ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ಮತ್ತು ಶಿವಮೊಗ್ಗ ಕ್ಷೇತ್ರದಿಂದಲೇ ಲೋಕಸಭಾ ಚುನಾವಣ ಪ್ರಚಾರ ಆರಂಭಿಸಲು ಕಾರಣವೇನು? ಇಲ್ಲಿದೆ ಅದರ ಪಕ್ಕಾ ಲೆಕ್ಕಾಚಾರ

ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ಮತ್ತು ಶಿವಮೊಗ್ಗ ಕ್ಷೇತ್ರದಿಂದಲೇ ಲೋಕಸಭಾ ಚುನಾವಣ ಪ್ರಚಾರ ಆರಂಭಿಸಲು ಕಾರಣವೇನು? ಇಲ್ಲಿದೆ ಅದರ ಪಕ್ಕಾ ಲೆಕ್ಕಾಚಾರ

ASHWASURYA/SHIVAMOGGA

✍️ ಸುಧೀರ್ ವಿಧಾತ

ಶಿವಮೊಗ್ಗ, ಮಾ.16 : 2024ರ ಲೋಕಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನೆಡೆಯಲಿದ್ದು ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತದಲ್ಲಿ ಚುನಾವಣೆ ನೆಡೆಯಲಿದ್ದು ಈಗಾಗಲೇ ಈಗಾಗಲೇ ಕ್ಷೇತ್ರಗಳಿಗೆ ಘೋಷಣೆಯಾದ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಈಗಾಗಲೇ ಬಿರುಸಿನ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಯೂ ಗೆಲುವಿನ ನಗೆ ಬೀರಲು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಎಲ್ಲಾ ರಾಜ್ಯದಲ್ಲೂ ಕೇಸರಿ ಅರಳಿಸಲು ಸನ್ನದ್ಧರಾಗಿರುವ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಲಬುರಗಿ ಮತ್ತು ಶಿವಮೊಗ್ಗ ಕ್ಷೇತ್ರವನ್ನು ಪ್ರಚಾರದ ಕಣವನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಪ್ರಧಾನಿ ಮೋದಿ ಅವರು ಶರಣರ ನೆಲ ಕಲಬುರಗಿ ಹಾಗೂ ರಾಷ್ಟ್ರದಲ್ಲೇ ಪ್ರತಿಷ್ಠಿತ ಚುನಾವಣ ಕಣವಾದ ಮಲೆನಾಡು ಪ್ರಾಂತ್ಯದ ಶಿವಮೊಗ್ಗ ಕ್ಷೇತ್ರದಲ್ಲಿ ಮಾರ್ಚ್ 18ರಂದು ರಣಕಹಳೆ ಮೊಳಗಿಸಲು ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಚುನಾವಣ ದಿನಾಂಕ ನಿಗಧಿಯಾಗುವ ಮೊದಲೆ ತಮ್ಮ ಪ್ರಚಾರದ ದಿನಾಂಕವನ್ನು ನಿಗಧಿಮಾಡಿದ್ದರು.! ಕರ್ನಾಟಕದ ಈ ಬಾರಿಯು ಭರ್ಜರಿಯಾಗಿ ಕಮಲ ಅರಳಿಸಲು ಕಲಬುರಗಿ ಹಾಗೂ ಶಿವಮೊಗ್ಗ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಕಾರಣವೇನು ಎಂಬ ಕುತೂಹಲ ಹೆಚ್ಚಿಸಿದೆ.


ಈ ಬಾರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಶಿವಮೊಗ್ಗ ಮತ್ತು ಕಲಬುರಗಿ ಕ್ಷೇತ್ರದಿಂದ ಪ್ರಚಾರ ಆರಂಭಿಸುವ ಮೂಲಕ ಎರಡು ಸಮುದಾಯಗಳಿಗೆ ಸಂದೇಶ ನೀಡಲಿದ್ದಾರಂತೆ!? ಪರಿಶಿಷ್ಟ ಜಾತಿ ಹಾಗೂ ಲಿಂಗಾಯತ ಸಮುದಾಯಗಳ ಮೇಲೆ ಮೋದಿ ಪ್ರಚಾರದ ಪ್ರಭಾವ ಬೀರಲಿದೆಯಂತೆ!
ಕಲಬುರಗಿ ಕ್ಷೇತ್ರ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾಗಿದ್ದು ಇದರ ಜೋತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭದ್ರಕೋಟೆಯಾಗಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ವಕ್ಷೇತ್ರ ಹಾಗೂ ಭದ್ರಕೋಟೆ ಆಗಿರುವ ಕಲಬುರಗಿಯಿಂದ ಸ್ಪರ್ಧೆ ಮಾಡದೆ ಹಿಂದೇಟು ಹಾಕಿದ್ದಾರೆ.ಇದನ್ನೆ ಆಸ್ತ್ರ ಮಾಡಿಕೊಂಡು ಖರ್ಗೆ ಚುನಾವಣ ಅಖಾಡದಿಂದ ಹಿಂದೇಟು ಹಾಕಿರುವುದನ್ನೆ ಪ್ರಶ್ನೆ ಮಾಡುವ ಮೂಲಕ ನರೇಂದ್ರ ಮೋದಿ ಅವರು ಇಂಡಿಯಾ ಕೂಟಕ್ಕೆ ಸ್ಪಷ್ಟ ಸಂದೇಶ ನೀಡಲಿದ್ದಾರಂತೆ.!,


