ದೇಶದ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ
ASHWASURYA/SHIVAMOGGA
✍️ ಸುಧೀರ್ ವಿಧಾತ
ಮೊದಲ ಹಂತದ ಮತದಾನದಲ್ಲಿ ರಾಷ್ಟ್ರದ ಕೆಲವು ಪ್ರಬಲ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ
ಅಶ್ವಸೂರ್ಯ/ನವದೆಹಲಿ: ದೇಶದ ಸಾರ್ವತ್ರಿಕ ಲೋಕಸಭೆ ಚುನಾವಣೆ ಒಟ್ಟು 7 ಹಂತದಲ್ಲಿ ನಡೆಯಲಿದ್ದು ಇಂದು ಮೊದಲ ಹಂತದಲ್ಲಿ 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
21 ರಾಜ್ಯಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. ಛತ್ತೀಸ್ಗಢ, ಮೇಘಾಲಯ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ, ಮಿಜೋರಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಮಣಿಪುರ,ನಾಗಾಲ್ಯಾಂಡ್, ರಾಜಸ್ಥಾನ ಸೇರಿದಂತೆ 21 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
ಮೊದಲ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ನಿತಿನ್ ಗಡ್ಕರಿ, ಭೂಪೇಂದ್ರ ಯಾದವ್, ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಕನಿಮೋಳಿ, ಅಣ್ಣಾಮಲೈ, ತಮಿಳ್ ಸಾಯಿ ಸೌಂದರ್ ರಾಜನ್ ಸೇರಿದಂತೆ 9 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರು ಹಾಗೂ ಒಬ್ಬರು ಸ್ವಯಂ ನಿವೃತ್ತ ಐಪಿಎಸ್ ಅಧಿಕಾರಿ ಚುನಾವಣೆಯ ಕಣದಲ್ಲಿದ್ದಾರೆ.
ಇಂದು ಮತದಾನ ನಡೆಯಲಿರುವ 102 ಲೋಕಸಭಾ ಕ್ಷೇತ್ರಗಳ ಪೈಕಿ 2019ರಲ್ಲಿ ಯುಪಿಎ 45, ಎನ್.ಡಿ.ಎ. 41 ಸ್ಥಾನ ಗೆದ್ದಿತ್ತು. ಮೊದಲ ಹಂತದಲ್ಲಿ 16.63 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.