ಶಿವಮೊಗ್ಗ : ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ, ವತಿಯಿಂದ ಬೀಳ್ಕೊಡುಗೆ ಹಾಗೂ ಸ್ವಾಗತ ಸಮಾರಂಭ.
ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ವತಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO)ಗಳ ಬೀಳ್ಕೊಡುಗೆ ಹಾಗೂ ಸ್ವಾಗತ ಸಮಾರಂಭವನ್ನು ಗೌರವಪೂರ್ವಕವಾಗಿ ಆಯೋಜಿಸಲಾಯಿತು..

news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಉಪಸ್ಥಿತರಿದ್ದು, ನಿಕಟಪೂರ್ವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಹೇಮಂತ್ ಎನ್. ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿ, ಸಾರ್ವಜನಿಕ ಆಡಳಿತ ಹಾಗೂ ಸೇವಾ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಸ್ಮರಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ರವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಿವಮೊಗ್ಗ ಜಿಲ್ಲೆಯ ಆಡಳಿತದಲ್ಲಿ ಯಶಸ್ವಿಯಾಗಿ ಹಾಗೂ ಜನಪರವಾಗಿ ಸೇವೆ ಸಲ್ಲಿಸಲು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್, ಸಿಇಒ ಶ್ರೀಕಾಂತ್, ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ಕುಮಾರ್, ಕಾರ್ಯದರ್ಶಿಗಳಾದ ಆರ್. ಪಾಪಣ್ಣ, ಖಜಾಂಚಿಗಳಾದ ಡಾ. ಸಿ.ಎ. ಹಿರೇಮಠ್, ವಕೀಲರಾದ ಶ್ರೀಪಾಲ್, ಸಿದ್ದಬಸಪ್ಪ ಬಿ. ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.




