ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರದಲ್ಲಿ ಗೀತಾ ಶಿವರಾಜಕುಮಾರ್

ತೀರ್ಥಹಳ್ಳಿ ಕ್ಷೇತ್ರದಲ್ಲಿ ಚುನಾವಣೆಯ ಪ್ರಚಾರದಲ್ಲಿ ಗೀತಾ ಶಿವರಾಜಕುಮಾರ್

” ಸರ್ಕಾರದಿಂದ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಒತ್ತು “

ASHWASURYA/SHIVAMOGGA

✍️ ಸುಧೀರ್ ವಿಧಾತ

ಅಶ್ವಸೂರ್ಯ/ಶಿವಮೊಗ್ಗ: ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಕಾಂಗ್ರೆಸ್ ಸರ್ಕಾರದ ಆದ್ಯ ಕರ್ತವ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಉಂಬ್ಳೆಬೈಲು ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಉಂಬ್ಳೆಬೈಲು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚು ತಲೆ ದೂರಿದೆ. ಅದೇ ರೀತಿ ತುಂಗಾ- ಭದ್ರಾ ನದಿ ಈ ಗ್ರಾಮದ ಸಮೀಪದಲ್ಲಿ ಹಾದು ಹೋಗುತ್ತವೆ. ಆದರೂ ಕೂಡ ಇಲ್ಲಿ ಕೃಷಿ ಜಮೀನಿಗೆ ನೀರು ಒದುಗಿಸುವುದು ಸವಾಲಿನ ಕಾರ್ಯವಾಗಿದೆ. ಕಾಡು ಪ್ರಾಣಿಗಳ ಉಪಟಳದಿಂದ ರೈತರು ಬೆಳೆದ ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಈ ಎಲ್ಲಾ ಸಮಸ್ಯೆಗಳ ಅಹವಾಲು ನನ್ನ ಗಮನದಲ್ಲಿದೆ. ಮುಂದಿನ ದಿನದಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು.
ಈ ಭಾಗದಲ್ಲಿ ಏತ ನೀರಾವರಿ ಯೋಜನೆ ಜಾರಿಗೊಳಿಸಬೇಕು ಎಂದು ಸ್ಥಳೀಯರ ಆಗ್ರಹವಿದೆ. ಇದಕ್ಕೆ ಕೇಂದ್ರದ ಹಂತದ ಕ್ರಮಕ್ಕೆ ಒತ್ತು ನೀಡಲಾಗುವುದು ಎಂದ ಅವರು ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಸೇವೆ ಒದಗಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.


ಮಾಜಿ ಸಚಿವ ಕಿಮ್ಮ‌ನೆ ರತ್ನಾಕರ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಶಕ್ತರ ಬದುಕು ಹಸನಾಗಿದೆ. ಅದೇ ರೀತಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರು, ಮಧ್ಯಮ ವರ್ಗದವರು ಸೇರಿದಂತೆ ಕೂಲಿ ಕಾರ್ಮಿಕರಿಗೆ ನೆರವಾಗಲು ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ. ಆದ್ದರಿಂದ,ಇಲ್ಲಿ ” ನುಡಿದಂತೆ ನಡೆದಿದ್ದೇವೆ ” ಎನ್ನುವ ನಾನ್ನುಡಿ ಮತ್ತೊಮ್ಮೆ ಮೊಳಗಲಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಹರಸಬೇಕು ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮೇಲಿನ ಪ್ರೀತಿ- ವಾತ್ಸಲ್ಯ ಗ್ರಾಮದ ಜನರ ಮೊಗದಲ್ಲಿ ಕಾಣುತ್ತಿರುವುದು ಸಂತಸ ತಂದಿದೆ. ಅದೇ ರೀತಿ, ಪತ್ನಿ ಗೀತಾ ಅವರು ಕ್ಷೇತ್ರದ ಜನರ ಕಷ್ಟಗಳಿಗೆ ಖಂಡಿತ ನೆರವಾಗಲಿದ್ದಾರೆ. ಅದಕ್ಕೆ ನಾನು ಗ್ಯಾರಂಟಿ ನೀಡುತ್ತಿದ್ದೇನೆ. ಆದ್ದರಿಂದ, ಗೀತಾ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಕೋರಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಕಾಂಗ್ರೆಸ್ ಮುಖಂಡ ದುಗ್ಗಪ್ಪ ಗೌಡ, ಅಮರ ನಾಥ ಶೆಟ್ಟಿ, ಧೀರರಾಜ್ ಹೊನ್ನವಿಲೆ,ಕುರುವಳ್ಳಿ ನಾಗರಾಜ್ ಸೇರಿದಂತೆ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!