ವಿಚಾರಣಾಧೀನ ಕೈದಿ ಅನುಮಾನಾಸ್ಪದ ಸಾವು:ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ
news.ashwasurya.in
✍️ SUDHIR VIDHATA
ವಿಚಾರಣಾಧೀನ ಕೈದಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ದಾಯಾದಿಗಳ ಹೊಡೆದಾಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಇತ ಕಳೆದ 7 ವರ್ಷಗಳಿಂದ ಪೋಲಿಸರ ಕಣ್ಣುತಪ್ಪಸಿ ನಾಪತ್ತೆಯಾಗಿದ್ದ ಈತ ಇತ್ತೀಚೆಗೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದ.! ಅದ್ಯಾವ ಕಾರಣವೀ ಪೋಲಿಸರ ಕೈಗೆ ಸಿಕ್ಕ ಮೂರೇ ದಿನದಲ್ಲಿ ಆಸ್ಪತ್ರೆಯ ಹಾಸಿಗೆಯಲ್ಲೆ ಉಸಿರು ಚೆಲ್ಲಿದ್ದಾನೆ.
ವಿಚಾರಣಾಧೀನ ಕೈದಿಯಾಗಿದ್ದ ಸತೀಶ್ ಚಿಕ್ಕಮಗಳೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ನಡೆದಿದೆ. ದಾಯಾದಿಗಳ ಹೊಡೆದಾಟ ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಇತ್ತೀಚೆಗೆ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದ ಸಿಕ್ಕಿಬಿದ್ದ ಮೂರೇ ದಿನಕ್ಕೆ ಸಾವನ್ನಪ್ಪಿದ್ದು ಈತನ ಸಾವಿನ ಸುತ್ತ ಅನುಮಾನದ ಹೊಗೆಯಾಡುತ್ತಿದೆ.!? ಕಾರಾಗೃಹ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ ನಮ್ಮ ಹುಡುಗನ ಸಾವಿಗೆ ಪೋಲಿಸರು ಮತ್ತು ಕಾರಗೃಹ ಸಿಬ್ಬಂದಿಗಳೆ ಕಾರಣರಾಗಿದ್ದಾರೆ.!
ಹೊಡೆದಾಟದ ಪ್ರಕರಣಕ್ಕೆ ಸಂಬಂದಿಸಿದಂತೆ ಅರೆಸ್ಟ್ ಆಗಿದ್ದ ಆರೋಪಿ ಅಣ್ಣ ಮತ್ತು ತಮ್ಮ ಇಬ್ಬರು ಹಣಕಾಸಿನ ವಿಚಾರದ ಹಿನ್ನೆಲೆಯಲ್ಲಿ ಹೊಡೆದಾಡಿಕೊಂಡಿದ್ದರು ಈ ವಿಷಯವಾಗಿ ದೂರು ದಾಖಲ ಕಾರಣಕ್ಕೆ ಆರೋಪಿ ಸತೀಶನ ವಿರುದ್ಧ 307 ಸೆಕ್ಷನ್ ಅಡಿಯಲ್ಲಿ ಪ್ರಕರಣದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಲಾಗಿತ್ತು.ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ವಿಚಾರಣಾಧೀನ ಕೈದಿಯಾಗಿದ್ದ ಸತೀಶ್ ಪೋಲಿಸರ ಕೈಯಿಂದ ಕಳೆದ ಏಳು ವರ್ಷಗಳ ಹಿಂದೆ ತಪ್ಪಿಸಿಕೊಂಡಿದ್ದ.ಇತ್ತೀಚೆಗಷ್ಟೇ ಮತ್ತೆ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಅದರೆ ಮೂರೇ ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನುವ ಸುದ್ದಿ ಹೊರಬಿದ್ದಿದೆ.! ಸತೀಶ್ ಎಂಬಾತನೆ ಕಳೆದ 7 ವರ್ಷಗಳ ಹಿಂದೆ ತನ್ನ ಸಹೋದರ ಸಿದ್ದರಾಜು ಎಂಬಾತನ ಹೋಟೆಲ್ ನಲ್ಲಿ ಕೆಲಸ ಮಾಡುವ ವೇಳೆ ಚಿಕ್ಕಮಗಳೂರಿನ ದಂಟರಮಕ್ಕಿ ಬಳಿ ಹೊಡೆದಾಟ ಮಾಡಿಕೊಂಡಿದ್ದರು ಈ ವಿಷಯವಾಗಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಆರೋಪಿ ಸತೀಶ ನಂತರ ತಲೆ ಮರೆಸಿಕೊಂಡು ಹಾಸನದ ಶ್ರೀನಗರದಲ್ಲಿ ವಾಸವಿದ್ದನಂತೆ! ಕಳೆದ ನಾಲ್ಕು ದಿನಗಳ ಹಿಂದೆ ನಗರ ಠಾಣೆ ಪೊಲೀಸರು ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.ಜೈಲಿನ ಬ್ಯಾರಕ್ ನಲ್ಲಿದ್ದ ಇತನಿಗೆ ಕಾರಗೃಹದ ಅಧಿಕಾರಿಗಳ ಹೇಳಿಕೆ ಪ್ರಕಾರ ಕಳೆದ ಒಂದೆರಡು ದಿನದ ಹಿಂದೆ ತೀವ್ರ ಆರೋಗ್ಯ ಸಮಸ್ಯೆಯಿಂದಾಗಿ ಇತನನ್ನು ಬೆಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರಂತೆ.! ಆದರೆ ಚಿಕಿತ್ಸೆಗೆ ಸ್ಫಂದಿಸದ ಸತೀಶ್ ಸಾವಿನ ಮನೆ ಸೇರಿದ್ದಾನೆ.!! ಆದರೆ ಸತೀಶನ ದಿಢೀರ್ ಸಾವಿನ ಬಗ್ಗೆ ಆತನ ಪತ್ನಿ ನೇತ್ರಾ ಮತ್ತು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕುಟುಂಬಸ್ಥರ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಧೀಶರು: ಜಾಮೀನು ರಹಿತ ವಾರೆಂಟ್ ನೀಡಿ ಬಂಧಿಸಿ ನಾಲ್ಕು ದಿನಗಳ ನಂತರ ಹೊಡೆದು ಆಸ್ಪತ್ರೆಗೆ ಸೇರಿಸಿ ಇಂದು ನಮಗೆ ವಿಷಯ ತಿಳಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸತೀಶ್ ಕೈ ಕುತ್ತಿಗೆ ಹಾಗೂ ದೇಹದ ಭಾಗದಲ್ಲಿ ಗಾಯಗಳಾಗಿದ್ದು ಕಾರಾಗೃಹ ಹಾಗೂ ಪೊಲೀಸ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರಬಹುದು ಎಂದು ಸತೀಶ್ ಸಹೋದರ ಅನುಮಾನ ವ್ಯಕ್ತಪಡಿಸಿದ್ದಾರೆ. ವಿಚಾರಣಾಧೀನ ಹಂತದಲ್ಲಿ ಮೃತಪಟ್ಟ ಕಾರಣ ನ್ಯಾಯಾಧೀಶರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಸ್ಥರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಸಾವಿಗೆ ಕಾರಣವೇನೆಂದು ತನಿಖೆಯಿಂದ ಇನ್ನಷ್ಟು ಬಯಲಾಗಬೇಕಿದೆ.