ಸಂಸದರ ಅಮಾನತು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬಾರಿ ಪ್ರತಿಭಟನೆ: ಪ್ರತಿಭಟನೆಯ ಮುಂದಾಳತ್ವ ವಹಿಸಿದ ಹೆಚ್ ಎಸ್ ಸುಂದರೇಶ್

143ಕ್ಕೂ ಹೆಚ್ಚು ಸಂಸದರ ಅಮಾನತು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬಾರಿ ಪ್ರತಿಭಟನೆ: ಪ್ರತಿಭಟನೆಯ ಮುಂದಾಳತ್ವ ವಹಿಸಿದ ಹೆಚ್ ಎಸ್ ಸುಂದರೇಶ್

ಶಿವಮೊಗ್ಗ, ಡಿ.22- ವಿರೋಧಪಕ್ಷಗಳ 143 ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಿ ಸಂಸತ್ ಕಲಾಪ ನಡೆಸಿದ್ದನ್ನು ಖಂಡಿಸಿ ಇಂದು ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.


ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರೂ ಆಗಿರುವ ಹೆಚ್ ಎಸ್ ಸುಂದರೇಶ್ ಸೇರಿದಂತೆ ಹಲವು ಕಾಂಗ್ರೆಸ್ಸಿನ ಪ್ರಮುಖ ನಾಯಕರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಂಸತ್ ಕಲಾಪದಲ್ಲಿ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದೇ ವಿರೋಧಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಿದ್ದಲ್ಲದೆ ಅವರ ಅನುಪಸ್ಥಿತಿಯಲ್ಲಿ ಭಾರತೀಯ ನ್ಯಾಯಸಂಹಿತೆ, ಭಾರತೀಯ ನಾಗರಿಕ ಸುರಕ್ಷಾಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ ಹಾಗೂ ದೂರಸಂಪರ್ಕ ದಂತಹ ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಗಿದೆ.


ಐಪಿಸಿ, ಸಿಆರ್‍ಪಿಸಿ ಮತ್ತು ಸಾಕ್ಷ್ಯ ಕಾಯಿದೆಗಳಿಗೆ ಪರ್ಯಾಯವಾಗಿ ರೂಪಿಸಲಾಗಿರುವ ಮೂರು ಭಾರತೀಯ ಮಸೂದೆಗಳನ್ನು ವಿಪಕ್ಷಗಳ ರಚನಾತ್ಮಕ ಅಭಿಪ್ರಾಯಗಳಿಲ್ಲದೆ ಅಂಗೀಕರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‍ನ ಬಹುತೇಕ ಸಂಸದರನ್ನು ಸದನದಿಂದ ಹೊರಗಿಟ್ಟು, ಕಾಯಿದೆ ರೂಪಿಸಿರುವುದು ಇದೇ ಸಂದರ್ಭದಲ್ಲಿ ಇತರ ಪಕ್ಷಗಳ ನಾಯಕರುಗಳನ್ನೂ ಕೂಡ ಅಮಾನತುಗೊಳಿಸಿರುವುದು ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ಹೊರಹಾಕಿದ್ದಾರೆ.

142 ಸಂಸದರನ್ನು ಅಮಾನತುಗೊಳಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ ಸಂಸತ್ತನ್ನು ಸ್ಮಶಾನವನ್ನಾಗಿ ಮಾಡಿರುವ ಬಿ.ಜೆ.ಪಿ. ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರು ನೇತೃತ್ವ ದಲ್ಲಿ ಮಾಜಿ ಸಂಸದರಾದ
ಆಯನೂರು ಮಂಜುನಾಥ್, ಮಾಜಿ ಎಮ್ಎಲ್ಸಿ ಆರ್ ಪ್ರಸನ್ನ ಕುಮಾರ್, ಯುವ ಮುಖಂಡ ಕಲಿಂ ಪಾಷ,ಮಾಜಿ ಮೇಯರ್ ಮರಿಯಪ್ಪ, ಶಿ ಜು ಪಾಶ, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಪಿ ಗಿರೀಶ್ ಮತ್ತು ಮಾಜಿ ಮೇಯರ್ ನಾಗರಾಜ್ ಕಂಕಾರಿ ಇನ್ನಿತರ ಕಾಂಗ್ರೆಸ್ ಮುಖಂಡರ ಉಪಸ್ಥಿತಿ ಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಭವನ ದಿಂದ ಪ್ರತಿಭಟನೆ ಮೆರವಣಿಗೆ ಆರಂಭಗೊಂಡು ಬಾಲರಾಜ್ ಅರಸ್
ರಸ್ತೆ ಮೂಲಕ ಚಲಿಸಿ ನಂತರ ಮಹಾವೀರ ಸರ್ಕಲ್ ( ಕೋರ್ಟ್ ಸರ್ಕಲ್ ನಲ್ಲಿ ) ವರೆಗೂ ಪ್ರತಿಭಟನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಹಲವು ಪ್ರಮುಖರು ಉಪಸ್ಥಿತರಿದ್ದರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದರು

Leave a Reply

Your email address will not be published. Required fields are marked *

Optimized by Optimole
error: Content is protected !!