ತೀರ್ಥಹಳ್ಳಿ : ಹುಂಚದಕಟ್ಟೆಯ ಶ್ರೀ ರಾಮನಸರ ನಾಗದೇವತೆ ಸನ್ನಿಧಿಯಲ್ಲಿ ಅ.20 ರಂದು 21ನೇ ವರ್ಷದ ನವರಾತ್ರಿ ಮಹೋತ್ಸವ.
news.ashwasurya.in
ಚಂಡಿಕಾ ಹೋಮ, ದುರ್ಗಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಕ್ತರಿಗೆ ಅನ್ನಸಂತರ್ಪಣೆ…
ಅಶ್ವಸೂರ್ಯ/ತೀರ್ಥಹಳ್ಳಿ : ಶರನ್ನವರಾತ್ರಿಯ ಪವಿತ್ರ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮದ ಶ್ರೀ ರಾಮನಸರ ನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸನ್ನಿಧಿಯಲ್ಲಿ ಅಕ್ಟೋಬರ್ 20ರಂದು 21ನೇ ವರ್ಷದ ನವರಾತ್ರಿ ಮಹೋತ್ಸವವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಮಹೋತ್ಸವದ ಅಂಗವಾಗಿ ಅಕ್ಟೋಬರ್ 20ರ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಚಂಡಿಕಾ ಹೋಮ, ಚಂಡಿಕಾ ಪಾರಾಯಣ ಹಾಗೂ ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ರಾತ್ರಿ ದೇವಿಗೆ ಲಕ್ಷ್ಮೀನಾರಾಯಣ ಹೃದಯ ಪಾರಾಯಣ, ದುರ್ಗಾ ಹೋಮ ಹಾಗೂ ದೀಪ ನಮಸ್ಕಾರ ನಡೆಯಲಿವೆ.
ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ. ಧಾರ್ಮಿಕ ಕಾರ್ಯಕ್ರಮಗಳನ್ನು ಗುರುಗಳಾದ ಮುರಳೀಧರ ಕೆದ್ಲಾಯ ಹಾಗೂ ದೇವಸ್ಥಾನದ ನಿತ್ಯ ಅರ್ಚಕರಾದ ಸುರೇಶ್ ಭಟ್, ಶಂಕರ ಭಟ್ ಮತ್ತು ರಮೇಶ್ ಭಟ್ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ ಉಪಸ್ಥಿತರಿರಲಿದ್ದಾರೆ.
ನವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಮಹೋತ್ಸವದ ವ್ಯವಸ್ಥಾಪಕರಾದ ಸುನಂದಮ್ಮ, ನಾಗರಾಜ್ ಹಾಗೂ ಪಾತ್ರಿ ಚಂದ್ರಶೇಖರ್ (ಪುಟ್ಟಣ್ಣ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