ಮಲ್ಲಿಕಾರ್ಜುನ ಖರ್ಗೆ ಅವರು 2009 ಹಾಗೂ 2014ರ ಚುನಾವಣೆಯಲ್ಲಿ ಎರಡು ಬಾರಿ ಗೆಲುವು ಸಾಧಿಸಿದ್ದರು. ನಂತರ 2019ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಉಮೇಶ್ ಜಾಧವ್ ವಿರುದ್ಧ 95,000 ಮತಗಳ ಬಾರಿ ಅಂತರದಲ್ಲಿ ಸೋಲಿಗೆ ಶರಣಾಗಿದ್ದರು.ಆದರೆ 2023ರಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರವಲ್ಲದೆ ಖರ್ಗೆ ಕಾಂಗ್ರೆಸ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್ಯದಂತ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಸದ್ಯ ರಾಜ್ಯದಲ್ಲಿ ಅಸ್ಥಿತ್ವದಲ್ಲರುವ ಕಾಂಗ್ರೆಸ್ ಸರ್ಕಾರ ಲೋಕಸಭೆ ಚುನಾವಣೆಯಲ್ಲೂ ಜಯ ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದೆ ನಮ್ಮ ಆಡಳಿತದ ನಮ್ಮ ಐದು ಗ್ಯಾರಂಟಿಗಳು ನಮ್ಮ ಗೆಲುವಿನ ಆಸ್ತ್ರವಾಗಿದೆ ಎಂದು ಈ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದವರಿಗೆ ತೊಡೆತಟ್ಟಲು ಸಜ್ಜಾಗಿದ್ದಾರೆ. 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿ.ಕೆ ಸುರೇಶ್ ಮಾತ್ರ ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ನಿಂದ ಗೆದ್ದು ಬಂದಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರ ಭದ್ರ ಕೋಟೆಯಲ್ಲಿ ಎಸ್ ಸಿ ಸಮುದಾಯದ ಮತಗಳನ್ನು ಬಿಜೆಪಿಯ ಕಡೆ ಸೇಳೆಯಲು ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸಿದ್ದಾರೆ. ಕಲಬುರಗಿಯಲ್ಲಿ ಮತಬೇಟೆಗೆ ಮೋದಿ ಇದೆ 18ರಂದು ಇಳಿಯಲಿದ್ದಾರೆ.


ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟಪಂಗಡಗಳ ಮತಗಳು ಹೆಚ್ಚಾಗಿದ್ದು ಅದನ್ನು ತಮ್ಮ ಪಕ್ಷದೇಡೆಗೆ ಸೇಳೆಯಲು ಎಲ್ಲಾ ತಯಾರಿ ಮಾಡಿಕೊಂಡು ಪ್ರಚಾರಕ್ಕೆ ಮುಂದಾಗಲಿದ್ದಾರೆ.
2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಬಾರಿ ಅಂತರದ ಸೋಲಿಗೆ ಶರಣಾಗಿತ್ತು. ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನದಲ್ಲಿಟ್ಟುಕೊಂಡಿರುವ ಪ್ರಧಾನಿ ಮೋದಿ ಸ್ವತಃ ಕಲಬುರಗಿಯಲ್ಲಿ ಪ್ರಚಾರಕ್ಕಿಳಿದು, ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಪಕ್ಷದ ನಾಯಕರಿಗೆ,ಕಾರ್ಯಕರ್ತರಿಗೆ ರವಾನಿಸಲಿದ್ದಾರೆ.

ಮಾರ್ಚ್ 18ರಂದು ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ, ಮೇಲು ಜಾತಿಯ ಲಿಂಗಾಯತರಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸನ್ಮಾನ ಮಾಡಲಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರ ಜೊತೆಗೆ ಪಕ್ಷಕ್ಕಾಗಿ ಶ್ರಮಿಸಿದ ಯಡಿಯೂರಪ್ಪ ಅವರಿಗೆ ಸನ್ಮಾನದ ಮೂಲಕ ಗೌರವ ಸೂಚಿಸಲಿದ್ದಾರೆ.


