ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ
ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತಂದೆಗೆ ತಕ್ಕ ಮಗ ; ಮಾಜಿ ಸಿಎಂ ಬೊಮ್ಮಾಯಿ
ASHWASURYA/SHIVAMOGGA
✍️ ಸುಧೀರ್ ವಿಧಾತ
ಅಶ್ವಸೂರ್ಯ/ಶಿವಮೊಗ್ಗ ; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತಂದೆಗೆ ತಕ್ಕ ಮಗ, ಜಗ ಮೆಚ್ಚಿದ ಮಗ. ಆದರೆ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸೋಲುವ ಪಕ್ಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತಂದೆಗೆ ತಕ್ಕ ಮಗ, ಜಗ ಮೆಚ್ಚಿದ ಮಗ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿವಮೊಗ್ಗದಲ್ಲಿ ಇಂದು ( ಏ,18) ಗುರುವಾರ ಬಿ.ವೈ ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಗೋಪಿ ವೃತ್ತದಲ್ಲಿ ನಿರ್ಮಿಸಲಾದ ವೇದಿಕೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಹೊಸ ಗ್ಯಾರೆಂಟಿ ಗಳನ್ನು ಘೊಷಣೆ ಮಾಡಿದ್ದಾರೆ. ಪ್ರತಿ ಮನೆ ಮಹಿಳೆಯರಿಗೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಲೋಕಸಭೆಯಲ್ಲಿ 543 ಸ್ಥಾನಗಳಿವೆ. ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳು. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಪರೀಕ್ಷೆಯಲ್ಲಿ ಪಾಸ್ ಆಗಲು ಕನಿಷ್ಠ 35 ಅಂಕಗಳು ಬೇಕು. ಆದರೆ, ಇವರು ಪರೀಕ್ಷೆ ಬರೆದಿರುವುದೇ 20 ಅಂಕಗಳಿಗೆ ಇವರು ಪಾಸ್ ಆಗಲು ಹೇಗೆ ಸಾಧ್ಯ? ಕಾಂಗ್ರೆಸ್ ಪಕ್ಷ ಫೆಲ್ ಆಗುವ ಬೇಕಾಬಿಟ್ಟಿ ಪಕ್ಷ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್ ಸಂದರ್ಭದಲ್ಲಿ ದೇಶದ ನೂರಾ ಮೂವತ್ತು ಕೋಟಿ ಜನರಿಗೆ ಮೂರು ಬಾರಿ ಲಸಿಕೆ ಕೊಡಿಸಿ ಎಲ್ಲರ ಜೀವ ಉಳಿಸಿದ್ದಾರೆ. ಕೊವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದಾರೆ. ಈಗಲೂ ಐದು ಕೆಜಿ ಅಕ್ಕಿಯನ್ನು ನರೇಂದ್ರ ಮೋದಿಯವರು ಉಚಿತವಾಗಿ ನೀಡುತ್ತಿದ್ದಾರೆ. ಪ್ರತಿಯೊಬ್ಬರ ಮನೆಗಳಿಗೂ ಗಂಗೆ ರೂಪದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಲ್ಲಿಯ ನೀರು ಕೊಡುತ್ತಿದ್ದಾರೆ. ಎಲ್ಲರಿಗೂ ಅನ್ನ, ನೀರು, ಲಸಿಕೆ ಕೊಟ್ಟು ಜೀವ ಉಳಿಸಿದ ನರೇಂದ್ರ ಮೋದಿಯವರ ಋಣ ತೀರಿಸಬೇಕು ನಾವೆಲ್ಲರೂ ಎಂದರು.ಎಲ್ಲರೂ ಕಮಲದ ಗುರುತಿಗೆ ಮತ ಹಾಕಿ, ಅವರ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಲ್ಕೂವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ರಾಘವೇಂದ್ರ ಅವರನ್ನು ಕೂಡ ನಾಲ್ಕೂವರೆ ಲಕ್ಷಕ್ಕಿಂತಲೂ ಅಧಿಕ ಮತಗಳಿಂದ ಆರಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಎಚ್. ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಸಿ.ಟಿ.ರವಿ, ಬೈರತಿ ಬಸವರಾಜ್, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಶಾಸಕರಾದ ಶಾರದಾ ಪೂರ್ಯ ನಾಯಕ್ ಹಾಗೂ ಮತ್ತಿತರು ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು