ಜ್ಯೋತಿರ್ಲಿಂಗ ಹೊನಕಟ್ಟಿ
ಪಾತಕೀ ಜೊತೆಗೆ ಪೊಲೀಸಪ್ಪನ ನಂಟು.! ಸಿಸಿಬಿ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ಸಸ್ಪೆಂಡ್.!
news.ashwasurya.in
ನಟೋರಿಯಸ್ ರೌಡಿಯೊಬ್ಬನ ಜೊತೆಗೆ ಕೈಮಿಲಾಯಿಸಿ ಹಣಕಾಸು ವ್ಯವಹಾರದ ನಂಟು ಹೊಂದಿದ್ದ ಆರೋಪದ ಹಿನ್ನಲೆಯಲ್ಲಿ ಸಿಸಿಬಿ ಸಂಘಟಿತ ಅಪರಾಧ ದಳದ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿಯನ್ನು ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ASHWASURYA/SHIVAMOGGA
✍️ ಸುಧೀರ್ ವಿಧಾತ
ಅಶ್ವಸೂರ್ಯ/ಬೆಂಗಳೂರು : ನಟೋರಿಯಸ್ ರೌಡಿಯೊಬ್ಬನ ಜೊತೆಗೆ ಹಣಕಾಸು ವ್ಯವಹಾರದ ನಂಟು ಹೊಂದಿದ್ದ ಆರೋಪದ ಮೇರೆಗೆ ಸಿಸಿಬಿ ಸಂಘಟಿತ ಅಪರಾಧ ದಳದ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗರನ್ನು ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಿಸಿಬಿ ಓಸಿಡಬ್ಲ್ಯು ದಳದ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ಪವಿತ್ರ ಖಾಕೀತೊಟ್ಟು ದಕ್ಷತೆ ಮೆರೆಯಬೇಕಾದ ಸ್ಥಳದಲ್ಲಿ ಭಕ್ಷತೆಗೆ ರೌಡಿಯೊಬ್ಬನ ಜೊತೆಗೆ ಹಣಕಾಸಿನ ವ್ಯವಹಾರದಲ್ಲಿ ಕೈಮಿಲಾಯಿಸಿ ಮಾಡಿದ ಪಾಪದ ಕೇಲಸ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗೊತ್ತಾದ ಹಿನ್ನಲೆಯಲ್ಲಿ ಸದ್ಯಕ್ಕೆ ಪವಿತ್ರ ಖಾಕೀ ಕಳಚಿ ಮನೆಯಲ್ಲಿ ಕುರುವಂತಾಗಿದೆ.! ಕೆಲ ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರತಹಳ್ಳಿ ವ್ಯಾಪ್ತಿಯ ನಟೋರಿಯಸ್ ರೌಡಿ ರೋಹಿತ್‌ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಖಾಕಿಯ ನಂಟು ಬಯಲಾಗಿದೆ.! ತಮ್ಮ ಇಲಾಖೆಯಲ್ಲಿ ಇದ್ದುಕೊಂಡೆ ಪಾಪದ ಕೆಲಸಕ್ಕೆ ಕೈಹಾಕಿದ ಖರಾಬು ಖಾಕೀಯೊಬ್ಬನ ಪ್ರಕರಣ ಬಯಲಾಗಿತ್ತಿದ್ದಂತೆ ಅಲರ್ಟ್ ಅದ ಹಿರಿಯ ಅಧಿಕಾರಿಗಳು ಈ ಬಗ್ಗೆ ಇಲಾಖಾ ಮಟ್ಟದ ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣದ ವಿಚಾರಣೆ ನೆಡೆಸಿದ ಸಿಸಿಬಿಯ ಡಿಸಿಪಿ ಅವರು, ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿ ಆಯುಕ್ತರಿಗೆ ವರದಿ ಸಲ್ಲಿಸಿದ ಹಿನ್ನಲೆಯಲ್ಲಿ. ವರದಿಯನ್ನು ಗಮನಿಸಿದ ಪೊಲೀಸ್ ಆಯುಕ್ತರಾದ ಬಿ ದಯಾನಂದ್ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿಯನ್ನು ಅಮಾನತುಗೊಳಿಸಿದ್ದಾರೆ.
ಪೊಲೀಸ್ ಆಯುಕ್ತರಾದ ಬಿ ದಯಾನಂದ್
ಸಿಸಿಬಿಯ ಓಸಿಡಬ್ಲ್ಯು ದಳದ ಪೂರ್ವ ವಿಭಾಗದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಜ್ಯೋರ್ತಿಲಿಂಗ ಕಾರ್ಯನಿರ್ವಹಿಸುತ್ತಿದ್ದರು ಇನ್ನು ಮಾರತ್ತಹಳ್ಳಿ ರೌಡಿ ರೋಹಿತ್ ಮೇಲೆ ಕೊಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಲೋಕಸಭಾ ಚುನಾವಣಾ ನಿಮಿತ್ತ ನಗರದ ರೌಡಿಗಳ ಮೇಲೆ ಪೊಲೀಸರು ನಿಗಾವಹಿಸಿದ್ದರು. ಅಲ್ಲದೆ ರೌಡಿಗಳ ಮನೆಗಳ ಮೇಲೆ ರಾತ್ರೋರಾತ್ರಿ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯನೆಡೆಸಿದ್ದರು. ಆದರೆ ನಟೋರಿಯಸ್ ರೌಡಿ ರೋಹಿತ್ ಮಾತ್ರ ಪೊಲೀಸರ ಕೈಗೆ ಸಿಕ್ಕಿರಲಿಲ್ಲ.
ಆಗ ರೋಹಿತ್‌ನನ್ನು ಕರೆದು ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ಸೂಚಿಸಿದ್ದರು. ಅದರಂತೆ ಆತನನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆಸಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಆ ವೇಳೆ ರೌಡಿ ಮೊಬೈಲನ್ನು ವಶಕ್ಕೆ ಪಡೆದು ಅಧಿಕಾರಿಗಳು ಪರಿಶೀಲಿಸಿದಾಗ ಪಿಐ ಜ್ಯೋತಿರ್ಲಿಂಗ ಜತೆ ನಿಕಟ ನಂಟು ಬೆಳಕಿಗೆ ಬಂದಿದೆ. ಆಗ ಮತ್ತಷ್ಟು ವಿಚಾರಣೆ ನಡೆಸಿದಾಗ ಹಲವು ಬಾರಿ ಪಿಐ ಜ್ಯೋತಿರ್ಲಿಂಗ ಅವರಿಗೆ ರೌಡಿ ರೋಹಿತ್ ಹಣ ಕೊಟ್ಟಿರುವುದು ಗೊತ್ತಾಯಿತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರಿಗೆ ಡಿಸಿಪಿ ವರದಿ ಸಲ್ಲಿಸಿದರು ಎಂದು ಮೂಲಗಳು ಹೇಳಿವೆ.