ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ : ಹೆಚ್.ಎಸ್. ಸುಂದರೇಶ್,ಜಿಲ್ಲಾಧ್ಯಕ್ಷರು ಕಾಂಗ್ರೆಸ್ ಪಾರ್ಟಿ

ನುಡಿದಂತೆ ನೆಡೆದ ಸರ್ಕಾರ ನಮ್ಮ ಕಾಂಗ್ರೆಸ್ ಸರ್ಕಾರ,

ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ : ಹೆಚ್.ಎಸ್. ಸುಂದರೇಶ್,ಜಿಲ್ಲಾಧ್ಯಕ್ಷರುಕಾಂಗ್ರೆಸ್ ಪಾರ್ಟಿ

News.Ashwasurya.in

SUDHIR VIDHATA9483165999

ಶಿವಮೊಗ್ಗ,ಜ 10: ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಚಾಲನೆಗೆ ದಿನಾಂಕ ನಿಗದಿಯಾಗಿದೆ ಈಗಾಗಲೇ ನಾಲ್ಕು ಗ್ಯಾರಂಟಿಗಳಿಗೆ ಚಾಲನೆ ನೀಡಿರುವ ರಾಜ್ಯಸರ್ಕಾರ ಈಗ 5ನೇ ಗ್ಯಾರಂಟಿಯ
ಉದ್ಘಾಟನೆಗೆ ಮುಂದಾಗಿದೆ,ಈ ಕಾರ್ಯಕ್ರಮವನ್ನು ಶಿವಮೊಗ್ಗದ ಫ್ರೀಡಮ್ ಪಾರ್ಕ್‍ನಲ್ಲಿ ಜನವರಿ12 ರಂದು ಬೆಳಿಗ್ಗೆ 11ಗಂಟೆಗೆ ಅದ್ದೂರಿಯಾಗಿ ನಡೆಯಲಿದ್ದು ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಸಂಘಟನ ಚತುರರಾದ ಹೆಚ್.ಎಸ್. ಸುಂದರೇಶ್ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.

ಅವರು ಮಂಗಳವಾರ ಶಿವಮೊಗ್ಗ ನಗರದ ಕಾಂಗ್ರೆಸ್ ಭವನದಲ್ಲಿ ನೆಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಯುವನಿಧಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಮಧು ಬಂಗಾರಪ್ಪ, ಡಾ.ಶರಣಪ್ರಕಾಶ್ ಪಾಟೀಲ್, ಡಾ.ಎನ್.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಅಧಿಕಾರಿಗಳು ಭಾಗವಹಿಸಲಿದ್ದು ಶಿವಮೊಗ್ಗ ಜಿಲ್ಲೆ ಅಲ್ಲದೆ ಇತರೆ ಜಿಲ್ಲೆಗಳಿಂದ ಸುಮಾರು 1ಲಕ್ಷಕ್ಕೂ ಹೆಚ್ಚು ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮತ್ತು ಸಾರ್ವಜನಿಕರು ಹಾಗೂ ಯುವಕರು ಭಾಗವಹಿಸಲಿದ್ದಾರೆ ಎಂದರು.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆಮಾಡಿದಂತೆ ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನೆಡೆದಿದೆ, ಈಗಾಗಲೇ 4 ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಚಾಲನೆಯಲ್ಲಿದ್ದು ಲಕ್ಷಾಂತರ ಮಂದಿ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಈಗ ನಿರುದ್ಯೋಗಿ ಯುವಕರಿಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದ್ದು ಈಗಾಗಲೇ ರಾಜ್ಯದಲ್ಲಿ ಲಕ್ಷಾಂತರ ಯುವಕರು ಇದಕ್ಕೆ ಅರ್ಜಿಹಾಕಿ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿದ್ದಾರೆ, ನಮ್ಮ ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಸಾವಿರಾರು ಜನ ನಿರುದ್ಯೋಗಿ ವಿಧ್ಯಾರ್ಥಿಗಳು ಅರ್ಜಿ ಹಾಕಿದ್ದಾರೆ. ಮುಖ್ಯಮಂತ್ರಿಗಳು ಈ ಜನಪ್ರಿಯ ಯೋಜನೆಗೆ ಜನವರಿ 12ನೇ ತಾರೀಖು ಶುಕ್ರವಾರದಂದು ಚಾಲನೆ ನೀಡಲಿದ್ದಾರೆ ಎಂದರು.

ಪ್ರಧಾನ ಮಂತ್ರಿಗಳು ವರ್ಷಕ್ಕೆ 10 ಸಾವಿರ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ, 10 ಸಾವಿರ ಉದ್ಯೋಗ ಸೃಷ್ಠಿ ಮಾಡುವುದಿರಲಿ, ಇರುವ ಉದ್ಯೋಗವನ್ನು ಕಸಿದುಕೊಂಡಿದ್ದಾರೆ ಇದು ದುರಂತವೆ ಹೌದು! ರಾಜ್ಯ ಸರ್ಕಾರ ಈಗ ನಿರುದ್ಯೋಗಿಗಳಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ತಂದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಂದ ದೂರ ಸರಿಯುತ್ತಿದ್ದರೆ ನಮ್ಮ ಸರ್ಕಾರದೇಡೆ ಜನರೆ ಬರುತ್ತಿದ್ದಾರೆ ಎಂದರು.

ಗುಜರಾತಿನ ಬಿಲ್ಕಿಶ್‍ಬಾನು ಪ್ರಕರಣವನ್ನೇ ತೆಗೆದುಕೊಂಡರೇ ಸಾಕು ಇದು ಗೊತ್ತಾಗುತ್ತದೆ. ಗುಜರಾತ್ ಸರ್ಕಾರ ಅಲ್ಲಿನ ಕೋರ್ಟ್ ಮೂಲಕ ಒತ್ತಡ ತಂದು ಆರೋಪಿಗಳನ್ನು ಬಿಡುಗಡೆ ಮಾಡಿತ್ತು. ಆದರೆ ಸುಪ್ರೀಂ ಕೋರ್ಟ್ ಆರೋಪಿಗಳನ್ನು ಮತ್ತೆ ಜೈಲಿಗೆ ಕಳುಹಿಸಿದೆ. ಉತ್ತರ ಪ್ರದೇಶದಲ್ಲಿಯೂ ಕೂಡ ಸಾಕಷ್ಟು ಅತ್ಯಾಚಾರಗಳಾಗಿವೆ. ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ರಕ್ಷಣೆ ನೀಡುವ ಸರ್ಕಾರವಾಗಿದೆ ಎಂದು ದೂರಿದರು.


ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಪ್ರಮುಖರಾದ ಕಲೀಂ ಪಾಶಾ, ಮಂಜುನಾಥ್ ಬಾಬು, ಮಧು ಹೆಚ್.ಎಂ., ಎನ್.ಡಿ.ಪ್ರವೀಣ್‍ಕುಮಾರ್, ಗಿರೀಶ್ ರಾವ್ ಮತ್ತು ಇನ್ನೂ ಮುಂತಾದ ನಾಯಕರು ಹಾಜರಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!