ಮಂಗಳೂರು:SSLC ಪ್ರಿಪರೇಟರಿ ಇಂಗ್ಲಿಷ್ ಪರೀಕ್ಷೆ ಬರೆದು ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಶವವಾಗಿ ಪತ್ತೆ.!!

ಮಂಗಳೂರು:SSLC ಪ್ರಿಪರೇಟರಿ ಇಂಗ್ಲಿಷ್ ಪರೀಕ್ಷೆ ಬರೆದು ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಶವವಾಗಿ ಪತ್ತೆ.!!

ನ್ಯೂಸ್.ಅಶ್ವಸೂರ್ಯ.ಕಾಮ್

ಮಂಗಳೂರು: SSLC ಪ್ರಿಪರೇಟರಿ ಪರೀಕ್ಷೆ ಬರೆದು ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ.

ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿಗಳನ್ನು ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಮಗ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ ಮಗ ರಾಘವೇಂದ್ರ (15), ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ್ ಎಂಬವರ ಮಗ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಎಂದು ಗುರುತಿಸಲಾಗಿದೆ.

ಸುರತ್ಕಲ್ ಪಟ್ಟಣದ ವಿದ್ಯಾದಾಯಿನಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನಿನ್ನೆ SSLC ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಎಷ್ಟು ಸಮಯವಾದರೂ ಮಕ್ಕಳು ಮನೆಗೆ ಬಾರದೆ ಇರುವ ಹಿನ್ನೆಲೆಯಲ್ಲಿ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಈಗ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಶವ ಪತ್ತೆಯಾಗಿದೆ. ಪರೀಕ್ಷೆ ನಂತರ ನದಿಗೆ ಈಜಲು ಹೋಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!