ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ
ಕಲಬುರಗಿ: ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.
ಕಲಬುರಗಿಯ ಕೇಂದ್ರೀಯ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜೈಲಿನ ಒಳ ಅವರಣದಲ್ಲಿ ಹೊಡೆದಾಟ ನಡೆದಿದೆ.
ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯ ಬಳಿಕ ಕ್ರೈಮ್ ಡಿಸಿಪಿ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಸೇರಿದಂತೆ ಎರಡು ಮೊಬೈಲುಗಳನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರ್ಷ ಕೊಲೆ: 2022 ಫೆಬ್ರವರಿ 20ರ ಭಾನುವಾರ ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗ್ಯಾಂಗ್ ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿತ್ತು.ಲಾಂಗಿನೇಟಿಗೆ ಹಿಂದೂ ಹರ್ಷ ರಕ್ತದ ಮಡುವಿನಲ್ಲಿ ನೆರಕ್ಕೂರುಳಿದ್ದ ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದ ಆತನ ಗುಟುಕು ಜೀವಮಾತ್ರ ಮಾತ್ರ ಬದುಕಲು ಹೋರಾಡುತ್ತಿತ್ತು! ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿ ರಕ್ತಸ್ರಾವವಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.ಈ ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.