ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಡ್ವಾಣಿ ನಿವಾಸಕ್ಕೆ ತೆರಳಿ ದೇಶದ ಅತ್ಯುನ್ನತ ನಾಗರಿಕ ಗೌರವ “ಭಾರತ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ASHWASURYA/SHIVAMOGGA
✍️ ಸುಧೀರ್ ವಿಧಾತ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹಿರಿಯ ರಾಜಕಾರಣಿ ಎಲ್.ಕೆ.ಅಡ್ವಾಣಿ ಅವರ ಮನೆಗೆ ತೆರಳಿ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ “ಭಾರತ ರತ್ನ” ಪ್ರಶಸ್ತಿಯನ್ನು ಅವರ ನಿವಾಸದಲ್ಲಿ ಪ್ರಧಾನ ಮಾಡಿದರು.
ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಶನಿವಾರ ಪ್ರದಾನ ಮಾಡಲಾಗಿತ್ತು. ಅನಾರೋಗ್ಯದ ಕಾರಣ ನಿನ್ನೆ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿತ್ತು.ಅಡ್ವಾಣಿ ಅವರ ಮನೆಗೆ ಬಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿಯನ್ನು ಪ್ರಧಾನ ಮಾಡುವ ಸಮಯದಲ್ಲಿ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.