ಮತ್ತೆ ಕಾರ್ಯಕರ್ತರನ್ನು ಕಡೆಗಣಿಸಿದ ಕಾಂಗ್ರೆಸ್! ನಿಗಮ-ಮಂಡಳಿಗಳ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತೆ ನಿರಾಸೆ: ಸದ್ಯದಲ್ಲೇ ಜಾರಿ ಆಗಲಿದೆ ನೀತಿಸಂಹಿತೆ..

ನಿಗಮ-ಮಂಡಳಿಗಳ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತೆ ನಿರಾಸೆ: ಸದ್ಯದಲ್ಲೇ ಜಾರಿ ಆಗಲಿದೆ ನೀತಿಸಂಹಿತೆ..

SUDHIR VIDHATA

News.ashwasurya.in

ನಿಗಿ ನಿಗಿ ನಿಗಮ ಮಂಡಳಿಯ ಹಂಚಿಕೆಯ ಕುರಿತು ಕೊನೆಗೂ ಶಾಸಕರಿಗೆ ಜನವರಿ 26 ರಂದು ನಿಗಮ-ಮಂಡಳಿ ಹಂಚಿಕೆಯಾಗಿತ್ತು ಆದರೆ ಕಾರ್ಯಕರ್ತರ ಪೈಕಿ 34 ಮಂದಿ ಕಾರ್ಯಕರ್ತರ ಪಟ್ಟಿ ಸಿದ್ಧವಾಗಿದ್ದರೂ ನಿಗಮ-ಮಂಡಳಿ ಹಂಚಿಕೆಯಾಗಿಲ್ಲ. ಈ ಬಗ್ಗೆ ಒಂದೆರಡು ಸಭೆ ನಡೆಯಿತಾದರೂ ಕಳೆದ 8-10 ದಿನಗಳಿಂದ ಈ ಬಗ್ಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ.ಈಗ ಕಾರ್ಯಕರ್ತರಲ್ಲಿ ಮತ್ತೆ ನಿರಾಸೆ ಮೂಡಿದೆ. ಕಾರ್ಯಕರ್ತರ ಮೂಗಿಗೆ ತುಪ್ಪ ಸವರಿ ಹೈಕಮಾಂಡ್ ನಾಟಕವಾಡುತ್ತಿದೆ ಎನ್ನುವ ಸಣ್ಣ ಅನುಮಾನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮೂಡಿದೆ.
 ಸಚಿವ ಸ್ಥಾನದಲ್ಲಿದ್ದು ಆವಕಾಶ ಸಿಗದ ಹಿನ್ನೆಲೆಯಲ್ಲಿ ನಿಗಿ ನಿಗಿ ಕೆಂಡವಾಗಿದ್ದ ಶಾಸಕರ ತೀವ್ರ ಒತ್ತಡದ ಹಿನ್ನೆಲೆಯಲ್ಲಿ 34 ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ ರಾಜ್ಯ ಸರ್ಕಾರವು ಸ್ವಲ್ಪಮಟ್ಟಿಗೆ ಇಕ್ಕಟ್ಟಿನಿಂದ ಹೊರಬಂದಿತ್ತು. ಈಗ ಕಾರ್ಯಕರ್ತರಿಗೆ ನಿಗಮ-ಮಂಡಳಿ ಹುದ್ದೆ ಹಂಚುವ ಪ್ರಕ್ರಿಯೆಯಲ್ಲಿ ಮಾತ್ರ ಹಿಂದೇಟು ಹಾಕುತ್ತಿದೆ. ಕಳೆದ ಎರಡುವಾರಗಳಿಂದ ನೇಮಕ ಪ್ರಕ್ರಿಯೆ ಬಗ್ಗೆ ಸುಳಿವೇ ಇಲ್ಲದಿರುವುದರಿಂದ ಆಕಾಂಕ್ಷೆಗಳು ಮತ್ತು ಕಾರ್ಯಕರ್ತರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಶಾಸಕರಿಗೆ ಜನವರಿ 26 ರಂದೇ ನಿಗಮ-ಮಂಡಳಿ ಹಂಚಿಕೆಯಾಗಿತ್ತು ಇನ್ನೇನು ತಕ್ಷಣವೇ ಕಾರ್ಯಕರ್ತರ ಪೈಕಿ 34 ಮಂದಿಯ ಪಟ್ಟಿ ಅಂತಿಮವಾಗಿದ್ದರು ನಿಗಮ-ಮಂಡಳಿ ಹಂಚಿಕೆಯಾಗಿಲ್ಲ. ಈ ಬಗ್ಗೆ ಒಂದೆರಡು ಸಭೆ ನಡೆಯಿತಾದರೂ ಕಾರ್ಯರೂಪಕ್ಕೆ ಬಂದಿಲ್ಲ!


