ಕಾರಿನಲ್ಲಿ ಉದ್ಯಮಿ ಶವಪತ್ತೆ.! ಕೊಲೆ ಶಂಕೆ…
ಅಶ್ವಸೂರ್ಯ/ಶಿವಮೊಗ್ಗ
✍️ ಸುಧೀರ್ ವಿಧಾತ
ಬೆಂಗಳೂರು: ಯಲಹಂಕ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬಾಗಲೂರು ಕ್ರಾಸ್ ಹತ್ತಿರ ರಸ್ತೆ ಬದಿಯಲ್ಲಿ ನಿಲ್ಲುಸಿದ್ದ ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರ ಶವವಾಗಿ ಪತ್ತೆಯಾಗಿದ್ದು ಇದು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇಂದು ಬೆಳಗ್ಗೆ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನಲ್ಲಿ ಶವ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೋಲಿಸರು ಶವ ಇದ್ದ ಕಾರನ್ನು ಪರಿಶೀಲಿಸಿ ನಂತರ ಶವವನ್ನು ಹೊರತೆಗೆದು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೃತ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೋಲಿಸರು ಇದು ರೀಯಲ್ ಎಸ್ಟೇಟ್ ಉದ್ಯಮಿ ಕೃಷ್ಣಯಾದವ್ ಎಂದು ಗುರುತಿಸಲಾಗಿದ್ದು ಅವರ ಮನೆಯವರಿಗೆ ವಿಷಯ ತಲುಪಿಸಿದ್ದಾರೆ.
ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಬಗ್ಗೆ ತಿಳಿದು ಬಂದಿದ್ದು, ಈ ಭಾಗದಲ್ಲಿ ರೀಯಲ್ ಎಸ್ಟೇಟ್ ದಂಧೆಯಲ್ಲಿ ಸಾಕಷ್ಟು ಹೆಸರು ಹಣ ಮಾಡಿದ್ದನಂತೆ. ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು ಎಂದು ಗೊತ್ತಾಗಿದೆ. ನಿನ್ನೆ ರಾತ್ರಿ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋಗಿದ್ದ ಕೃಷ್ಣಯಾದವ್ ತಮ್ಮದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹದ ಮೇಲೆ ಗಾಯದ ಕುರುಹುಗಳು ಕಂಡುಬಂದಿದ್ದು, ಯಾರೋ ಅಪರಿಚಿತರು ಹತ್ಯೆ ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಸ್ಥಳ ಮಹಜರು ನೆಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೃಷ್ಣ ಯಾದವ್ ಅವರ ಮನೆಯವರನ್ನು ವಿಚಾರಿಸಿ ಒಂದಷ್ಟು ಮಾಹಿತಿಯನ್ನು ಕಲೆಹಾಕಿ ಹಂತಕರ ಪತ್ತೆಗಾಗಿ ತೀವ್ರ ತನಿಖೆಗೆ ಮುಂದಾಗಿದ್ದಾರೆ.