ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಶುಭಾರಂಭಗೊಂಡಿದೆ
, ASHWASURYA/SHIVAMOGGA
✍️ ಸುಧೀರ್ ವಿಧಾತ
ಸುಸಜ್ಜಿತ ಕ್ಯಾತ್ ಲ್ಯಾಬ್ ನೊಂದಿಗೆ,ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ, ಎಕೋ ಟಿಎಂಟಿ, ಪೇಸ್ ಮೇಕರ್ ಜೋತೆಗೆ ಈ ಎಲ್ಲಾ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಲಭ್ಯವಿರುತ್ತದೆ
ಅಶ್ವಸೂರ್ಯ/ಶಿವಮೊಗ್ಗ; ಜಿಲ್ಲೆಯ ಹೆಸರಾಂತ ಆಸ್ಪತ್ರೆಗಳಲ್ಲಿ ಒಂದಾದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಶುಭಾರಂಭಗೊಂಡಿದೆ.
ಶಿವಮೊಗ್ಗ ಸರ್ಜಿ ಆಸ್ಪತ್ರೆಗಳ ಸಮೂಹಕ್ಕೆ ಮತ್ತೊಂದು ಆರೋಗ್ಯ ಸೇವಾ ಸೌಲಭ್ಯ ಇದೀಗ ಸೇರ್ಪಡೆಗೊಂಡಿದ್ದು, ಸೋಮವಾರ ಬೆಳಗ್ಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸುಸಜ್ಜಿತ ಕ್ಯಾತ್ ಲ್ಯಾಬ್ ಚಿಕಿತ್ಸಾ ಸೌಲಭ್ಯಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಭಾರಂಭಗೊಳಿಸಲಾಯಿತು. ಈ ಸಂದರ್ಭದಲ್ಲಿ ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ, ನಿರ್ದೇಶಕಿ ಶ್ರೀಮತಿ ನಮಿತಾ ಸರ್ಜಿ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವಾದಿರಾಜ್ ಕುಲಕರ್ಣಿ, ಹೃದಯರೋಗ ತಜ್ಞ ಡಾ. ವಿಜೇತ್, ಡಾ.ಹರೀಶ್, ಸರ್ಜಿ ಅವರ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಎಸ್.ವಿ. ಆಸ್ಪತ್ರೆಯ ಆಡಳಿತಾಧಿಕಾರಿ ಕೆ.ಆರ್.ಪುರುಷೋತ್ತಮ್, ಹರ್ಷ ಸರ್ಜಿ, ಶ್ರೀಮತಿ ನಾಗವೇಣಿ ಸರ್ಜಿ, ಈಶ್ವರ್ ಸರ್ಜಿ, ಶ್ರೀಮತಿ ಡಾ.ಶ್ರೇಯಾ ಸರ್ಜಿ ಮತ್ತಿತರರು ಪಾಲ್ಗೊಂಡಿದ್ದರು.