ರಾಮೇಶ್ವರಮ್ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ :ತೀರ್ಥಹಳ್ಳಿಯ ಶಂಕಿತ ಮುಸ್ಲಿಂ ಯುವಕರ ಜೊತೆ ಸಂಪರ್ಕದಲ್ಲಿದ್ದ ಬಿಜೆಪಿ ಕಾರ್ಯಕರ್ತ ಎನ್ಐಎ ವಶಕ್ಕೆ.!!
ASHWASURYA/SHIVAMOGGA
✍️ ಸುಧೀರ್ ವಿಧಾತ
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ.
ಅಶ್ವಸೂರ್ಯ/ಶಿವಮೊಗ್ಗ,ಏ.5 ; ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ನನ್ನು ವಶಕ್ಕೆ ಪಡೆದಿರುವ ಎನ್ ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆಂದು ವರದಿ ತಿಳಿಸಿದೆ. ವಿಚಾರಣೆ ಮಾಡಿ ಬಿಟ್ಟು ಕಳಿಸುವ ಸಾಧ್ಯತೆಯು ಇದೆ,
ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಕಳೆದ ವಾರ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು ಇಬ್ಬರು ಮುಸ್ಲಿಂ ಯುವಕರ ಮನೆಗಳು ಹಾಗೂ ಮೊಬೈಲ್ ಅಂಗಡಿಯ ಶೋಧ ನಡೆಸಿದ್ದರು.
ಇದೀಗ ಶಂಕಿತ ಮುಸ್ಲಿಂ ಯುವಕರ ಜೊತೆ ಸಂಪರ್ಕದಲ್ಲಿದ್ದ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.