ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರ – ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ
ASHWASURYA/SHIVAMOGGA
✍️ SUDHIR VIDHATA
ಅಶ್ವಸೂರ್ಯ/ಶಿವಮೊಗ್ಗ:
ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರ – ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು : ಶಿವಮೊಗ್ಗದಲ್ಲಿ ಈಶ್ವರಪ್ಪನವರು ನಾನು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸ್ಫರ್ದಿಸಿತ್ತೇನೆ ಎಂದು ಗರ್ಜಿಸುತ್ತಿದ್ದಹಾಗೆ ರಾಷ್ಟ್ರ ಮಟ್ಟದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಗ್ಗೆ ಬಾರಿ ಚರ್ಚೆಯಾಗುತ್ತಿದೆ.! ಈ ವಿಷೇಶವಾಗಿ ಇಂದು ಉಡುಪಿ/ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದಾರೆ.ಈಶ್ವರಪ್ಪ ನವತ ಬಂಡಾಯ ಸ್ಪರ್ಧೆಯ ವಿಚಾರ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ.ನಮ್ಮ ಪಕ್ಷದ ಹಿರಿಯ ನಾಯಕರು ಈಶ್ವರಪ್ಪ ನವರ ಜೊತೆಗೆ ಮಾತುಕತೆ ಮಾಡುತ್ತಾರೆ.ಎಲ್ಲಾ ಗೊಂದಲಗಳು ಬಗೆಹರಿಯುತ್ತದೆ ಎಂಬ ವಿಶ್ವಾಸ ನನಗೆ ಇದೆ.ಚರ್ಚೆಗೆ ಅವಕಾಶವಾಗಿರುವುದು ಸತ್ಯ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.ಇಂದು
ದತ್ತಾತ್ರೇಯ ಬಾಬಾ ಬುಡನ್ ಗಿರಿಯ ದರ್ಗಾದಲ್ಲಿ ಮಾತನಾಡಿದರು, ಹಾವೇರಿ ಟಿಕೆಟ್ ಪುತ್ರ ಕಾಂತೇಶನಿಗೆ ಕೋಡಬೇಕಿತ್ತು ಎನ್ನುವುದು ಈಶ್ವರಪ್ಪನವರ ಬಯಕೆಯಾಗಿತ್ತು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ.ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರಬಹುದು. ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.