ಶಿವರಾಜ್ ಕುಮಾರ್ ಸಿನಿಮಾಗಳಿಗೆ ನಿರ್ಬಂಧ ಹೇರಲು ಸಾಧ್ಯವಿಲ್ಲ : ಚುನಾವಣಾ ಆಯೋಗ
ASHWASURYA/SHIVAMOGGA
✍️ ಸುಧೀರ್ ವಿಧಾತ
ಅಶ್ವಸೂರ್ಯ/ಶಿವಮೊಗ್ಗ: ಗೀತಾ ಶಿವರಾಜ್ ಕುಮಾರ್ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದು ಚುನಾವಣೆಯ ಕಣದಲ್ಲಿದ್ದಾರೆ.ಇವರ ಪತಿ ಜನಪ್ರಿಯ ಚಿತ್ರನಟರಾಗಿರುವ ಶಿವರಾಜ್ ಕುಮಾರ್ ಅವರು ಪತ್ನಿ ಪರವಾಗಿ ನಿರಂತರವಾಗಿ ಪ್ರಚಾರದ ಕಣದಲ್ಲಿದ್ದಾರೆ. ಅವರು ಪ್ರಭಾವಿ ವ್ಯಕ್ತಿ ಆಗಿರುವುದರಿಂದ ಅವರು ನಟಿಸಿದ ಸಿನಿಮಾ, ಜಾಹೀರಾತುಗಳ ಮೇಲೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಕೆ ಆಗಿತ್ತು. ಸಿನಿಮಾಗಳ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಚುನಾವಣೆಗೆ ಸ್ಪರ್ಧಿಸುವ ಅಥವಾ ಪ್ರಚಾರ ಮಾಡುವ ನಟರನ್ನು ಒಳಗೊಂಡ ಸಿನಿಮಾಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನದಲ್ಲಿ ಮಾತ್ರ ನಾವು ನಿಷೇಧಿಸಬಹುದು. ಖಾಸಗಿ ಟಿವಿ ಚಾನೆಲ್ ಗಳು ಮತ್ತು ಸಿನಿಮಾ ಥಿಯೇಟರ್ ಗಳಲ್ಲಿ ವಾಣಿಜ್ಯ ಪ್ರದರ್ಶನಗಳನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.