ಸೌಜನ್ಯ ಅವರ ಮನೆಯ ಬಳಿಯಲ್ಲೇ ಆಕೆಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ…!

ಹನ್ನೊಂದು ವರ್ಷದ ಹಿಂದೆ ಹತ್ಯೆಯಾದ ಸೌಜನ್ಯ

ಒಂದು ದಶಕದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯನ್ನೆ ಆತಂಕದಲ್ಲಿ ಮುಳುಗಿಸಿದ್ದ ಸೌಜನ್ಯಾ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ, 2012ರ ಅಕ್ಟೋಬರ್ 9 ರಂದು ಕಾಣೆಯಾಗಿದ್ದಳು. ಆ ಕುರಿತು ಆಕೆಯ ತಂದೆ ಚಂದ್ರಪ್ಪಗೌಡ ಅದೇ ದಿನ ಬೆಳ್ತಂಗಡಿ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. 
ಅಂದು ಪತ್ತೆಯಾಗದ ಸೌಜನ್ಯಾ ಅಕ್ಟೋಬರ್‌ 10 ರಂದು ಹತ್ತಿರದ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಳು..!

ಕಾಡಿನಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಸೌಜನ್ಯ ಮೃತದೇಹ ಪತ್ತೆ.!

ಅಮಾಯಕ ಯುವತಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ಸಿಐಡಿಗೆ ತನಿಖೆಯನ್ನು ವರ್ಗಾಯಿಸಲಾಗಿತ್ತು. ಘಟನೆ ಬಳಿಕ ಕರಾವಳಿಯಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯಿತು. ಅದರ ಪರಿಣಾಮ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 
ಪ್ರಕರಣವನ್ನು ಸ್ಥಳೀಯ ಪೊಲೀಸರು, ಸಿಐಡಿ ತನಿಖೆ ನಡೆಸಿದ ಬಳಿಕ ಸಿಬಿಐ ತನಿಖೆ ನಡೆಸಿತ್ತು. ಸಂತೋಷ್‌ ರಾವ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಈ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ಒಮ್ಮೆ ಸಿಬಿಐ ತನಿಖೆ ನಡೆಸಿರುವ ಪ್ರಕರಣವನ್ನು ಮರು ತನಿಖೆಗೆ ವಹಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ಮರು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು.
ಆದರೆ ಇದೀಗ ಸೌಜನ್ಯಾ ಅವರ ಸಮಾಧಿಯ ಬಳಿಯಲ್ಲೇ ಆಕೆಯ ಅತಿದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ. ಆಕೆ ನಮಗೆ ಒಂದು ಶಕ್ತಿಯಾಗಲಿದ್ದಾಳೆ. ಆಕೆಯ ದೇವಸ್ಥಾನ ಮಾಡುತ್ತೇವೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ,ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಕೂಡ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು ಎಂದು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರು ಹೇಳಿದ್ದಾರೆ. 
ಅಲ್ಲದೆ ಕಾಶ್ಮೀರ ಫೈಲ್ ಅಂತೆ ಸೌಜನ್ಯಳ ಕಥನವನ್ನು ಸಿನಿಮಾ ಮಾಡಬೇಕು ಇದರಿಂದಾಗಿ ಸತ್ತ ಸೌಜನ್ಯಳ ಆತ್ಮಕ್ಕೆ ಶಾಂತಿ ಸಿಗಬೇಕು. ಆರೋಪಿ ಸಂತೋಷ್‌ ರಾವ್‌ ತಪ್ಪಿತಸ್ಥ ಅಲ್ಲ ಎಂಬುದನ್ನು ನಾವು 10 ವರ್ಷ ಹಿಂದೆಯೇ ಹೇಳಿದ್ದೇವೆ. ಆದರೆ, ಪೊಲೀಸರು ಒತ್ತಡಕ್ಕೆ ಮಣಿದು ಸಂತೋಷ್‌ ರಾವ್‌ ಅವರನ್ನು ತಪ್ಪಿತಸ್ಥನಾಗಿಸಿ, ನಿಜವಾದ ಅಪರಾಧಿಗಳನ್ನು ರಕ್ಷಿಸಲು ವ್ಯವಸ್ಥೆ ಮಾಡಿಕೊಂಡಿದ್ದರು. 
ನಿಜ ಆರೋಪಿಗಳ ವಿರುದ್ಧದ ಎಲ್ಲಾ ಸಾಕ್ಷ್ಯಗಳನ್ನು ಹಂತಹಂತವಾಗಿ ನಾಶಪಡಿಸಿದ್ದರು ಎಂದು ಮಹೇಶ್‌ ಶೆಟ್ಟಿ ಆರೋಪಿಸಿದರು. ನಮ್ಮ ಹೋರಾಟ ಉಸಿರು ಇರುವವರೆಗೆ ನಡೆಯಲಿದೆ. ಮುಂದಿನ ಹಂತವಾಗಿ ಸೌಜನ್ಯಾ ಅವರ ಮನೆಯ ಬಳಿಯಲ್ಲೇ ಆಕೆಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ. ಆಕೆ ಒಂದು ಶಕ್ತಿಯಾಗಲಿದ್ದಾಳೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ, ಅತ್ಯಾಚಾರ ನಡೆಸಿ ಕೊಲೆ ಮಾಡಿ ಪಾತಕಿಗಳಿಗೆ ಸಹ ಈ ಹಾದಿಯಲ್ಲಿ ಸಾಗುವಾಗ ಇದನ್ನು ನೋಡಿಯೇ ಮಾಡಿದ ತಪ್ಪಿನ ಅರಿವಾಗಿ ಮುಂದೆ ಸಾಗುವಂತಾಗಬೇಕು. ಧರ್ಮದ ಹೆಸರಿನಲ್ಲಿ ನಡೆಯುವ ಭೀಕರತೆಯ ಅರಿವು ಎಲ್ಲರಿಗೂ ಆಗಬೇಕು ಎಂದು ಅಲ್ಲಿನ ಜನರು ಅಭಿಪ್ರಾಯ ಪಟ್ಟಿದ್ದಾರೆ

