ಗುಂಡೇಟು ಬಿದ್ದಿದ್ದ ರೌಡಿಶೀಟರ್ ಆಸ್ಪತ್ರೆಯಿಂದ ಎಸ್ಕೇಪ್.!

ಗುಂಡೇಟು ಬಿದ್ದಿದ್ದ ರೌಡಿಶೀಟರ್ ಆಸ್ಪತ್ರೆಯಿಂದ ಎಸ್ಕೇಪ್.!

News.Ashwasurya.in

ಚಿಕ್ಕಮಗಳೂರು: ಕೊಲೆಯತ್ನ ಸೇರಿದಂತೆ ಸಾಕಷ್ಟು ಪ್ರಕರಣಗಳಲ್ಲಿ ಆರೋಪಿಯಾಗಿ ಪೋಲಿಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ರೌಡಿಶೀಟರ್ ನನ್ನು ಇತ್ತೀಚೆಗೆ ಬಂಧಿಸಲು ಮುಂದಾಗಿದ್ದರು ಆ ಸಮಯದಲ್ಲಿ ಆರೋಪಿ ತಪ್ಪಿಸಿಕೊಂಡು ಹೋಗಲು ಮುಂದಾದಾಗ ಪೊಲೀಸರು ರಿವಲ್ವಾರ್ ನಿಂದ ಕಾಲಿಗೆ ಗುಂಡು ತೂರಿಸಿ ಬಂಧಸಿ ಆಸ್ಪತ್ರೆಗೆ ದಾಖಲಿಸಿದ್ದರು, ಚಿಕಿತ್ಸೆ ಪಡೆಯುತ್ತಿದ್ದ ವೇಳೆ ರೌಡಿಶೀಟರ್ ಪೊಲೀಸರನ್ನು ಯಾಮಾರಿಸಿ ಎಸ್ಕೇಪ್ ಆಗಿರುವ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿಯ ಮಾಗಲು ಗ್ರಾಮದ ನಿವಾಸಿ ಪೂರ್ಣೇಶ್ ಎಂಬಾತನೆ ರೌಡಿಶೀಟರ್,ಈತ ಪೊಲೀಸರ ಕಣ್ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದನೆ! ಇತ್ತೀಚೆಗೆ ಈತನನ್ನು ಬಂಧಿಸಲು ಹೋದಾಗ ಗುಂಟೇಟಿನಿಂದ ಗಾಯಗೊಂಡಿದ್ದ ಆರೋಪಿಗೆ ಚಿಕಿತ್ಸೆ ಕೊಡಿಸಲು ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು ಈತನಿಗೆ ಕಳೆದ ಒಂದು ತಿಂಗಳಿನಿಂದಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೋಡಿಸಲಾಗುತ್ತಿತ್ತು, ಆರೋಪಿ ಪೂರ್ಣೇಶ್ ಇತ್ತೀಚೆಗೆ ಸ್ವಲ್ಪ ಚೇತರಿಸಿಕೊಂಡಿದ್ದನಂತೆ. ಶುಕ್ರವಾರ ಮುಂಜಾನೆ ಪೊಲೀಸರ ಭದ್ರತೆಯಲ್ಲಿದ್ದಾಗಲೆ ಆಸ್ಪತ್ರೆಯಿಂದ ಪೂರ್ಣೇಶ್ ಎಸ್ಕೇಪ್ ಆಗಿದ್ದಾನೆಂದು ತಿಳಿದು ಬಂದಿದೆ.
ಪೂಣೇಶ್ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 3 ಕೊಲೆ ಯತ್ನ ಪ್ರಕರಣ, ಪೊಲೀಸರ ಮೇಲೆ ಹಲ್ಲೆ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ.ಕಳೆದ ಕೆಲ ವರ್ಷಗಳ ಹಿಂದೆ ಈತನ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಪೂಣೇಶ್ ತನ್ನ ಮನೆ ಸಮೀಪದ ಕಾಡನ್ನೇ ತನ್ನ ಅಡಗುತಾಣ ಮಾಡಿಕೊಂಡಿದ್ದನಂತೆ ಯಾರ ಕಣ್ಣಿಗೂ ಬೀಳದಂತೆ ತಲೆ ಮರೆಸಿಕೊಂಡಿದ್ದ ಈತ ಕಾಡಿನಲ್ಲಿ ರಾತ್ರಿ ವೇಳೆ ಮರದ ಕೊಂಬೆಗಳ ಮೇಲೆ ಮಲಗುತ್ತಿದ್ದನಂತೆ!