ಫೆ.25ರಂದು ‘1137 ಪೊಲೀಸ್ ಪೇದೆ’ಗಳ ನೇಮಕಾತಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
news.ashwasurya.in
ಬೆಂಗಳೂರು : ಫೆ. 25 ರಂದು 1137 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
25-02-2024 ರಂದು ಪರೀಕ್ಷೆ ನಡೆಯಲಿದ್ದು, ಜ.28 ರಂದು ನಡೆದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ -3064 ಹುದ್ದೆಗಳ ಲಿಖಿತ ಪರೀಕ್ಷೆಗಾಗಿ ನೀಡಲಾದ ಪರೀಕ್ಷಾ ಕೇಂದ್ರಗಳನ್ನೇ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್- 1137 ಹುದ್ದೆಗಳ ಲಿಖಿತ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲು ಇಲಾಖೆ ನಿರ್ಧರಿಸಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ
ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಮೊದಲು 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದು ಬಹುವಿಧ ಉತ್ತರ ಆಯ್ಕೆಗಳ ಪರೀಕ್ಷೆ ಆಗಿರುತ್ತದೆ.
ಮೊದಲು ದೇಹದಾರ್ಢ್ಯತೆ ಪರೀಕ್ಷೆ ನಡೆಸಿ, ಇದರಲ್ಲಿ ಅರ್ಹರಾದವರಿಗೆ ಸಹಿಷ್ಣುತೆ ಪರೀಕ್ಷೆ ನಡೆಸಲಾಗುತ್ತದೆ. ನಂತರ ತಾತ್ಕಾಲಿಕ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ.
ಲಿಖಿತ ಪರೀಕ್ಷೆಯಲ್ಲಿ 1:5 ರ ಅನುಪಾತದಡಿ ಒಟ್ಟು ಹುದ್ದೆಗೆ ಅರ್ಹಗೊಂಡ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲ ರಹಿತ ಶರ್ಟ್‌ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸುವಂತಿಲ್ಲ.
ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ.
ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.
ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು / ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).