ತಕ್ಷಣವೇ ಬರ ಪರಿಹಾರ ಹಣ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ : ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬರ ಪರಿಹಾರ ಹಣ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

news.ashwasurya.in

ದೆಹಲಿ ಡಿ,19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ಧಿ ಗೋಷ್ಠಿಯಲ್ಲಿ ತಿಳಿಸಿದರು.
ಪ್ರಧಾನಿ ಮೋದಿ ಅವರ ಭೇಟಿಯಾದ ನಂತರದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿ ಮುಖ್ಯಮಂತ್ರಿಗಳು ಭೇಟಿಯಾದ ಕಾರಣವನ್ನು ತಿಳಿಸಿದರು.


ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆ ನಡೆಸಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸ ಬೇಕೆಂದು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಸಿ ಪ್ರಧಾನಿಯವರಿಗೆ ಮನವಿಯನ್ನು ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದರು ತಿಳಿಸಿದರು.

1) ಬರ ಪರಿಹಾರದ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು,
ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು.

2) ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು.

3) ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು.

4) ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು
ಈ ಐದು ಬೇಡಿಕೆಗಳ ಈಡೇರುಕೆಗೆ ಮನವಿ ಅರ್ಪಿಸಿದ್ದೇವೆ.

5) ಬರ ಪರಿಹಾರ ಸಂಬಂಧ ಇವತ್ತಿನವರೆಗೂ ಹೈಲೆವೆಲ್ ಕಮಿಟಿ ಮೀಟಿಂಗ್ ಮಾಡಿಲ್ಲ. ಇದರಿಂದ ರಾಜ್ಯದ ರೈತರ ಸಂಕಷ್ಟಕ್ಕೆ ಕೇಂದ್ರದಿಂದ ಬರಬೇಕಾದ ಪರಿಹಾರ ಬರುತ್ತಿಲ್ಲ.
ಪ್ರಧಾನಿ ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿದ್ದಾರೆ. ಅಮಿತ್ ಶಾ ಅವರಿಗೆ ಸೂಚನೆ ನೀಡಲು ಮನವಿ ಮಾಡಿದ್ದೇವೆ.
ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ದಿನದಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಈ ಮನವಿಯನ್ನು ಮಾಡಿದ್ದೇವೆ. ಈ ಮನವಿ ಪುರಸ್ಕಾರ ಸಿಕ್ಕಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ.

ಇನೂ ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಕ್ಲಿಯರೆನ್ಸ್ ಕೊಡಿಸುವಂತೆ ಒತ್ತಾಯಿಸಿದ್ದೇವೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 5300 ಕೋಟಿ ಘೋಷಿಸಿದ್ದರು‌. ಇವರ ಘೋಷಣೆ ಆಧಾರದಲ್ಲಿ ಹಿಂದಿನ‌ ಮುಖ್ಯಮಂತ್ರಿ ಬೊಮ್ಮಾಯಿ ಅವರೂ ಕೂಡ 5300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ ಇದು ಘೋಷಣೆಯಾಗಿ ಉಳಿಯಬಾರದು, ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್ ಮೆಂಟ್. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ.
ಮೇಕೆದಾಟು ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಇದರಿಂದ ತಮಿಳುನಾಡಿಗೇ ಹೆಚ್ಚು ಅನುಕೂಲ. ನಮಗೆ ಕುಡಿಯುವ ನೀರಿನ ಜತೆಗೆ 400 ಮೆಘಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ. ವಿದ್ಯುತ್ ಉತ್ಪಾದನೆ ಬಳಿಕ ಈ ನೀರು ಕೂಡ ತಮಿಳುನಾಡಿಗೇ ಹೋಗ್ತದೆ. ಇದರಿಂದಲೂ ಅವರಿಗೇ ಅನುಕೂಲ.
ಮೇಕೆದಾಟು ಆದರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಿದ್ದೇವೆ.
ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳಿಗಾಗಿ ನಾವು ಸರ್ವ ಪಕ್ಷ ನಿಯೋಗದ ಜತೆ ಕೇಂದ್ರಕ್ಕೆ ಬರಲು ಸಿದ್ದರಿದ್ದೇವೆ.

ಹಾಗೆ ಮಾತು ಮುಂದುವರಿಸಿದ ಮುಖ್ಯಮಂತ್ರಿಗಳು
ಸಂಸತ್ತಿನ ಇತಿಹಾದಲ್ಲೇ ಮೊದಲ ಬಾರಿಗೆ 141 ಸಂಸದರನ್ನು ಒಂದೇ ಬಾರಿಗೆ ಅಮಾನತ್ತು ಮಾಡಿದ ಉದಾಹರಣೆ ಇಲ್ಲ. 141 ಮಂದಿ ಸಂಸದರನ್ನು ಅಮಾನತ್ತು ಮಾಡಿರುವುದು ಸರ್ವಾಧಿಕಾರವನ್ನೂ ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ ಅಂತ ಕರೆಯಲು ಸಾಧ್ಯವಿಲ್ಲ.ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ, ಒಳ್ಳೆಯ ಸರ್ಕಾರ ನೆಡೆಸಲು ಬಲಾಢ್ಯ ವಿರೋಧ ಪಕ್ಷ ಇದ್ದಾಗ ಮಾತ್ರ ಸಾಧ್ಯ.
ಸರ್ಕಾರದ ತಪ್ಪುಗಳನ್ನು ಹೇಳುವಂಥಾ ಆರೋಗ್ಯಪೂರ್ಣ ವಾತಾವರಣ ಇರಬೇಕು. ಅವರ ಪಕ್ಷದ ಸಂಸದರನ್ನೆ ಇಟ್ಟುಕೊಂಡು ಸಂಸತ್ ನಡೆಸುವುದು ನಾಚಿಕೆಗೇಡು.
ಜಾತಿ ಗಣತಿ ವರದಿ ಇನ್ನೂ ಕೊಟ್ಟಿಲ್ಲ. ಕೆಲವರು ಊಹೆ ಮಾಡಿಕೊಂಡು ವಿರೋಧ ಮಾಡ್ತಿದ್ದಾರೆ. ಅವರು ವರದಿ ಯಾವಾಗ ಕೊಡ್ತಾರೆ ಎನ್ನುವುದು ಖಚಿತವಾಗಿ ಗೊತ್ತಿಲ್ಲ ಎಂದರು.

Leave a Reply

Your email address will not be published. Required fields are marked *

Optimized by Optimole
error: Content is protected !!