದ ತುಳುನಾಡು ಸಿರಿ ಹಾಗೂ ತುಳುನಾಡು ಮಹಿಳಾ ಪತ್ತಿನ ಸಹಕಾರಿ ಸಂಘ.
ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸುಸ್ವಾಗತ.
ತುಳುನಾಡು ಸಿರಿ ಸೌಹಾರ್ದ ಸಹಕಾರಿ ಸಂಘ ಹಾಗೂ ತುಳುನಾಡು ಮಹಿಳಾ ಪತ್ತಿನ ಸಹಕಾರಿ ಸಂಘದ ವತಿಯಿಂದ 2025-26ನೇ ಸಾಲಿನ 10ನೇ ವರ್ಷದ ಸರ್ವ ಸದಸ್ಯರ ಮಹಾಸಭೆ ಹಾಗೂ ದಶಮಾನೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ..
ಅಶ್ವಸೂರ್ಯ/ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತುಳುನಾಡು ಸಿರಿ ಸೌಹಾರ್ದ ಸಹಕಾರಿ ಸಂಘ ಹಾಗೂ ತುಳುನಾಡು ಮಹಿಳಾ ಪತ್ತಿನ ಸಹಕಾರಿ ಸಂಘದ ವತಿಯಿಂದ 2025–26ನೇ ಸಾಲಿನ 10ನೇ ವರ್ಷದ ಸರ್ವ ಸದಸ್ಯರ ಮಹಾಸಭೆ ಹಾಗೂ ದಶಮಾನೋತ್ಸವದ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಹಕಾರಿ ಕ್ಷೇತ್ರದಲ್ಲಿ ಸಂಘದ ವತಿಯಿಂದ ಕೈಗೊಂಡಿರುವ ವಿವಿಧ ಚಟುವಟಿಕೆಗಳು, ಸದಸ್ಯರಿಗಾಗಿ ರೂಪಿಸಿರುವ ಯೋಜನೆಗಳು ಹಾಗೂ ಕಳೆದ ಸಾಲಿನ ಕಾರ್ಯಚಟುವಟಿಕೆಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಗುತ್ತದೆ,ಇದೇ ವೇಳೆ ಸಂಘದ ಮುಂದಿನ ಕಾರ್ಯಯೋಜನೆಗಳು, ಸದಸ್ಯರ ಹಿತಾಸಕ್ತಿ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಲಿದೆ.
10ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಸಂಘದ ಬೆಳವಣಿಗೆಯಲ್ಲಿ ಸದಸ್ಯರ ಸಹಕಾರ ಮತ್ತು ಪಾಲ್ಗೊಳ್ಳುವಿಕೆಯು ಬಹು ಮುಖ್ಯವಾಗಿರುತ್ತದೆ,
10 ವರ್ಷಗಳ ಪಯಣ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಮಹಾಸಭೆ ಹಾಗೂ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.

2025-26ನೇ ಸಾಲಿನ 10ನೇ ವರ್ಷದ ಸರ್ವ ಸದಸ್ಯರ ಮಹಾಸಭೆ ಹಾಗೂ ದಶಮಾನೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಆರ್ಥಿಕ ಬಲವರ್ಧನೆ ಹಾಗೂ ಸಂಘದ ಸದಸ್ಯರ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ತುಳುನಾಡು ಸಹಕಾರಿ ಸಂಘದ ಮಹಿಳಾ ಸದಸ್ಯರಿಗಾಗಿ ವಿಶೇಷವಾಗಿ “ಬಳೆ ಹಬ್ಬ ಸಂಭ್ರಮಾಚರಣೆ” ಆಯೋಜಿಸಲಾಗಿದೆ.

ಕಾರ್ಯಕ್ರಮವು ಸೆಪ್ಟೆಂಬರ್ 23, 2026ರ ಬುಧವಾರ ಬೆಳಗ್ಗೆ 9 ಗಂಟೆಗೆ ತೀರ್ಥಹಳ್ಳಿಯ ಮಾಧವ ಮಂಗಳ ಸಭಾ ಭವನ, ಕುವೆಂಪು ರಸ್ತೆ, ತುಂಗಾ ತೀರದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಹಿಳಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.
ಸಹಕಾರ, ಮಹಿಳಾ ಸಬಲೀಕರಣ ಹಾಗೂ ಸದಸ್ಯರ ಒಗ್ಗಟ್ಟಿಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

