ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ ಎಸ್ ಚಂದ್ರ ಭೂಪಾಲ ಅಯ್ಕೆ
ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಮಟ್ಟದ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಉಸ್ತುವಾರಿಗಳಾದ ಶ್ರೀ ಸಿ.ಎಸ್. ಚಂದ್ರಭೂಪಾಲ ಅವರನ್ನು ನೇಮಕಮಾಡಿ
ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್
ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ ನಿತ್ಯಾ
ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿಸುತ್ತಿದ್ದಾರೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಸಂಯೋಜಕ ರಾಗಿ ಮತ್ತು ಅಹಿಂದ ಸಂಘಟನೆಯಜಿಲ್ಲಾ ಅಧ್ಯಕ್ಷರಾಗಿ ಸಾರ್ವಜನಿಕರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಂತವರು.
ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳು ಈಗಾಗ ಲೇ ರಾಜ್ಯದಲ್ಲಿ ಜಾರಿಗೊಂಡಿದ್ದು ಈ ಐದು ಗ್ಯಾರಂಟಿ ಯೋಜನೆಯ ಲಾಭವು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ರಾಜ್ಯ ಮತ್ತು ಜಿಲ್ಲಾ ಹಾಗೂ ತಾಲೂಕ ಮಟ್ಟದಲ್ಲಿ ಐದು ಗ್ಯಾರಂಟಿಗಳು ಯೋಜನೆಗಳ ಅನುಷ್ಠಾನ ಪ್ರಾಧಿಕಾರವನ್ನು
ರಾಜ್ಯ ಸರ್ಕಾರ ರಚನೆ ಮಾಡಿ ಶಿವಮೊಗ್ಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರುಗಳನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ ಈ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಕಾರ್ಯನಿರ್ವಹಿ ಸುತ್ತಾರೆ.
ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ದುಡಿದು ಇದರ ಜೊತೆ ಜೋತೆಗೆ ಪತ್ರಿಕೋದ್ಯಮದಲ್ಲು ಸುದೀರ್ಘವಾಗಿ ತಮ್ಮನ್ನು ತೋಡಗಿಸಿಕೊಂಡಂತವರು ಅವರ ಪಕ್ಷನಿಷ್ಠೆಗೆ ಕಾಂಗ್ರೆಸ್ ಪಾರ್ಟಿ ತನ್ನ ಅಧಿಕಾರದ ಅವಧಿಯಲ್ಲಿ ಅಂದೆ ಗುರುತಿಸಬೇಕಿತ್ತು.ಕೊನೆಗೂ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದೆ.
ಕರ್ನಾಟಕ ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿಗಳಾದ ಶಕ್ತಿ , ಗೃಹ ಜ್ಯೋತಿ ಅನ್ನಭಾಗ್ಯ, ಗೃಹಲಕ್ಷ್ಮೀ ಮತ್ತು ಯುವ
ನಿಧಿ ಯೋಜನೆಗಳನ್ನು ಅನುಷ್ಠಾನದ ನೂತನ ಪ್ರಾಧಿಕಾರದ ಜಿಲ್ಲಾ ಮಟ್ಟದ ಪ್ರಪ್ರಥಮ ಅಧ್ಯಕ್ಷರನ್ನಾಗಿ ಶಿವಮೊಗ್ಗ
ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಸ್.ಚಂದ್ರ ಭೂಪಾಲ ಅವರನ್ನು ನೇಮಕಮಾಡಿ
ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಕಾಂಗ್ರೆಸ್ ಪಕ್ಷದ ಮತ್ತು ಸ್ನೇಹಿತರ ಬಳಗದಲ್ಲಿ ಖುಷಿತಂದಿದೆ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗಜಿಲ್ಲೆ
ಅಪರ ಜಿಲ್ಲಾಧಿಕಾರಿ ರವರು ಕಾರ್ಯ ನಿರ್ವಹಿಸುತ್ತಾರೆ.
ಶ್ರೀ ಸಿ.ಎಸ್.ಚಂದ್ರಭೂಪಾಲ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ,
ರಾಜ್ಯಸಂಯೋಜಕರಾಗಿ ಮತ್ತು ರಾಜ್ಯ ಅಹಿಂದ ಸಂಘಟನೆಯ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷರಾಗಿದ್ದಾರೆ, ,ಕರ್ನಾಟಕರಾಜ್ಯ ಮಡಿವಾಳರ ಸಂಘದ ರಾಜ್ಯ ಮಾಜಿ
ಉಪಾಧ್ಯಕ್ಷರು ಮತ್ತು ಶಿವಮೊಗ್ಗಜಿಲ್ಲಾ ಮಡಿವಾಳ ಸಮಾಜ ಸಂಘದ ಮಾಜಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.