BIG BREAKING NEWS : ಲೋಕ ಸಮರಕ್ಕೆ ಕಾಂಗ್ರೆಸ್ ಸಜ್ಜು ಮೊದಲ 15 ಅಭ್ಯರ್ಥಿಗಳ ಲಿಸ್ಟ್ ಫೆಬ್ರವರಿ ಅಂತ್ಯದೊಳಗೆ ಬಿಡುಗಡೆ..!!

BIG BREAKING NEWS : ಲೋಕ ಸಮರಕ್ಕೆ ಕಾಂಗ್ರೆಸ್ ಸಜ್ಜು ಮೊದಲ 15 ಅಭ್ಯರ್ಥಿಗಳ ಲಿಸ್ಟ್ ಫೆಬ್ರವರಿ ಅಂತ್ಯದೊಳಗೆ ಬಿಡುಗಡೆ..!!

News.Ashwasurya.in

✍️Sudhir Vidhata

ಬೆಂಗಳೂರು : ಐದು ‘ಗ್ಯಾರಂಟಿ’ಗಳನ್ನು ಅಸ್ತ್ರವಾಗಿಟ್ಟುಕೊಂಡು ಕಾಂಗ್ರೆಸ್ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.
ಜಿಲ್ಲಾ ಮತ್ತು ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿದ ನಂತರ ಕಾಂಗ್ರೆಸ್ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದೆಯಂತೆ ಎಂದು ಹೇಳಲಾಗುತ್ತಿದ್ದು

ಈ ಪಟ್ಟಿಯನ್ನು‌ ಫೆಬ್ರವರಿ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಔತಣಕೂಟ ನಡೆಸಿ ಅ ಸಮಯದಲ್ಲಿ 15 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗುತ್ತಿದ್ದು
ಈ ಪಟ್ಟಿಯನ್ನು ಅನುಮೋದನೆಗಾಗಿ ಹೈಕಮಾಂಡ್ ಗೆ ಕಳುಹಿಸಲಾಗುವುದು ಎಂದು ತಿಳಿದು ಬಂದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣೆಗೆ ಸಿದ್ಧತೆಗಳನ್ನು ಪ್ರಾರಂಭಿಸುವಂತೆ ಈ ಅಭ್ಯರ್ಥಿಗಳಿಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಸಾಧ್ಯತೆ ಇಲ್ಲವಂತೆ.
ಪಕ್ಷದ ಮೂಲಗಳ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಪಕ್ಷವು ಹೊಸ ಮುಖಗಳಿಗೆ ಮಣೆ ಹಾಕಲು ಮುಂದಾಗಿದೆಯಂತೆ. ಮಲ್ಲಿಕಾರ್ಜುನ ಖರ್ಗೆ ಸವರು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸೋತಿದ್ದರು.
ಮೈಸೂರಿನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ಅವರನ್ನು ಎದುರಿಸಲು ಕಾಂಗ್ರೆಸ್ ಪ್ರಬಲ ಒಕ್ಕಲಿಗ ನಾಯಕನ ಹೆಸರನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ.

ಮಂಡ್ಯದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಸುಮಲತಾ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಕ್ಷೇತ್ರದಿಂದ ಸ್ಟಾರ್ ಚಂದ್ರು ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದುಹೇಳಲಾಗುತ್ತಿದೆ.
ಧಾರವಾಡದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಬೀದರ್ ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಸಚಿವರು ತಮ್ಮ ಮಕ್ಕಳ ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ,ಶಿವಮೊಗ್ಗ ಕ್ಷೇತ್ರಗಳು ಸೇರಿದಂತೆ ಉಳಿದ 13 ಸ್ಥಾನಗಳಿಗೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಇನ್ನೂ ಶಿವಮೊಗ್ಗ ಕ್ಷೇತ್ರದಿಂದ ಹೆಚ್ ಎಸ್ ಸುಂದರೇಶ್ ಹೆಸರು ಮುಂಚೂಣಿಯಲ್ಲಿದೆ ಪಕ್ಷಕ್ಕಾಗಿ ಕಳೆದ ಮೂವತ್ತೈದು ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿರುವ ಅವರಿಗೆ ಸರಿಯಾದ ಸ್ಥಾನಮಾನ ಕೊಡಲು ಮುಖ್ಯ ಮಂತ್ರಿ ಸಿದ್ಧರಾಮಯ್ಯನವರು ಮತ್ತು ಡಿಸಿಎಮ್ ಡಿ ಕೆ ಶಿವಕುಮಾರ್ ಅವರು ಒಲವು ತೋರಿದ್ದಾರೆ.ಸುರ್ಜೆವಾಲ ಕೂಡ ಹೆಚ್ ಎಸ್ ಸುಂದರೇಶ್ ಅವರಿಗೆ ಸರಿಯಾದ ಸ್ಥಾನಮಾನ ನೀಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗೆದ್ದಿದ್ದವು. ಅದರಲ್ಲೂ ಕೇಲವು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮೂರು ಲಕ್ಷಕ್ಕೂ ಅಧಿಕ ಮತದ ಅಂತರದಲ್ಲಿ ಸೋತು ಎದುರಾಳಿಗೆ ಸ್ಫರ್ದೆ ಒಡ್ಡಲು ಅಸಮರ್ಥರಾಗಿ ಸೋಲು ಅನುಭವಿಸಿದ್ದರು. ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಿ ಬಿಜೆಪಿಗೆ ಬೆಂಬಲ ನಿಡಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಪ್ರಬಲ ಅಭ್ಯರ್ಥಿಗಳು ಕಣದಲ್ಲಿ ಇರುವ ಸಾಧ್ಯತೆ ಇದ್ದು ಚುನಾವಣೆ ಹಣಾಹಣಿಯ ಅಖಾಡವಾಗಲಿದೆ ಎನ್ನುವುದಂತು ಸತ್ಯ.

Leave a Reply

Your email address will not be published. Required fields are marked *

Optimized by Optimole
error: Content is protected !!