ಯಾರ ಕಣ್ಣಿಗೆ ಬೀಳದ ಹಾಗೆ ಆಗಾಗ್ಗೆ ತನ್ನ ಮನೆಗೆ ಹೋಗಿಬರುತ್ತಿದ್ದನಂತೆ! ಈತನ ಪತ್ತೆಗೆಗಾಗಿ ಪೊಲೀಸರು ಬಲೆ ಬೀಸಿದ್ದರೂ ಅನೇಕ ವರ್ಷಗಳಿಂದ ಪೊಲೀಸರ ಕಣ್ಣಿಗೆ ಬೀಳದೇ ತಲೆ ಮರೆಸಿಕೊಂಡಿದ್ದನಂತೆ.
ಇತ್ತೀಚೆಗೆ ಖಚಿತ ಮಾಹಿತಿ ಅಧಾರದ ಮೇಲೆ ಪೊಲೀಸರು ಮಾಗಲು ಗ್ರಾಮದಲ್ಲಿದ್ದ ರೌಡಿಶೀಟರ್ ಮನೆಯ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲೇ ಇದ್ದ ಪೂರ್ಣೇಶನಿಗೆ ಪೊಲೀಸರು ಶರಣಾಗುವಂತೆ ಸೂಚನೆ ನೀಡಿದ್ದಾರೆ.ಪೋಲಿಸರ ಮಾತನ್ನು ಧಿಕ್ಕರಿಸಿದ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ತೂರಿಸಿದ್ದರು.ರೌಡಿಶೀಟರ್ ಪೂಣೇಶ್ ಕಾಲಿಗೆ ಗುಂಡೇಟು ಬಿದ್ದ ಪರಿಣಾಮ ಓಡಲಾಗದೇ ನೆಲಕ್ಕೆ ಕುಸಿದು ಬಿದ್ದಿದ್ದ ಇತನನ್ನು ಪೊಲೀಸರು ಬಂಧಿಸಿದ್ದರು.
ಗುಂಡೇಟಿನಿಂದ ಪೂರ್ಣೇಶ್ ಕಾಲಿಗೆ ಗಾಯವಾಗಿದ್ದ ಕಾರಣಕ್ಕೆ ಆತನನ್ನು ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಕಳೆದ ಒಂದು ತಿಂಗಳಿಂದಲು ಪೋಲಿಸರ ಕಾವಲಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇತ್ತೀಚೆಗೆ ಕೊಂಚ ಚೇತರಿಸಿಕೊಂಡಿದ್ದ ಈತ ಕಳೆದ ಶುಕ್ರವಾರ ( 12ನೇ ತಾರೀಖು ) ನಸುಕಿನ ವೇಳೆಯಲ್ಲಿ ಕಾವಲಿದ್ದ ಪೋಲಿಸರನ್ನು ಯಾಮಾರಿಸಿ ಎಸ್ಕೇಪ್ ಆಗುವಲ್ಲಿ ಯಶಸ್ವಿಯಾಗಿದ್ದಾನೆ. ಸಾಕಷ್ಟು ವರ್ಷಗಳಿಂದ ತಲೆಮರೆಸಿಕೊಂಡವನನ್ನು ಬಂಧಿಸಿದ್ದ ಪೋಲಿಸರು ಮತ್ತೆ ತಪ್ಪಿಸಿಕೊಂಡು ಹೋಗುವುದಕ್ಕೆ ಬಿಟ್ಟು ದೊಡ್ಡತಪ್ಪು ಮಾಡಿದ್ದಾರೆ,
ಈಗ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ, ಈತನ ಸುಳಿವು ಪತ್ತೆಯಾದಲ್ಲಿ 9480805100, 8277991000, 08266: 250666 ಸಂಖ್ಯೆಗೆ ಮಾಹಿತಿ ನೀಡಬೇಕೆಂದು ಪೊಲೀಸ್ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!