ಬಿಜೆಪಿ ಮುಖಂಡ ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ:ಈ ಪ್ರಕರಣದ ಆರೋಪಿಗಳಾದ 15 ಪಿಎಫ್ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೇರಳ ನ್ಯಾಯಲಯ.

ಕೇರಳ:  ಬಿಜೆಪಿ ಮುಖಂಡ ವಕೀಲ ರಂಜಿತ್ ಶ್ರೀನಿವಾಸನ್‌ ಅವರನ್ನು ಹತ್ಯೆಗೈದ ಆರೋಪದ ಮೇಲೆ 15 ಮಂದಿ ಪಿಎಫ್‌ಐ ಸದಸ್ಯರಿಗೆ ಕೇರಳ ನ್ಯಾಯಾಲಯ ಇಂದು(ಜ.30) ಮರಣದಂಡನೆ ಶಿಕ್ಷೆ ವಿಧಿಸಿದೆ.

2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ದೊಂದಿಗೆ ಸಂಬಂಧ ಹೊಂದಿರುವ 15 ಮಂದಿಗೆ ಕೇರಳ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ವಿಜಿ ಶ್ರೀದೇವಿ ಅವರು ಈ ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ಕೋರಿತ್ತು. ವ್ಯಕ್ತಿಯನ್ನು ಮಗು, ಹೆಂಡತಿ ಮುಂದೆಯೇ ಹತ್ಯೆಗೈಯಲಾಗಿತ್ತು.
ಕೇರಳದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣದಲ್ಲಿ ಇಷ್ಟು ಮಂದಿಗೆ ಮರಣದಂಡನೆ ವಿಧಿಸಲಾಗಿದೆ. ಜನವರಿ 20 ರಂದು, ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಪ್ರಕರಣದಲ್ಲಿ ಪಿಎಫ್‌ಐ-ಎಸ್‌ಡಿಪಿಐಗೆ ನಂಟು ಹೊಂದಿರುವ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು.ನ್ಯಾಯಾಲಯ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.
2021 ರ ಡಿಸೆಂಬರ್ 19ರಂದು  ಬಿಜೆಪಿಯ ಒಬಿಸಿ ಮೋರ್ಚಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರನ್ನು ಭಾನುವಾರ ಬೆಳಿಗ್ಗೆ ಅವರ ಮನೆಯ ಹೊರಗೆ ಕೊಂದು ಹಾಕಲಾಗಿದೆ. ರಂಜಿತ್ ಶ್ರೀನಿವಾಸನ್ ಅವರು ಬೆಳಗಿನ ವಾಯು ವಿಹಾರಕ್ಕೆಂದು ಹೊರಗೆ ಬಂದಿದ್ದರು. ಆಗ ಎಂಟು ಜನರಿಂದ ಹಂತಕರ ಗುಂಪು ಅವರ ಮೇಲೆ ಮುಗಿಬಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದರು

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದ:15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೇರಳ ಕೋರ್ಟ್

News.Ashwasurya. in

SUDHIR VIDHATA

ಮಾವೇಲಿಕ್ಕರ (ಆಲೆಪ್ಪಿ): ಬಿಜೆಪಿ (BJP) ಮುಖಂಡ ಹಾಗೂ ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ 15 ಪಿಎಫ್‌ಐ ಕಾರ್ಯಕರ್ತರಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ವಿ.ಜಿ.ಶ್ರೀದೇವಿ ಶಿಕ್ಷೆ ಪ್ರಕಟಿಸಿದ್ದು, ಆರೋಪಿಗಳು ಯಾವುದೇ ರೀತಿಯ ಕರುಣೆಗೂ ಅರ್ಹರಲ್ಲ ಎಂದು ತೀರ್ಪು ನೀಡಿದರು.

ಶಿಕ್ಷೆಯಾದ ಆರೋಪಿಗಳ್ಯಾರು..?

ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರಾದ ನಿಸಾಮ್, ಅಜ್ಮಲ್, ಅನೂಪ್, ಮುಹಮ್ಮದ್ ಅಸ್ಲಂ, ಮಣ್ಣಂಜೇರಿ ಞರವೇಲಿ ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸರಫುದ್ದೀನ್, ಮನ್ಷಾದ್, ಜಸೀಬ್ ರಾಜ, ನವಾಸ್, ಸಮೀರ್, ನಸೀರ್, ಝಕೀರ್ ಹುಸೈನ್, ಷಾಜಿ, ಶೆರ್ನಾಝ್ ಅಶ್ರಫ್ ಆರೋಪಿಗಳು. 10ನೇ ಆರೋಪಿ ನವಾಜ್ ಅನಾರೋಗ್ಯದಿಂದ ಬಳಲುತ್ತಿದ್ದು, ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬಿಗಿ ಬಂದೋಬಸ್ತ್:

ಈ ತಿಂಗಳ 20 ರಂದು ಎಲ್ಲಾ ಆರೋಪಿಗಳು ತಪ್ಪಿತಸ್ಥರು ಎಂದು ಘೋಷಿಸಿತು. ಬಳಿಕ ಆರೋಪಿಗಳ ವಾದವನ್ನು ಆಲಿಸಿದ ಬಳಿಕ ಶಿಕ್ಷೆ ಪ್ರಕಟಿಸುವ ದಿನಾಂಕವನ್ನು ಇಂದಿಗೆ ಮುಂದೂಡಲಾಯಿತು. ಇಂದು ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಚೆಂಗನ್ನೂರು ಮತ್ತು ಕಾಯಂಕುಳಂ ಡಿವೈಎಸ್ಪಿಗಳು ನ್ಯಾಯಾಲಯದಲ್ಲಿ ಭದ್ರತೆ ಒದಗಿಸಿದರು.

ಪ್ರಕರಣದ ವಿವರ

2012ರ ಡಿಸೆಂಬರ್ 19ರಂದು ರಂಜಿತ್ ಶ್ರೀನಿವಾಸನ್ ಅವರು ವಾಸವಾಗಿದ್ದ ಆಲೆಪ್ಪಿಯ ಮನೆಗೆ ಪ್ರವೇಶಿಸಿದ ಅರೋಪಿಗಳು ಕುಟುಂಬ ಸದಸ್ಯರ ಎದುರೇ ಕೊಚ್ಚಿ ಕೊಲೆ ಮಾಡಿದ್ದರು. ಆಲೆಪ್ಪಿ ಜಿಲ್ಲೆಯಲ್ಲಿ ನಡೆದ 3 ಸರಣಿ ರಾಜಕೀಯ ಕೊಲೆಗಳಲ್ಲಿ ಕೊನೆಯದಾಗಿ ರಂಜಿತ್ ಕೊಲೆಯಾಗಿತ್ತು. ವಯಲಾರ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಆರ್.ನಂದುಕೃಷ್ಣ ಹತ್ಯೆಯಾದ ಮೊದಲ ವ್ಯಕ್ತಿ. ನಂತರ ಮಣ್ಣಂಜೇರಿಯಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್ ಕೊಲೆಯಾಗಿತ್ತು. ಇದರ ಮರುದಿನ ಬೆಳಗ್ಗೆ ರಂಜಿತ್ ಕೊಲೆಯಾಗಿತ್ತು.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಅಭಿಯೋಜಕ ಪ್ರತಾಪ್ ಜಿ.ಪಡಿಕ್ಕಲ್ ವಾದ ಮಂಡಿಸಿದ್ದರು. ನ್ಯಾಯಾಲಯವು ಆರೋಪಿಗಳ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾ ಪರೀಕ್ಷಾಧಿಕಾರಿ, ಜೈಲಿನಲ್ಲಿ ಆರೋಪಿಗಳಿದ್ದಾಗ ಇದ್ದ ಅವರ ಮಾನಸಿಕ ವರ್ತನೆಯ ವರದಿ, ಮನೋವೈದ್ಯಕೀಯ ವರದಿಯನ್ನು ಪಡೆದುಕೊಂಡಿತ್ತು

Leave a Reply

Your email address will not be published. Required fields are marked *

Optimized by Optimole
error: Content is protected !!