ಹೋರಾಟದ ಧ್ವನಿಗಳಿಗೆ ಬೆಲೆ‌ ಇಲ್ಲ

ಹನ್ನೊಂದು ವರ್ಷದ ನಂತರ ಸಂತೋಷ ರಾವ್ ನಿರಪರಾಧಿ ಎಂದು ತೀರ್ಪು ನೀಡಿದ ಸಿಬಿಐ ನ್ಯಾಯಾಲಯ

ಬೆಂಗಳೂರು : ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಆರೋಪಿ ಸಂತೋಷ್‌ ರಾವ್ ದೋಷಮುಕ್ತ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಇಂದು‌ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಆಗಿದ್ದ ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳ ಬಳಿಕ ತೀರ್ಪು ನೀಡಿದೆ.
ಬೆಂಗಳೂರು ಸಿಬಿಐ ಕೋರ್ಟ್‌ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದೆ. ಆರೋಪಿ ಸಂತೋಷ್‌ ರಾವ್‌ ನನ್ನು ಖುಲಾಸೆ ಮಾಡಿದೆ. ಆರೋಪಿ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಹಿನ್ನೆಲೆ ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿ.ಬಿ ಸಂತೋಷ್‌ ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ ಏನು?
ಮೃತ ಸೌಜನ್ಯ ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ. ಈಕೆಯು ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿತ್ತು. ಮನೆಗೆ ಹೋಗುವಾಗ ನಾಪತ್ತೆಯಾಗಿದ್ದ ಸೌಜನ್ಯ, ಮರು ದಿನ ಧರ್ಮಸ್ಥಳದ ಮಣ್ಣಸಂಕ ಬಳಿ ಶವ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ದೋಷಮುಕ್ತನಾಗಿರುವ ಸಂತೋಷ್ ರಾವ್ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ. ಸೌಜನ್ಯ ಸಾವಿನ ಬಳಿಕ ಸ್ಥಳೀಯರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಪ್ರಕರಣವನ್ನು ಸಿಐಡಿಗೆ ನೀಡಲಾಗಿತ್ತು. ಬಳಿಕ, ಸಿಬಿಐಗೆ ಕೊಡಲಾಗಿತ್ತು.

———————-
” ಬಾಳು ಬೆಳಗುವ ಮುನ್ನ. ಬದುಕು ಸಿಹಿಯಾಗುವ ಮುನ್ನ. ಮನದಂಗಳದ ಮಾಮರದಲ್ಲಿ ಆಸೆಗಳು ಚಿಗುಡೊಡೆಯುವ ಮುನ್ನ. ವಿಧಿಯ ಕ್ರೂರ ಆಟಕ್ಕೆ ಬಲಿಯಾಗಿರುವ ನಿನು ಮತ್ತೊಮ್ಮೆ ಹುಟ್ಟಿ ಬಾ ಸೌಜನ್ಯ ಈ ಭೂಮಿಯ‌ ಮೇಲೆ ಬದುಕುವ ಹಕ್ಕು ನಿನಗಿದೆ. ನಿನಗಾದ ಅನ್ಯಾಯಕ್ಕೆ ಅತ್ಯಾಚಾರಿ ಹಂತಕರಿಗೆ ನಿನೆ ಶಿಕ್ಷೆ ಕೊಡುವಂತಾಗಲಿ…” ಸಹೋದರಿ

ಸುಧೀರ್ ವಿಧಾತ , ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!