ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ತೊಡೆತಟ್ಟಿದ ಪುನೀತ್ ಅತ್ತಾವರ ಭಜರಂಗದಳ್ !

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ತೊಡೆತಟ್ಟಿದ ಪುನೀತ್ ಅತ್ತಾವರ ಭಜರಂಗದಳ್!

news.ashwasurya.in

ಮಂಗಳೂರು: ಗೃಹ ಸಚಿವನಾಗಿದ್ದಾಗ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಆರ್ ಅಶೋಕ್ ಹೇಳಿಕೊಂಡಿದ್ದಾರೆ. ಈ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ತೀವ್ರ ಆಕ್ರೋಶ ಹೊರಹಾಕಿದೆ.

ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ವಿಪಕ್ಷ ನಾಯಕ ಆರ್‌‌.ಅಶೋಕ್ ಗೆ ಭಜರಂಗದಳ ಮಂಗಳೂರು ವಿಭಾಗದ ಸಹಸಂಯೋಜಕ್ ಪುನೀತ್ ಅತ್ತಾವರ ತನ್ನ ಫೇಸ್ ಬುಕ್ ಖಾತೆಯಲ್ಲಿ ಆರ್.ಅಶೋಕ್ ಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ಅಧಿವೇಶನದಲ್ಲಿ ಮಂಗಳೂರು ಪಬ್ ದಾಳಿ ಬಗ್ಗೆ ಮಾತನಾಡಿದ್ದ ಅಶೋಕ್ ಆವತ್ತು ಭಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿಸಿದ್ದೆ ಎಂದು ಅಧಿವೇಶನದಲ್ಲಿ ಹೇಳಿದರು. ಈಗಿನ ಗೃಹ ಸಚಿವ ಪರಮೇಶ್ವರ್ ಗೆ ಬುದ್ದಿ ಹೇಳೋ ಭರದಲ್ಲಿ ಮಾತನಾಡಿದ್ದ ಅಶೋಕ್ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ಮಾಡಿದ್ದ ಭಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದಿದ್ದಾರೆ.
ಆದರೆ ಸದ್ಯ ಅಶೋಕ್ ಹೇಳಿಕೆ ವಿರುದ್ದ ಕರಾವಳಿ ಭಜರಂಗದಳ ಕೆಂಡಕಾರಿದ್ದಾರೆ.ನೀವು ಆರ್ ಅಶೋಕ್ ಅಲ್ಲ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ ಮನಸ್ಸಿಗೆ ಬಂದಂತೆ ಬಳಸಿಕೊಳ್ಳಬೇಡಿ ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಭಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ ‘ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಭಜರಂಗದಳದ ಕಾರ್ಯಕರ್ತರ ಬಗ್ಗೆ ಲಘುವಾಗಿ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಭಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಫೇಸ್ ಬುಕ್ ನಲ್ಲಿ ಭಜರಂಗದಳ ಮುಖಂಡ ಆರ್.ಅಶೋಕ್ ಗೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!