ಮಂಡ್ಯ :ರೈಲ್ವೆ ಗೇಟ್ ಮುಚ್ಚಿದ್ದರೂ ಹಳಿ ದಾಟಲು ಯತ್ನ.! ಯುವತಿ ದುರ್ಮರಣ!
news.ashwasurya.in
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ಅಪಘಾತ ನಡೆದಿದೆ. ರೈಲು ವೇಗವಾಗಿ ಬರುತ್ತಿದ್ದರೂ ರೈಲ್ವೆ ಗೇಟ್ ಹಾಕಿದ್ದರು ಗಮನಿಸದೆ ಹಳಿ ದಾಟಲು ಯತ್ನಿಸಿರುವುದೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಪಘಾತದ ತೀವ್ರತೆಗೆ ಮೃತದೇಹ ಛಿದ್ರ ಛಿದ್ರವಾಗಿದ್ದು ಸ್ಥಳದಲ್ಲಿದ್ದವರು ಬೆಚ್ಚಿ ಬಿದ್ದಿದ್ದಾರೆ…

ಅಶ್ವಸೂರ್ಯ | ಮಂಡ್ಯ: ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿಯೊಬ್ಬಳು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಮಂಡ್ಯ ಜಿಲ್ಲೆಯ (Mandya) ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ನಡೆದಿದೆ. ರೈಲ್ವೆ ಗೇಟ್ ಹಾಕಿದ್ದರೂ ಅದನ್ನು ನಿರ್ಲಕ್ಷಿಸಿ ಹಳಿ ದಾಟಲು ಯತ್ನಿಸಿದ್ದರಿಂದ ದುರಂತ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ರೈಲ್ವೆ ಗೇಟ್ ಮುಚ್ಚಿದ್ದರೂ ಹಳಿ ದಾಟಲು ಯತ್ನಿಸಿದ 19 ವರ್ಷದ ಪದವಿ ವಿದ್ಯಾರ್ಥಿನಿ ಲಿಖಿತಾ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕಾಲೇಜು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಸಂಭವಿಸಿದೆ.

ರೈಲು ಬರುತ್ತಿದ್ದ ಹಿನ್ನೆಲೆ ಚಂದಗಿರಿಕೊಪ್ಪಲು ಬಳಿಯ ಲೆವೆಲ್ ಕ್ರಾಸಿಂಗ್ ಗೇಟ್ ಮುಚ್ಚಲಾಗಿತ್ತು. ಆದರೂ ಯುವತಿ ಹಳಿ ದಾಟಲು ಮುಂದಾಗಿದ್ದಾಳೆ. ರೈಲು ತೀರಾ ಹತ್ತಿರ ಬಂದಿದ್ದರೂ ಗಮನಿಸದೆ ಹಳಿ ದಾಟಲು ಯತ್ನಿಸಿದ ಪರಿಣಾಮ, ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಯುವತಿಯ ದೇಹ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.


