ಬೆಳ್ತಂಗಡಿ: ಶಿಕ್ಷಕ ಮಾಡಿದ ಅವಮಾನಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣು..!!
News.Ashwasurya.in
✍️ SUDHIR VIDHATA
ಬೆಳ್ತಂಗಡಿ: ಡ್ರಾಯಿಂಗ್ ಶಿಕ್ಷಕನೊಬ್ಬ ಮಾಡಿದ ಅವಮಾನಕ್ಕೆ ನೊಂದ ವಿದ್ಯಾರ್ಥಿನಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಈ ಘಟನೆ ನಡೆದಿದ. ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ವಿಧ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಧರ್ಮಸ್ಥಳದ ನಿವಾಸಿ ಹದಿನಾರು ವರ್ಷದ ತ್ರಿಶಾ (16) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಫೆಬ್ರವರಿ 5ರಂದು ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ
ಎಂಬಾತ ತನ್ನ ಬಗ್ಗೆ ತನ್ನ ಸಹಪಾಠಿ ವಿಧ್ಯಾರ್ಥಿನಿಯ ಮೊಬೈಲ್ ಗೆ ಅವಮಾನಕರ ರೀತಿಯಲ್ಲಿ ಮೆಸೇಜ್ ಮಾಡಿದ್ದನ್ನು ತಿಳಿದು ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಾಳೆ. ಮರುದಿನ ತಾಯಿ ಆಕೆಯ ಜೊತೆಗೆ ಹೋಗಿ ಶಿಕ್ಷಕನನ್ನು ವಿಚಾರಿಸಿದ್ದಾರೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಣ ಅಂಗಡಿಯಿಂದ ಖರೀದಿ ಮಾಡಿ ತಂದು ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಶಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದಾಳೆ. ವಿಷಯ ಗಮನಕ್ಕೆ ಬಂದ ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವಿಧ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು.
ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿತ್ತು. ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಬಾಳಿ ಬದುಕಬೇಕಾಗಿದ್ದ ವಿದ್ಯಾರ್ಥಿನಿ ಕೊನೆಯುಸಿರೆಳೆದು ಸಾವಿನಮನೆ ಸೇರಿದ್ದಾಳೆ..!
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ಮೃತ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ IPC 354D,509,POSO Act 12 ,75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ರೂಪೇಶ್ ಪೂಜಾರಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.
ಬೆಳ್ತಂಗಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಎಂದು ಗುರುತಿಸಲಾಗಿದೆ.
ಫೆ.7ರಂದು ಈಕೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಎನ್ನಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ತ್ರಿಶಾ ಸೋಮವಾರ ಮುಂಜಾನೆ ಮೃತ ಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