ಬರಲಿರುವ ಜಂಟಿ ಅಧಿವೇಶನ, ಬಜೆಟ್ ಮಂಡನೆ ಆ ಬಳಿಕ ಮಾರ್ಚ್‌ ತಿಂಗಳಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಅದರಲ್ಲೂ ನೀತಿ ಸಂಹಿತೆ ಜಾರಿಯಾದರೆ ಲೋಕಸಭೆ ಚುನಾವಣೆ ಮುಗಿದು ಫಲಿತಾಂಶ ಬರುವವರೆಗೂ ನಿಗಮ-ಮಂಡಳಿ ನೇಮಕ ಮಾಡುವಂತಿಲ್ಲ. ಹೀಗಾಗಿ ಪಟ್ಟಿಯಲ್ಲಿ ಹೆಸರಿರುವ ಕಾರ್ಯಕರ್ತರಿಗೆ ಲೋಕಸಭೆ ಚುನಾವಣೆ ಮುಗಿಯುವವರೆಗೂ ಅಧ್ಯಕ್ಷ ಸ್ಥಾನದ ಕನಸು ನನಸಾಗದೆ ಉಳಿಯಲಿದೆ!? ನಿಗಮ ಮಂಡಳಿಗಳ ಆಯ್ಕೆಯ ಪಟ್ಟಿಯು ಬಿಡುಗಡೆಯಾಗದ ಕಾರಣ ಕಾರ್ಯಕರ್ತರ ವಲಯದಲ್ಲಿ ನಿರಾಸೆ ಆತಂಕ ಎದುರಾಗಿದೆ ಇದು ಪಕ್ಷದ ವಿರುದ್ಧ ಆಕ್ರೋಶಕ್ಕೂ ಕಾರಣವಾಗಲಿದೆ ಎಂದು ತಿಳಿದುಬಂದಿದೆ.

ನಿಗಮ-ಮಂಡಳಿ ನೇಮಕದ ವೇಳೆ ಮೊದಲ ಹಂತದಲ್ಲಿ ಶಾಸಕರಿಗೆ ಮಾತ್ರ ಅಧಿಕಾರ ನೀಡಬೇಕು. ಲೋಕಸಭೆ ಚುನಾವಣೆಯ ಬಳಿಕ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಿರ್ಧರಿಸಿದ್ದರು. ಹೀಗಾಗಿ ಶಾಸಕರ ಪಟ್ಟಿಯನ್ನು ಮಾತ್ರವೇ ಹೈಕಮಾಂಡ್‌ ಅಂಗಳಕ್ಕೆ ಕಳುಹಿಸಿದ್ದರು.


ಆದರೆ ಹೈಕಮಾಂಡ್‌ ಬರಿ ಶಾಸಕರ ಪಟ್ಟಿಯನ್ನು ನೋಡಿ ಕಾರ್ಯಕರ್ತರನ್ನೂ ಸೇರಿಸಿ ನಿಗಮ-ಮಂಡಳಿ ಅಧಿಕಾರ ಹಂಚಿಕೆ ಮಾಡಿ ಎಂದು ಸಲಹೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಕಾರ್ಯಕರ್ತರ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‌ನಿಂದಲೂ ಅನುಮೋದನೆ ಪಡೆದುಕೊಳ್ಳಲಾಗಿತ್ತು ಆದರೆ ಕೇವಲ ಶಾಸಕರ ಪಟ್ಟಿಯನ್ನೂ ಪ್ರಕಟಿಸಿ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದ್ದರು.
ಮಾರ್ಚ್‌ನಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಸದ್ಯದಲ್ಲೇ ಜಾರಿ ಸಾಧ್ಯತೆ ಇದ್ದು ಹೀಗಾದಲ್ಲಿ ಚುನಾವಣೆ ಮುಗಿಯುವವರೆಗೂ ಕಾಂಗ್ರೆಸ್ ಕಾರ್ಯಕರ್ತರಿಗಿಲ್ಲ ನಿಗಮ ಮಂಡಳಿಯ ಹುದ್ದೆ!?

Leave a Reply

Your email address will not be published. Required fields are marked *

Optimized by Optimole
error: Content is protected !!