ರಾಜ್ಯದಲ್ಲಿ ಬಿಎಸ್ ವೈ ಎಂದೇ ಖ್ಯಾತಿ ಪಡೆದ ಯಡಿಯೂರಪ್ಪನವರು, 2008ರಲ್ಲಿ ಏಕಾಂಗಿಯಾಗಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದರು. 2019ರ ಚುನಾವಣೆಯಲ್ಲೂ ಒಟ್ಟು 28 ಲೋಕಸಭಾ ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆಲ್ಲುವಂತೆ ಮಾಡಿದಂತಹ ಹಿರಿಮೆ BSY ಅವರದ್ದು. ಈ ಪ್ರತಿಷ್ಠಿತ ಕ್ಷೇತ್ರದಿಂದ ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿ ವೈ ರಾಘವೇಂದ್ರ ನಾಲ್ಕನೇ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಮಲೆನಾಡು ಪ್ರದೇಶವಾಗಿರುವ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಗೆ ಜನಬೆಂಬಲವಿದೆ.ಕಳೆದ ಎರಡು ದಶಕಗಳಿಂದಲೂ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ.
ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ದುರ್ಬಲವಾಗಿದೆ. ಈ ಕ್ಷೇತ್ರದಲ್ಲಿ ಮತಗಳನ್ನು ಬಿಜೆಪಿಯ ಕಡೆ ಸೇಳೆಯಲು ಎಲ್ಲಾ ರೀತಿಯಲ್ಲೂ ವೇದಿಕೆಯನ್ನು ಸಜ್ಜುಮಾಡಿಕೊಂಡಿರುವ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತ್ತು ಲಿಂಗಾಯತ ಸಮುದಾಯದ ಮತಗಳನ್ನು ಈ ಬಾರಿ ಸೇಳೆದು ಕರ್ನಾಟಕದಲ್ಲಿ ಮತ್ತೆ ವಿಜಯಪಾತಕೆಯನ್ನು ಹಾರಿಸಲು ಮೋದಿ ತಮ್ಮ ಪ್ರಚಾರವನ್ನು ಕಿಕ್‌ಸ್ಟಾರ್ಟ್ ಮಾಡಲು ಈ ಕ್ಷೇತ್ರಗಳನ್ನು ಆಯ್ಕೆ ಮಾಡಲು ಇದು ಇನ್ನೊಂದು ಕಾರಣವಾಗಿರಬಹುದು
ಶಿವಮೊಗ್ಗ ಬಿಜೆಪಿಯ ಭದ್ರಕೋಟೆಯಾಗಿದ್ದರೂ ಇದನ್ನೆ ಪ್ರಚಾರದ ಕಣವಾಗಿಟ್ಟುಕೊಂಡಿರುವ ನರೇಂದ್ರ ಮೋದಿ ಅವರು ಎಲ್ಲಾ ಕಡೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂಬ ಸಂದೇಶವನ್ನು ಈ ಮಲೆನಾಡು ಕ್ಷೇತ್ರದಿಂದಲೆ ರವಾನಿಸಲಿದ್ದಾರೆ ಎನ್ನುವುದು ಅಷ್ಟೇ ಸತ್ಯ.!

ಶಿವಮೊಗ್ಗ ಕ್ಷೇತ್ರದ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ತಮ್ಮ ಮಗನಿಗೆ ಟಿಕೆಟ್ ನೀಡಲಿಲ್ಲ ಎನ್ನುವ ಕಾರಣಕ್ಕೆ ಇದೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.ಇದರಿಂದ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆಯು ಇದೆ, ಈ ಕಾರಣಕ್ಕೆ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಹಲವು ನಾಯಕರಿಗೂ ಪ್ರಚಾರದ ವೇಳೆ ಮೋದಿ ಸಂದೇಶ ರವಾನಿಸಲಿದ್ದಾರೆಂಬ ಮಾತು ಕೇಳಿ ಬರುತ್ತಿದೆ.ಇದೆ ಸಂಧರ್ಭದಲ್ಲಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಭೇಟಿಮಾಡಿ ಮಾತುಕತೆಯ ಮುಖಾಂತರ ಸಮಾಧಾನ ಪಡಿಸಿ ಬಹಿರಂಗ ಸಭೆಗೆ ಕರೆತರುವ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಈ ಬಾರಿಯ ಲೋಕಸಭಾ ಚುನಾವಣ ಪ್ರಚಾರಕ್ಕೆ ಶಿವಮೊಗ್ಗ ನಗರಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಲಿ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ತೊಡೆತಟ್ಟಲಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!