ಸಂಸದೆ ಸಚಿವೆ ಶೋಭಾ ಕರಂದ್ಲಾಜೆಗೆ ತೀವ್ರ ಮುಖಭಂಗ: ಮೀನುಗಾರರ ಮುಖಂಡರ ತರಾಟೆ
aews.ashwasurya.in
ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಇದೀಗ ಮೀನುಗಾರ ಮುಖಂಡರು ಏನು ಕೆಲಸ ಮಾಡಿದ್ದೀರಿ ಎಂದು ತರಾಟೆ ತೆಗೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಮೀನುಗಾರರ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಲ್ಪೆ – ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಮೀನುಗಾರರ ಮುಖಂಡ ಕಿಶೋರ್ ಡಿ.ಸುವರ್ಣ ತಕರಾರು ತೆಗೆದಿದ್ದಾರೆ. ಈ ವೇಳೆ ಸರ್ವಋತು ಮಲ್ಪೆ ಬಂದರಿನ ಬಗ್ಗೆ ನಿಮಗೆ ನಿರ್ಲಕ್ಷ್ಯ ಏಕೆ? ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕ ರೀತಿಯಲ್ಲಿಲ್ಲ. ರಸ್ತೆಯ ಸರ್ವೆ, ಪರಿಹಾರದ ಬಗ್ಗೆ ಜನರಿಗೆ ಗೊಂದಲಗಳಿವೆ. ಭೂಮಿಯ ಪರಿಹಾರ ಕಾರ್ಯ ಕೂಡ ವೈಜ್ಞಾನಿಕವಾಗಿ ನಡೆದಿಲ್ಲ. ಕೋಟ್ಯಂತರ ಆದಾಯ ಇರುವ ಈ ರಸ್ತೆ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಏಕೆ? ಎಂದು ಸಚಿವೆಯನ್ನು ಪ್ರಶ್ನಿಸಿದ್ದಾರೆ.
ಅಲ್ಲದೇ ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಹತ್ತು ವರ್ಷದಿಂದ ಮತ ಹಾಕಿ ಗೆಲ್ಲಿಸಿದ್ದೇವೆ. ನೀವು ನಮ್ಮ ಮೇಲೆ ಯಾಕೆ ವಿಶ್ವಾಸ ಇಟ್ಟಿಲ್ಲ? ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ ಹೇಳಿ? ರಸ್ತೆಗೆ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಮನವಿ ನೀಡಲು ಬಂದ ಮೀನುಗಾರರು ಅಸಮಾಧಾನ ಹೊರಹಾಕಿದ್ದಾರೆ. ಈ ವೇಳೆ ಗರಂ ಆದ ಸಚಿವೆ ನಾನೇನು ಮಾಡಿಲ್ಲ ಎಲ್ಲಾ ನೀವೆ ಮಾಡಿದ್ದು, ವೈಯುಕ್ತಿವಾಗಿ ಟಿಕೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕೆ ಅವರು ನೀವು ನಮ್ಮ ಪ್ರತಿನಿಧಿ ನಮಗೆ ಪ್ರಶ್ನೆ ಮಾಡುವ ಹಕ್ಕಿದೆ ನಿಮಗೆ ಇಲ್ಲಾ ಎಂದರು. ಒಟ್ಟಿನಲ್ಲಿ ಸಂಸದೆಗೆ ಸರಿಯಾಗಿಯೇ ಪ್ರಶ್ನಿಸಿದ್ದಾರೆ ಎಂದು ವಿಡಿಯೋ ನೋಡಿದ ಕೇಲವರು ಹೇಳುತ್ತಿದ್ದಾರೆ..