ಬೈಂದೂರು; ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ನನ್ನದೆ ವಿಶ್ವಾಸ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ

ಬೈಂದೂರು; ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ನನ್ನದೆ ವಿಶ್ವಾಸ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ

ASHWASURYA/SHIVAMOGGA

✍️ ಸುಧೀರ್ ವಿಧಾತ

ಅಶ್ವಸೂರ್ಯ/ಶಿವಮೊಗ್ಗ; ಹಿಂದುತ್ವವನ್ನು ಒಪ್ಪಿಕೊಂಡಿರುವ ಕಾರ್ಯಕರ್ತರು ನನ್ನ ಜೊತೆಗಿದ್ದಾರೆ. ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ನಾನು ಗೆಲುವು ಸಾಧಿಸುವೆ. ಎಂದೆಂದೂ ಕಾರ್ಯಕರ್ತರ ಜೊತೆಗಿರುವೆ, ಕಾರ್ಯಕರ್ತರೂ ನನ್ನ ಕೈಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನ ಉಪ್ಪುಂದದ ದೇವಕಿ ಸಭಾಭವನದಲ್ಲಿ ರಾಷ್ಟ್ರ ಭಕ್ತ ಬಳಗ ವತಿಯಿಂದ ಆಯೋಜಿಸಲಾಗಿದ್ದ ಬೈಂದೂರು ಹೋಬಳಿ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಎಂದರು. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೆಲಸಮಾಡುತ್ತಿದೆ, ಇದಕ್ಕೆ ಅಂತ್ಯಹಾಡುವುದೆ ನನ್ನ ಗುರಿ ಎಂದು ಹೇಳಿದರು.


ರಾಷ್ಟ್ರಭಕ್ತ ಬಳಗ ಬೈಂದೂರು ಇದರ ಮುಖಂಡ ಶ್ರೀಧರ ಬಿಜೂರು, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಗೋಪಾಲ ನಾಡ, ಸುವರ್ಣ ಪೂಜಾರಿ, ಈಶ್ವರಪ್ಪ ಪುತ್ರ ಕಾಂತೇಶ್, ಮೀನುಗಾರ ಮುಖಂಡ ಯಶು ಗಂಗೊಳ್ಳಿ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಪೂಜಾರಿ, ಪಟ್ಟಣ ಪಂಚಾಯತ್ ಸದಸ್ಯ ಗಣೇಶ್ ರಾವ್, ಪಟ್ಟಣ ಪಂಚಾಯತ್ ಮುಖಂಡ ಗೋಪಾಲ ಗಾಣಿಗ, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈಶ್ವರಪ್ಪ ಸಮಾವೇಶದಲ್ಲಿ ಬಿರಿಯಾನಿ ಹಂಚಿಕೆಗೆ ಬ್ರೇಕ್ ಬಿತ್ತು.!

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಇಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪನವರು ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಂಡಿದ್ದರು.ಈ
ಸಮಾವೇಶದಲ್ಲಿ ಕಾರ್ಯಕರ್ತರಿಗೆ ಊಟಕ್ಕಾಗಿ ಬಿರಿಯಾನಿ ಸಿದ್ಧಪಡಿಸಲಾಗುತ್ತಿತ್ತು.

ಇದರ ಮಾಹಿತಿ ಪಡೆದ ಚುನಾವಣೆಯ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿ ಬಿರಿಯಾನಿ ಹಂಚಿಕೆ ಮಾಡದಂತೆ ತಡೆ ನೀಡಿದೆ. ಬಿರಿಯಾನಿ ವಿತರಿಸಿದಲ್ಲಿ ಚುನಾವಣಾ ವೆಚ್ಚಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದು ಹೀಗಾಗಿ ಬಿರಿಯಾನಿ ತಯಾರಿಸುವುದನ್ನು ನಿಲ್ಲಿಸಲಾಗಿದೆ.

ಸಮಾವೇಶದಲ್ಲಿ ಕಾದು ಕಾದು ಸುಸ್ತಾದ ಕಾರ್ಯಕರ್ತರು ಅಲ್ಲಿಂದ ತೆರಳಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!