ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ
ಪರಿಷ್ಕೃತ ಆಡಳಿತಾತ್ಮಕ ಅನುಮೋದನೆ ನೀಡಿದ
ಸರ್ಕಾರ ಹಾಗೂ ಕ್ಷೇತ್ರದ ಶಾಸಕರಿಗೆ ಅಭಿನಂದನೆ: ಗ್ರಾಮಪಂಚಾಯತಿ ಒಕ್ಕೂಟದ ಅಧ್ಯಕ್ಷ , ಟಿ ಜೆ ಅನಿಲ್
ತೀರ್ಥಹಳ್ಳಿ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಆರಂಭವಾಗಿದ್ದು ಜಾಕ್ವೆಲ್ ಅನ್ನು ಮಾಣಿ ಡ್ಯಾಂ ನ ಹಿನ್ನೀರಿನಲ್ಲಿ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿಲ್ಲ ಎಂಬ ಕಾರಣ ನೀಡಿ ಯೋಜನೆಯನ್ನೇ ರದ್ದುಗೊಳಿಸುವ ಪ್ರಯತ್ನ ನಡೆಯುತ್ತಲೇ ಇದೆ.
ತಾಲೂಕಿನ ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಏರ್ಪಟ್ಟಿದ್ದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಯಾವಾಗ ನೀರು ದೊರಕುತ್ತದೆಂಬ ಆಶಾಕಂಗಳಲ್ಲಿ ಗ್ರಾಮೀಣ ಭಾಗದ ಜನತೆ ನೋಡುತ್ತಿದ್ದಾರೆ.
ಮುಳುಬಾಗಿಲು,ಹೆಗ್ಗೋಡು ಗ್ರಾಮದ ರೈತರನ್ನು ಗಮನದಲ್ಲಿಟ್ಟುಕೊಂಡು ತಾಲೂಕಿನ ಜನತೆಗೆ ಶುದ್ದ ಕುಡಿಯುವ ನೀರನ್ನು ಒದಗಿಸುವ ದೃಷ್ಟಿಯಿಂದ ಕ್ಷೇತ್ರದ ಶಾಸಕರು ಜಾಕ್ವೆಲ್ ನಿರ್ಮಾಣವನ್ನು ಮಾಣಿ ಡ್ಯಾಂ ನ ಹಿನ್ನೀರಿನಲ್ಲಿ ನಿರ್ಮಿಸಲು ಪರಿಷ್ಕೃತ ಆಡಳಿತಾತ್ಮಕ ಅನುಮೋದನೆ ನೀಡಲು ಸರ್ಕಾರಕ್ಕೆ ವಿನಂತಿಸಿದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರನ್ನು ಪೂರೈಸಲು ಮುಂದಾದ ಸರ್ಕಾರ ಹಾಗೂ ಕ್ಷೇತ್ರದ ಶಾಸಕರಾದಂತಹ ಆರಗ ಜ್ಞಾನೇಂದ್ರರವರಿಗೆ ತಾಲೂಕು ಗ್ರಾಮಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರುಗಳ ಒಕ್ಕೂಟದ ಅಧ್ಯಕ್ಷ ಅನಿಲ್ ಟಿಜೆ ಎಲ್ಲಾ ಗ್ರಾಮೀಣ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.