ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಸಂಸದ ಬಿ ವೈ ರಾಘವೇಂದ್ರ ಅವರು ಭದ್ರಾವತಿ ತಾಲ್ಲೂಕು ಬಿಳಕಿ ತಾಂಡದ ಮಜ್ಜಿಗೇನಹಳ್ಳಿ ಗ್ರಾಮದಲ್ಲಿ ಚುನಾವಣೆಯ ಪ್ರಚಾರದಲ್ಲಿ
ಯುವಕರ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷಿ ಯೋಜನೆಗಳು : ಶಿವಮೊಗ್ಗ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಸಂಸದ ಬಿ.ವೈ.ರಾಘವೇಂದ್ರ
ASHWASURYA/SHIVAMOGGA
✍️ ಸುಧೀರ್ ವಿಧಾತ
ಅಶ್ವಸೂರ್ಯ/ಶಿವಮೊಗ್ಗ : ಕೇಂದ್ರ ಸರ್ಕಾರ ಎಲ್ಲಾ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಕಳೆದ 10 ವರ್ಷಗಳಲ್ಲಿ ಜಾರಿಗೆ ತಂದಿದೆ. ಸಾಕಷ್ಟು ಯೋಜನೆಗಳು ನಿಮಗಾಗಿ ಕಾದಿದ್ದು ಇವುಗಳ ಅನುಷ್ಟಾನಕ್ಕಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿರುವ ನನ್ನನ್ನು ಬೆಂಬಲಿಸುವಂತೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.
ಭದ್ರಾವತಿ ತಾಲ್ಲೂಕು ಬಿಳಕಿ ತಾಂಡ ಮಜ್ಜಿಗೇನಹಳ್ಳಿ ಗ್ರಾಮಗಳಿಗೆ ಇಂದು ಭೇಟಿ ನೀಡಿ ಮೋದಿ ಸರ್ಕಾರ ಜಾರಿಗೆ ತಂದಿರುವ ಮಹಾತ್ವಾಕಾಂಕ್ಷಿ ಯೋಜನೆಗಳ ಪಟ್ಟಿಗಳನ್ನು ಹಾಗೂ ತಮ್ಮ ಅವಧಿಯಲ್ಲಿ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಕೈಗೊಂಡಿರುವ ಯೋಜನೆಗಳ ಕರ ಪತ್ರವನ್ನು ಮತದಾರರಿಗೆ ನೀಡಿ ಮಾತನಾಡಿದ ಅವರು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ನಮ್ಮ ಮೋದಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಸಮುದಾಯವನ್ನು ವಿಶೇಷವಾಗಿ ಗಮನಿಸಿದ ರಾಘವೇಂದ್ರ, ಯುವ ಸಮುದಾಯಕ್ಕೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ಇದರ ಮೂಲಕ ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಂಡು ಕಮಲದ ಗುರುತಿಗೆ ಮತ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶಪ್ಪ, ರಾಜು ತಲ್ಲೂರು, ರಾಹುಲ್ ಬಿದರೆ, ಮಂಜುನಾಥ್, ಆನಂದ್ ಮುಂತಾದವರು ಉಪಸ್ಥಿತರಿದ್ದರು.