40 ಶಾಸಕರಿಗೆ ನಿಗಮ ಮಂಡಳಿ ಸ್ಥಾನಮಾನ; ಎರಡು ಮೂರು ದಿನಗಳಲ್ಲಿ ಅಂತಿಮ ಪಟ್ಟಿ ಬಿಡುಗಡೆ ಸಾಧ್ಯತೆ. ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರಿಗೂ ಒಲಿಯಲಿದೆ ನಿಗಮ ಮಂಡಳಿ ಸ್ಥಾನಮಾನ?

40 ಶಾಸಕರಿಗೆ ನಿಗಮ ಮಂಡಳಿ ಸ್ಥಾನಮಾನ; ಎರಡು ಮೂರು ದಿನಗಳಲ್ಲಿ ಅಂತಿಮ ಪಟ್ಟಿ ಬಿಡುಗಡೆ ಸಾಧ್ಯತೆ.

ಬೆಂಗಳೂರು; ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ.ಬುಧವಾರ ನಗರಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಮಾತುಕತೆಯನ್ನು ನೆಡೆಸಿದ್ದಾರೆ. ಈ ಹಿಂದೆಯೆ ನಿಗಮ ಮಂಡಳಿ ಸ್ಥಾನಮಾನಕ್ಕೆ ಸಂಭಂದಿಸಿದಂತೆ ಎರಡು ಸುತ್ತಿನ ಚರ್ಚೆಗಳು ನಡೆದಿದ್ದು, ಬುಧವಾರ ನಡೆದ ಸಭೆ ಬಹುತೇಕ ಅಂತಿಮ ಎಂದು ಹೇಳಲಾಗಿದೆ. ಎರಡರಿಂದ-ಮೂರಕ್ಕೂ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರನ್ನು ನಿಗಮ ಮಂಡಳಿಗಳಿಗೆ ಪರಿಗಣಿಸಲಾಗುತ್ತಿದೆ. ಇದರಲ್ಲಿ ನಾಲ್ಕೈದು ಮಂದಿ ವಿಧಾನಪರಿಷತ್ ಸದಸ್ಯರೂ ಸೇರಿದ್ದಾರೆ.

ಸಚಿವ ಸಂಪುಟದಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸಲು ನಿಗಮ ಮಂಡಳಿಗಳ ಸ್ಥಾನಮಾನ ಕೊಟ್ಟು ಸಮಾಧಾನ ಪಡಿಸಲು ಕಾಂಗ್ರೆಸ್ ಮುಂದಾಗಿದೆ. ಮೂಲಗಳ ಪ್ರಕಾರ ಬೇಳೂರು ಗೋಪಾಲಕೃಷ್ಣ, ಬಸನಗೌಡ ದದ್ದಲ್, ಯಶವಂತರಾಯ ಗೌಡ ವಿಠಲಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್,
ಪ್ರಕಾರ ಪ್ರಕಾಶ್‍ಕೋಳಿವಾಡ, ವಿಜಯಾನಂದ ಕಾಶಪ್ಪನವರ್, ಎಂ.ವೈ.ಪಾಟೀಲ್, ಅಲ್ಲಂಪ್ರಭು ಪಾಟೀಲ್,
ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ್ ಮಾನೆ, ಜಿ.ಎನ್.ಗಣೇಶ್, ಈ ತುಕಾರಾಮ್, ಟಿ.ರಘುಮೂರ್ತಿ, ಟಿ.ಡಿ.ರಾಜೇಗೌಡ, ಡಾ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಕೆ.ವೈ.ನಂಜೇಗೌಡ, ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಬಿ.ಶಿವಣ್ಣ, ಎಚ್.ಸಿ.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ವಿನಯ್‍ಕುಲಕರ್ಣಿ, ನರೇಂದ್ರಸ್ವಾಮಿ ಅವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿ ಸೇರಿವೆ.
ಮೊದಲರೆಡು ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರುಗಳ ನಡುವೆ ಹೊಂದಾಣಿಕೆಯಾಗಿರಲಿಲ್ಲ. ಇನ್ನೂ ಕೆಲವು ಹಿರಿಯರ ಹೆಸರುಗಳು ಬಿಟ್ಟುಹೋಗಿದ್ದವು. ಬಹಳಷ್ಟು ಮಂದಿ ತಮಗೆ ನಿಗಮ ಮಂಡಳಿ ಬೇಡ. ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿತ್ತು.
ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ.ವೇಣುಗೋಪಾಲ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಜತೆ ಚರ್ಚೆ ನಡೆಸಿ ಬಹುತೇಕ ಸ್ಪಷ್ಟ ನಿರ್ಣಯ ರೂಪಿಸಿದ್ದಾರೆ ಎನ್ನಲಾಗಿದೆ.
ಹೈಕಮಾಂಡ್‍ನ ಸಂದೇಶದೊಂದಿಗೆ ಬುಧವಾರ ಬೆಂಗಳೂರಿಗೆ ಆಗಮಿಸಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೋತೆಗೆ ಸಭೆನೆಡೆಸಿದ್ದಾರೆ. ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿದ್ದು ವರಿಷ್ಠರಿಗೆ ಕಳುಹಿಸಿಕೊಡಲಾಗಿದೆ. ವರಿಷ್ಠರು ಅಂಕಿತ ಹಾಕಲಿದ್ದು ಇನ್ನೆರಡು ದಿನಗಳಲ್ಲಿ ನೇಮಕಾತಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಆರ್ಥಿಕವಾಗಿ ಸುಸ್ಥಿಯಲ್ಲಿರುವ 90ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ನೇಮಕಾತಿ ನಡೆಯುವುದು ಖಚಿತವಾಗಿದ್ದು
ಮೊದಲ ಹಂತದಲ್ಲಿ 40ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಹಿರಿಯ ಶಾಸಕರನ್ನು ನೇಮಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ಪ್ರಮುಖ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದ್ದು ಕಾರ್ಯಕರ್ತರ ನೇಮಕಾತಿಯ ಕುರಿತಂತೆಯೂ ಸಭೆಯಲ್ಲಿ ಸುಧೀರ್ಘ ಚರ್ಚೆಯಾಗಿದೆ ಎಂದು ಹೇಳಲಾಗಿದೆ.

