ಶಿವಮೊಗ್ಗ : ದಿನಾಂಕ 25-11-2023 ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತನಿಖಾಧಿಕಾರಿಗಳು ಹಾಗೂ ತನಿಖಾ ಸಹಾಯಕರಿಗೆ ಪೋಕ್ಸೋ ಕಾಯ್ದೆ ಕುರಿತು ಅರಿವು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಶ್ರೀ ಮಂಜುನಾಥ್ ನಾಯಕ್ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ರವರು ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಇವರು ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸದರಿ ಕಾರ್ಯಾಗಾರದ ಮುಖ್ಯ ಅಥಿತಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಲತಾ, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ( FTSC-1) ನ್ಯಾಯಾಲಯ ಶಿವಮೊಗ್ಗ, ಶ್ರೀ ಮೋಹನ್ ಜೆ ಎಸ್, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ( FTSC-2) ನ್ಯಾಯಾಲಯ ಶಿವಮೊಗ್ಗ ಮತ್ತು ಶ್ರೀ ಚಂದನ್, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ರವರು ಪೋಕ್ಸೋ ಪ್ರಕರಣಗಳಲ್ಲಿ ಅಗತ್ಯವಾಗಿ ಒದಗಿಸಬೇಕಾದ ಸಾಕ್ಷಿ ಮತ್ತು ನ್ಯಾಯಾಲಯವು ಗಮನಿಸಿದ ಲೋಪದೋಷಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಶ್ರೀ ಸುರೇಶ್ ಕುಮಾರ್, ಸರ್ಕಾರಿ ಅಭಿಯೋಜಕರು, ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ಮತ್ತು ಶ್ರೀಮತಿ ಮಮತಾ, ಸರ್ಕಾರಿ ಅಭಿಯೋಜಕರು, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ರವರು ತನಿಖಾ ಕಾರ್ಯದಲ್ಲಿ ತನಿಖಾಧಿಕಾರಿಗಳು ಅನುಸರಿಸಬೇಕಾದ ಕ್ರಮಗಳು ಮತ್ತು ದೋಷಾರೋಪಣಾ ಪಟ್ಟಿ ಸಲ್ಲಿಸುವಾಗ ಪರಿಶಿಲಿಸಬೇಕಾದ ಅಂಶಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಡಾ|| ಅನುಷಾ, ಸಹಾಯಕ ಪ್ರಾಧ್ಯಾಪಕರು, ಒಬಿಜಿ ವಿಭಾಗ, ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಮತ್ತು ಡಾ|| ಚಿದಾನಂದ, ಸಹ ಪ್ರಾಧ್ಯಾಪಕರು, ಫೋರೆನ್ಸಿಕ್ ಮೆಡಿಸಿನ್ ವಿಭಾಗ, ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ರವರು ಸಂತ್ರಸ್ಥರನ್ನು ವೈಧ್ಯಕೀಯ ತಪಾಸಣೆಗೆ ಒಳಪಡಿಸುವಾಗ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸದರಿ ಕಾರ್ಯಾಗಾರದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ನಾಗರಾಜ್, ಡಿವೈಎಸ್ಪಿ ಭದ್ರಾವತಿ ಉಪ ವಿಭಾಗ, ಶ್ರೀ ಗೋಪಾಲ ಕೃಷ್ಣ ತಿಮ್ಮಣ್ಣ ನಾಯ್ಕ, ಡಿವೈಎಸ್ಪಿ, ಸಾಗರ ಉಪ ವಿಭಾಗ, ಶ್ರೀ ಬಾಲರಾಜ್, ಡಿವೈಎಸ್ಪಿ, ಶಿವಮೊಗ್ಗ ಎ ಉಪ ವಿಭಾಗ, ಶ್ರೀ ಸುರೇಶ್ ಕುಮಾರ್, ಡಿವೈಎಸ್ಪಿ, ಶಿವಮೊಗ್ಗ ಬಿ ಉಪ ವಿಭಾಗ, ಶ್ರೀ ಶಿವಾನಂದ ಮದರಕಂಡಿ, ಡಿವೈಎಸ್ಪಿ, ಶಿಕಾರಿಪುರ ಉಪ ವಿಭಾಗ ಮತ್ತು ಶ್ರೀ ಗಜಾನನ ವಾಮನ ಸುತರ, ಡಿವೈಎಸ್ಪಿ, ತೀರ್ಥಹಳ್ಳಿ ಉಪ ವಿಭಾಗ, ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ತನಿಖಾ ಸಹಾಯಕ ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಸುದೀರ್ ವಿಧಾತ , ಶಿವಮೊಗ್ಗ