ಪ್ರವೀಣ್ ನೆಟ್ಟಾರು’ ಹತ್ಯೆ ಕೇಸ್ : ಅರಬ್ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳಿಗಾಗಿ ಎನ್ಐಎ ತೀವ್ರ ಶೋಧ

ಈ ಹತ್ಯೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ರಾಷ್ಟ್ರಾದ್ಯಂತ ಪ್ರತಿಭಟನೆಗಳು ನೆಡೆದಿದ್ದವು. ಈ ಪ್ರಕರಣವನ್ನು ಎನ್ಐಗೆ ಹಸ್ತಾಂತರಿಸುತ್ತಿದ್ದಂತೆ ಹಂತಕರ ಪಡೆ ದಿಕ್ಕೆಟ್ಟು ತಲೆಮರೆಸಿಕೊಂಡಿದ್ದರು. ಈಗಾಗಲೇ ಈ ಹತ್ಯೆಗೆ ಸಂಭಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂಳಿದ ಆರೋಪಿಗಳಿಗೆ ನ್ಯಾಯಾಲಯಕ್ಕೆ ಬಂದು ಶರಣಾಗಲು ಜೂನ್ 30 ತಾರೀಖಿನ ವರೆಗೂ ಗಡುವು ನೀಡಲಾಗಿದೆ………

ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು

ಪ್ರವೀಣ್ ನೆಟ್ಟಾರು ಹತ್ಯೆಯಾದ ಸ್ಥಳ

ಮಂಗಳೂರು : ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಎನ್ಐಎ ( NIA) ತೀವ್ರ ಶೋಧ ನಡೆಸುತ್ತಿದೆ.
ತಲೆಮರೆಸಿಕೊಂಡ ಆರೋಪಿಗಳು ಅರಬ್ ರಾಷ್ಟ್ರದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ನೇಪಾಳದ ಮೂಲಕ ವಿವಿಧ ಅರಬ್ ದೇಶಗಳಿಗೆ ತಲೆಮರೆಸಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಉಮರ್ ಫಾರುಕ್, ಅಬುಬಕರ್ ಸಿದ್ದಿಕ್,ಮೊಹಮ್ಮದ್ ಮುಸ್ತಾಫಾ, ತುಘೈಲ್ ಎಂಬ ಆರೋಪಿಗಳಿಗೆ ಎನ್ ಐ ಎ ತೀವ್ರ ಶೋಧ ನಡೆಸುತ್ತಿದೆ. ನಾಲ್ವರ ಪತ್ತೆಗೆ ಒಟ್ಟು 14 ಲಕ್ಷ ರೂ ಬಹುಮಾನ ಘೋಷಣೆ ಮಾಡಲಾಗಿದೆ.‘
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಕೋರ್ಟ್ ಗೆ ಶರಣಾಗದಿದ್ದರೆ ಮನೆ ಜಪ್ತಿ ಮಾಡಲಾಗುತ್ತದೆ ಎಂದು ಎನ್ಐಎ ( NIA) ಖಡಕ್ ಎಚ್ಚರಿಕೆ ನೀಡಿದೆ.
ಜೂನ್ 30 ರ ಒಳಗೆ ಆರೋಪಿಗಳು ಎನ್ ಐ ಎ ನ್ಯಾಯಾಲಯಕ್ಕೆ ಹಾಜರಾಗಬೇಕು, ಇಲ್ಲವಾದಲ್ಲಿ ಮನೆ ಜಪ್ತಿ ಮಾಡಲಾಗುತ್ತದೆ ಎಂದು ಎನ್ಐಎ ಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ಅಧಿಕಾರಿಗಳು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿದ್ದರು.
ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಚಿಕನ್ ಅಂಗಡಿ ನಡೆಸುತ್ತಿದ್ದ 31 ವರ್ಷದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಬೈಕಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದರು.
ಈ ಹತ್ಯೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ರಾಷ್ಟ್ರಾದ್ಯಂತ ಪ್ರತಿಭಟನೆಗಳು ನೆಡೆದಿದ್ದವು. ಈ ಪ್ರಕರಣವನ್ನು ಎನ್ಐಗೆ ಹಸ್ತಾಂತರಿಸುತ್ತಿದ್ದಂತೆ ಹಂತಕರ ಪಡೆ ದಿಕ್ಕೆಟ್ಟು ತಲೆಮರೆಸಿಕೊಂಡಿದ್ದರು. ಈಗಾಗಲೇ ಈ ಹತ್ಯೆಗೆ ಸಂಭಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂಳಿದ ಆರೋಪಿಗಳಿಗೆ ನ್ಯಾಯಾಲಯಕ್ಕೆ ಬಂದು ಶರಣಾಗಲು ಜೂನ್ 30 ತಾರೀಖಿನ ವರೆಗೂ ಗಡುವು ನೀಡಲಾಗಿದೆ.ಎಲ್ಲವನ್ನೂ 30ನೇ ತಾರೀಖಿನ ವರೆಗೆ ಕಾದು ನೋಡಬೇಕಿದೆ.



ಸುಧೀರ್ ವಿಧಾತ, ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!