*********************************

ನಿಗಮ ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿ; ಸಂಭಾವ್ಯರ ಪಟ್ಟಿಯನ್ನು ಅಂತಿಮಗೊಳಿಸಿ ವರಿಷ್ಠರಿಗೆ ರವಾನಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ನಿಗಮ ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿ; ಸಂಭಾವ್ಯರ ಪಟ್ಟಿಯನ್ನು ಅಂತಿಮಗೊಳಿಸಿ ವರಿಷ್ಠರಿಗೆ ರವಾನಿಸಲಾಗಿದೆ: ಸಿಎಂ ಸಿದ್ದರಾಮಯ್ಯ

News.Ashwasurya.in

ಬೆಂಗಳೂರು: ನಿಗಮ ಮಂಡಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಸಂಬಂಧ ಕೇಂದ್ರ ನಾಯಕರಿಗೆ ಪಟ್ಟಿಯನ್ನು ಅಂತಿಮಗೋಳಿಸಿ ಕಳುಹಿಸಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರೊಂದಿಗೆ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಪಟ್ಟಿಯನ್ನು ವರಿಷ್ಠರಿಗೆ ರವಾನಿಸಲಾಗಿದೆ ಎಂದರು. ಹೈಕಮಾಂಡ್ ಅನುಮತಿ ನೀಡಿದ ನಂತರ ನಿಗಮ, ಮಂಡಳಿಗೆ ನೇಮಕಾತಿ ಮಾಡಲಾಗುವುದು ಎಂದು ಸ್ಪಷ್ಟಣೆ ನೀಡಿದರು.
ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ಕಲ್ಪಿಸಲಾಗುವುದು. 2 ಮತ್ತು ಮೂರನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ. ನಿಮಗ ಮಂಡಳಿ ನೇಮಕಾತಿಯಿಂದ ಪಕ್ಷಕ್ಕೆ ಅನುಕೂಲ ಆಗಲಿದೆ ಎಂದು ಸಿದ್ದರಾಮಯ್ಯ ವಿವರಣೆ ನೀಡಿದರು.
ನ.21ರಂದು ಬೆಂಗಳೂರಿಗೆ ಆಗಮಿಸಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ನಿಗಮ ಮಂಡಳಿಗಳಿಗೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂದು ಸಭೆ ನಡೆಸಿದ್ದರು. ಆ ನಂತರ ಸಂಭಾವ್ಯರ ಪಟ್ಟಿ ಸಿದ್ದಪಡಿಸಲಾಗಿತ್ತು. ಆದರೆ, ಕೆಲ ಗೊಂದಲಗಳ ಕಾರಣ ಇಂದು ಪುನಃ ಚರ್ಚಿಸಿದ್ದೇವೆ ಎಲ್ಲವನ್ನೂ ಬಗೆಹರಿಸಿ ಅಂತಿಮಗೋಳಿಸಲಾಗಿದೆ. ಅಂತಿಮ ಪಟ್ಟಿಯನ್ನು ಸುರ್ಜೇವಾಲರ ಮೂಲಕ ವರಿಷ್ಠರಿಗೆ ಕಳುಹಿಸಿಕೊಡಲಾಗಿದೆ

ಸುಧೀರ್ ವಿಧಾತ , ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!