ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ! ಹೊಸ ತಿರುವು ಪಡೆದ ಈ ಪ್ರಕರಣ? ಒಂದೂವರೆ ಕೋಟಿ ಕಾರು ಯಾರಿಗೆ ಸೇರಿದ್ದು ?
News.Ashwasurya.in
ಈ ಘಟನೆಯ ಬಳಿಕ ಸೂರಜ್ ರೇವಣ್ಣ ಮಾದ್ಯಮದವರ ಮುಂದೆ ಮೊದಲು ಇದು ತಮ್ಮ ತಾಯಿಯ ಕಾರು ಎಂದು ಹೇಳಿದ್ದರು. ನಂತರ ಮಾಧ್ಯಮದವರ ಪ್ರಶ್ನೆಗೆ ಇಲ್ಲ ಇದು ನಮ್ಮ ತಾಯಿಯವರ ಸ್ನೇಹಿತರ ಕಾರು ಎಂದು ಹೇಳಿಕೆ ನೀಡಿ ಗೊಂದಲಕ್ಕೆ ಎಡೆ ಮಾಡಿದ್ದರು.ನಂತರದಲ್ಲಿ ಕಾರಿನ ಮಾಲೀಕತ್ವದ ಕುರಿತು ಪರಿಶೀಲನೆ ಮಾಡಿದಾಗ ಅದು ಆಫ್ರಾ ಇನ್ಫ ಎಂಜಿನಿಯರಿಂಗ್ ಕಂಪನಿ ಹೆಸರಿನಲ್ಲಿ ನೋಂದಣಿ ಆಗಿದೆಯಂತೆ! ಕಾರಿನ ಮಾಲಿಕತ್ವದ ಪರಿಶೀಲನೆಯಿಂದ ಪ್ರಕರಣ ಹೊಸ ತಿರುವು ಪಡೆದಿದೆ.
ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಕಾರಿಗೆ ಕಳೆದ ಎರಡುದಿನದ ಹಿಂದೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದ್ದು ಭವಾನಿ ಅವರು ಪ್ರಯಾಣಿಸುತ್ತಿದ್ದ ಕಾರು ಬಿಬಿಎಂಪಿಯ ಪ್ರಥಮ ದರ್ಜೆ ಗುತ್ತಿಗೆದಾರರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.ಆ ಕಾರನ್ನು ಭವಾನಿ ರೇವಣ್ಣ ಅವರಿಗೆ ಗುತ್ತಿಗೆದಾರರು ಕೊಟ್ಟಿದ್ಯಾಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿ.ಆರ್.ಮರಾಠೆ, ಸಾಮಾಜಿಕ ಕಾರ್ಯಕರ್ತ ರೊನಾಲ್ಡ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಭಾನುವಾರ ಮೈಸೂರು ಬಳಿ ಭವಾನಿ ರೇವಣ್ಣ ಅವರಿದ್ದ ಕಾರಿಗೆ ಬೈಕ್ ಸವರನೊಬ್ಬ ಡಿಕ್ಕಿ ಹೊಡೆದಿದ್ದ. ಬೈಕ್ ಸವಾರರ ವಿರುದ್ಧ ಭವಾನಿ ರೇವಣ್ಣ ಮನಸೊ ಇಚ್ಚೆ ರೆಗಾಡಿದ್ದರು. ಅವನ ಬೈಕ್ ಸುಟ್ಟಾಕಿ ಎಂದೆಲ್ಲಾ ಕೆಟ್ಟ ಪದಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಭವಾನಿ ರೇವಣ್ಣ ಚಿರಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.! ಆದರೆ ಭವಾನಿ ರೇವಣ್ಣ ಮಾತ್ರ ಕೂಗಾಡಿದರು ಯಾವ ಸಂದರ್ಭದಲ್ಲು ಇದು ತಮ್ಮ ಕಾರು ಎಂದು ಹೇಳಿರಲಿಲ್ಲ ಎಂದರು.
ಆದರೆ ನಂತರದಲ್ಲಿ ಮಾದ್ಯಮದವರ ಮುಂದೆ ಸೂರಜ್ ರೇವಣ್ಣ ಮೊದಲು ಇದು ತಮ್ಮ ತಾಯಿಯ ಕಾರು ಎಂದು ಹೇಳಿದ್ದರು. ನಂತರ ಮಾಧ್ಯಮದವರ ಪ್ರಶ್ನೆ ಮಾಡಿದಾಗ ಇಲ್ಲ ಇದು ತಮ್ಮ ತಾಯಿಯವರ ಸ್ನೇಹಿತರ ಕಾರು ಎಂದು ಹೇಳಿಕೆ ನೀಡಿ ಗೊಂದಲಕ್ಕೆ ಎಡೆ ಮಾಡಿದ್ದರು. ಕಾರಿನ ಮಾಲೀಕತ್ವದ ಕುರಿತು ಪರಿಶೀಲನೆ ಮಾಡಿದಾಗ ಅದು ಆಫ್ರಾ ಇನ್ಫ ಎಂಜಿನಿಯರಿಂಗ್ ಕಂಪನಿ ಹೆಸರಿನಲ್ಲಿ ನೋಂದಣಿ ಆಗಿದೆ. ಆ ಕಂಪನಿಯ ನಿರ್ದೇಶಕ ಅಭಿಜಿತ್ ಅಶೋಕ್ ಎನ್ನುವವರಾಗಿದ್ದು, ಅವರು ಬಿಬಿಎಂಪಿಯ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದಾರೆ ಎನ್ನುವುದು ತಿಳಿದು ಬಂದಿದೆ.
ಬಿಬಿಎಂಪಿಯ ಗುತ್ತಿಗೆದಾರ ಕಾರು ಭವಾನಿ ರೇವಣ್ಣ ಅವರ ಬಳಿ ಹೇಗೆ ಬಂತು? ಈ ಕಾರು ಉಡುಗೊರೆಯಾಗಿ ಬಂದಿದೆಯಾ!? ಎನ್ನುವ ಪ್ರಶ್ನೆ ಇದೀಗ ಮೂಡಿದೆ. ಆ ಗುತ್ತಿಗೆದಾರರಿಗೂ ರೇವಣ್ಣ ಕುಟುಂಬಕ್ಕೂ ಏನು ಸಂಬಂಧ? ಎನ್ನುವ ಪಶ್ನೆಯು ಹಲವರನ್ನು ಕಾಡಿದೆ. ಕಾಮಗಾರಿ ಪಡೆಯಲು ರೇವಣ್ಣ ಅವರ ಕುಟುಂಬದ ಸಹಾಯ ಇದೆಯಾ? ಕೋಟಿ ಕೋಟಿ, ಹಣ ಇದ್ದರೂ ಭವಾನಿ ರೇವಣ್ಣ ಸ್ನೇಹಿತರ ಕಾರು ಬಳಸುತ್ತಿರುವುದು ಏಕೆ? ಎಂಬೆಲ್ಲಾ ಪ್ರಶ್ನೆಗಳು ಹರಿದಾಡುತ್ತಿವೆ!? ಹೀಗಾಗಿ, ಈ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಅಪಘಾತಕ್ಕೀಡಾದ ಕಾರು ಒಂದೂವರೆ ಕೋಟಿ ಬೆಲೆ ಬಾಳುವಂತಹದ್ದು ಎಂದು ಭವಾನಿ ರೇವಣ್ಣ ಅವರೇ ಹೇಳಿರುವುದರಿಂದ ಈ ಕುರಿತು ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಸುಧೀರ್ ವಿಧಾತ , ಶಿವಮೊಗ್ಗ