ಪದೇ ಪದೇ ಕೆಳಬೇಡಿ ನಾನು ಸ್ಪರ್ಧಿಸೋದು ಸತ್ಯ, ವಿಜಯೇಂದ್ರ ರಾಜೀನಾಮೆ ಕೊಡೋದು ಖಚಿತ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ.!
ASHWASURYA/SHIVAMOGGA
✍️ SUDHIR VIDHATA
ಅಶ್ವಸೂರ್ಯ/ಶಿವಮೊಗ್ಗ: ನಾನು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಯ ಅಖಾಡಕ್ಕೆ ಇಳಿಯುತ್ತಿದ್ದಂತೆ ನನ್ನ ಮಗನಿಗೆ ಎಂಎಲ್‌ಸಿ, ನನಗೆ ರಾಜ್ಯಪಾಲರ ಹುದ್ದೆ ಆಫರ್ ಕೊಟ್ಟಿದ್ದಾರೆ ಅದರ ಅವಶ್ಯಕತೆ ನಮಗಿಲ್ಲ
ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ , ನನ್ನ ಅಭಿಮಾನಿಗಳು, ಕಾರ್ಯಕರ್ತರು, ಆಪ್ತರು ಹಿತೈಷಿಗಳ ಜೋತೆಗೆ ಹಿಂದೂ ಬಾಂಧವರೊಂದಿಗೆ ನಾನು ಚರ್ಚಿಸಿದ ನಂತರವೇ ಚುನಾವಣೆಯನ್ನು ಎದುರಿಸಲು ಸಿದ್ಧನಾಗಿದ್ದು, ನಾನು ಈ ಚುನಾವಣೆಯನ್ನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನು ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ಶಿವಮೊಗ್ಗ ಕ್ಷೇತ್ರದ ಮೇಲೆ ಸಂಪೂರ್ಣ ದೇಶದ ಕಣ್ಣಿದೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಮತ್ತು ಬಿಜೆಪಿಯ ಪ್ರಬಲ ನಾಯಕ ಮಾಜಿ ಸಚಿವ ಈಶ್ವರಪ್ಪ ಕೂಡ ಬಿಜೆಪಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಈ ಕಾರಣದಿಂದಲೇ ರಾಜ್ಯದಲ್ಲಿ ಚರ್ಚೆ ಗ್ರಾಸವಾಗಿದೆ ಶಿವಮೊಗ್ಗ ಲೋಕಸಭಾ ಕ್ಷೇತ್ರ.ನಾನು ಈ ಚುನಾವಣೆಯಲ್ಲಿ ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನನ್ನನ್ನು ಚುನಾವಣ ಕಣದಿಂದ ದೂರ ಇರಲು ಎಂಎಲ್‌ಸಿ, ರಾಜ್ಯಪಾಲರ ಹುದ್ದೆ ಆಫರ್ ಬಂದಿದೆ
ಮುಂದಿನ ಜೂನ್‌ನಲ್ಲೇ ಪರಿಷತ್ ಸ್ಥಾನ ಖಾಲಿ ಆಗುತ್ತದೆ, ನಿಮ್ಮ ಮಗನನ್ನ ಎಂಎಲ್‌ಸಿ ಮಾಡ್ತೀವಿ. ನಿಮಗೆ ರಾಜ್ಯಪಾಲರ ಹುದ್ದೆ ಕೊಡ್ತೀವಿ ಅಂತ ಬಿಜೆಪಿ ಹೈಕಮಾಂಡ್ ನನಗೆ ಆಫರ್ ಕೊಟ್ಟಿದೆ. ನನಗೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ಅಂತಹಾ ಆಸೆಯು ನನಗಿಲ್ಲ, ಪಕ್ಷ ಉಳಿಯಬೇಕು ಅಷ್ಟೇ. ಕರ್ನಾಟಕ ಬಿಜೆಪಿ ಪಾರ್ಟಿ ಬಿಎಸ್‌ವೈ ಕುಟುಂಬದ ಸರ್ವಾಧಿಕಾರದಿಂದ ಮುಕ್ತವಾಬೇಕು ಎನ್ನುವುದಷ್ಟೆ ನನ್ನ ಮುಖ್ಯ ಗುರಿ ಎಂದು ಈಶ್ವರಪ್ಪ ಗುಡುಗಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ನನಗೆ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ, ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕೂ ತೊಂದರೆ ಆಗಲ್ಲ, ನೂರಕ್ಕೆ ನೂರು ನೀವು ಗೆಲ್ಲುತ್ತೀರಾ ಎಂದು ಸ್ವಾಮೀಜಿಗಳು ಹೇಳಿದ್ದಾರೆ ನನ್ನನ್ನು ಆಶೀರ್ವದಿಸಿದ್ದಾರೆ ಎಂದು ಈಶ್ವರಪ್ಪ ನವರು ತಿಳಿಸಿದ್ದಾರೆ.
ಸರ್ವಾಧಿಕಾರಿ ಧೋರಣೆಯಿಂದ ಕರ್ನಾಟಕದಲ್ಲಿ ಬಿಜೆಪಿ ಮುಕ್ತವಾಗಬೇಕು
ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿ ಒದ್ದಾಡುತ್ತಿದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ.? ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಯಾರೇ ಬಂದು ಮನವೊಲಿಸಿದರೂ ತಲೆಬಾಗುವುದಿಲ್ಲ ಹಿಂದೆ ಸರಿಯುವ ಮಾತಿಲ್ಲ,
ರಾಜ್ಯದಲ್ಲಿ ಈ ಬಾರಿ ಬಿಜೆಪಿ 28 ಸ್ಥಾನ ಗೆಲ್ಲಬೇಕು. ನಾನು ಕೂಡ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಂದು ಕುಟುಂಬದ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಮಾಡಿ ಗೆಲ್ಲುತ್ತೇನೆ, ಗೆದ್ದ ನಂತರ ಬಿಜೆಪಿ ಸೇರುತ್ತೇನೆ ಎಂದು ನುಡಿದಿದ್ದಾರೆ ಕೆ ಎಸ್ ಈಶ್ವರಪ್ಪ