ತಮ್ಮ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡಲು ಮುಂದಾಗಿದೆಯಾ ಕಾಂಗ್ರೆಸ್.! :135 ಸೀಟುಗಳಿದ್ದು ಅಧಿಕಾರದಲ್ಲಿದ್ದರು ರೆಸಾರ್ಟಿಗೆ ಶಿಫ್ಟ್ ಏಕೆ ?

ತಮ್ಮ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡಲು ಮುಂದಾಗಿದೆಯಾ ಕಾಂಗ್ರೆಸ್.! :135 ಸೀಟುಗಳಿದ್ದು ಅಧಿಕಾರದಲ್ಲಿದ್ದರು ರೆಸಾರ್ಟ್‌ಗೆ ಶಿಫ್ಟ್ ಏಕೆ ?

news.ashwasurya.in

ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಿರುವ ಎಲ್ಲಾ ಕಾಂಗ್ರೆಸ್‌ ಶಾಸಕರನ್ನು ವಾರಾಂತ್ಯದಲ್ಲಿ ರೆಸಾರ್ಟ್‌ಗೆ ಶಿಫ್ಟ್‌ ಮಾಡುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆಯಂತೆ!?

ಬೆಂಗಳೂರು ಫೆ,22: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು ಗೆದ್ದು 135 ಸ್ಥಾನಗಳೊಂದಿಗೆ ಬಹುಮತ ಪಡೆದು ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರಕ್ಕೆ ದಿಢೀರನೆ ತನ್ನ ಎಲ್ಲಾ ಶಾಸಕರನ್ನು ಎರಡು ದಿನಗಳ ಕಾಲ ರೆಸಾರ್ಟ್‌ಗೆ ಶಿಫ್ಟ್‌ ಮಾಡಲು ನಿರ್ಧಾರ ಕೈಗೊಂಡಿದೆಯಂತೆ ಫೆ.25ರ ಭಾನುವಾರ ಕಾಂಗ್ರೆಸ್‌ ಪಕ್ಷದ 135 ಮಂದಿ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಫೆ.26 ರಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಖಾಸಗಿ ರೆಸಾರ್ಟ್‌ ಒಂದರಲ್ಲಿ ನಡೆಸಲಾಗುತ್ತದೆ. ನಂತರ ಫೆ.27ರಂದು ಕಾಂಗ್ರೆಸ್‌ ನ ಎಲ್ಲಾ ಶಾಸಕರು ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಈ ಬಗ್ಗೆ ವಿಧಾನಸಭಾ ಮೊಗಸಾಲೆಯಲ್ಲಿ ಕಾಂಗ್ರೆಸ್‌ ಮುಖ್ಯ ಸಚೇತಕ ಅಶೋಕ ಪಟ್ಟಣ್ ಅವರು ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಎಲ್ಲಾ ಕಾಂಗ್ರೆಸ್ ಶಾಸಕರನ್ನು ದಿಢೀರನೆ ರೆಸಾರ್ಟ್‌ಗೆ ಶಿಫ್ಟ್ ಮಾಡಲು ಒಂದು ಪ್ರಮುಖ ಕಾರಣವಿದೆ. ಇಲ್ಲಿ ರಾಜ್ಯಸಭಾ ಚುನಾವಣಾ ರಣಕಣದ ಬಗ್ಗೆ ಚರ್ಚೆ ಮಾಡಲಾಗುತ್ತದೆ. ವಿಧಾನಸಭಾ ಮೊಗಸಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕನ್ ಅವರನ್ನು ಗೆಲ್ಲಿಸಲು ಸೂಚನೆ ನೀಡಲಾಗುತ್ತದೆ. ಹೀಗಾಗಿ ಶಾಸಕರು, ಸಚಿವರ ಮತಯಾಚನೆಯನ್ನು ಮಾಡಲಾಗುತ್ತದೆ. ಈ ವೇಳೆ ಕಾಂಗ್ರೆಸ್‌ ಹಿರಿಯ ನಾಯಕರು ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಎಲ್ಲಾ ಶಾಸಕರಿಗೂ ರಾಜ್ಯಸಭೆ ಜೊತೆಗೆ ಲೋಕಸಭಾ ಚುನಾವಣಾ ಜವಾಬ್ದಾರಿಗಳನ್ನು ನೀಡಲಾಗುತ್ತದೆ ಎಂಬ ಸುಳಿವು ಸಿಕ್ಕಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಅಣಿಯಾಗಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈಗಾಗಲೇ ಮಹತ್ವದ ಸಭೆಯೊಂದನ್ನು ನಡೆಸಲಾಗಿದೆ. ಹಳೆ ಮೈಸೂರು ಭಾಗದ ಕಾಂಗ್ರೆಸ್ ಶಾಸಕರು, ಸಚಿವರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗಿತ್ತು ಮತ್ತು
ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ ಈ ಸಭೆಯನ್ನು ಆಯೋಜನೆ ಮಾಡಿದ್ದರು ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಲೋಕಸಭೆ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ನಾಯಕರಾದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಈ ಸಭೆಯ ಮುಂದಾಳತ್ವ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ಮಾಡಲಾಗಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಕಟ್ಟಿ ಹಾಕುವ ನಿಟ್ಟಿನಲ್ಲಿಯೂ ಚರ್ಚಿಸಲಾಗಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!