ರಾಷ್ಟ್ರಕ್ಕೆ ಮೋದಿ ಬೇಕು ಎಂದು ಪಣ ತೊಟ್ಟಿದ್ದಾರೆ. ಶಿವಮೊಗ್ಗ ಲೋಕಸಬಾ ಕ್ಷೇತ್ರದಿಂದಲೂ ಮೋದಿಯವರಿಗೆ ದೊಡ್ಡ ಮಟ್ಟದ ಬೆಂಬಲವನ್ನು ಮತದಾರರು ಈ ಚುನಾವಣೆಯಲ್ಲಿ ನೀಡಲಿದ್ದಾರೆ : ಬಿಜೆಪಿ ಅಭ್ಯರ್ಥಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ರಾಷ್ಟ್ರಕ್ಕೆ ಮೋದಿ ಬೇಕು ಎಂದು ಪಣ ತೊಟ್ಟಿದ್ದಾರೆ. ಶಿವಮೊಗ್ಗ ಲೋಕಸಬಾ ಕ್ಷೇತ್ರದಿಂದಲೂ ಮೋದಿಯವರಿಗೆ ದೊಡ್ಡ ಮಟ್ಟದ ಬೆಂಬಲವನ್ನು ಮತದಾರರು ಈ ಚುನಾವಣೆಯಲ್ಲಿ ನೀಡಲಿದ್ದಾರೆ : ಬಿಜೆಪಿ ಅಭ್ಯರ್ಥಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ASHWASURYA/SHIVAMOGGA

✍️ ಸುಧೀರ್ ವಿಧಾತ

ಅಶ್ವಸೂರ್ಯ/ಶಿವಮೊಗ್ಗ: ಶುಕ್ರವಾರ ನಗರದ ನೆಹರೂ ಕ್ರೀಡಾಂಗಣ, ಅಲ್ಲಮಪ್ರಭು ಮೈದಾನ ಹಾಗೂ ಕುಂಬಾರಗುಂಡಿ ಸಿನಿಮಾ ರಸ್ತೆ, ಬಟ್ಟೆ ಮಾರುಕಟ್ಟೆಗೆ ತೆರಳಿ ಅಲ್ಲಿರುವವರನ್ನು ಸಂಪರ್ಕಿಸಿ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರದ ನೆಹರೂ ಕ್ರೀಡಾಂಗಣ ಸಾಕಷ್ಟು ಅಭಿವೃದ್ದಿಯಾಗಿದೆ ಆ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದೆ ಎಂದರು.

ಗೋಪಾಳ ಬಡಾವಣೆಯಲ್ಲಿ ಒಳಾಂಗಣ ಕ್ರೀಡಾಂಗಣ ಟೆನ್ನಿಸ್‌ಕೋರ್ಟ್, ಈಜುಕೊಳ ಮುಂತಾದವುದನ್ನು ನಿರ್ಮಿಸುವ ಮೂಲಕ ಆ ಭಾಗದ ಜನತೆಗೆ ಅನುಕೂಲ ಮಾಡಿಕೊಡಲಾಗಿದೆ. ವಾಜಪೇಯಿ ಬಡಾವಣೆಯಲ್ಲಿ ಹಾಕಿ ಸ್ಟೇಡಿಯಂ ಸೇರಿದಂತೆ ಕ್ರೀಡಾಚಟುವಟಿಕೆಗಳಿಗೆ ಅನುಕೂಲವಾಗುವಂತಹ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಕೂಡ ಸಾಕಷ್ಟು ಅಭಿವೃದ್ದಿ ಪಡಿಸಲಾಗಿಯಿತು. ಇದು ಈ ಹಿಂದೆ ಇದ್ದ ಬಿಜೆಪಿ ಸರ್ಕಾರಕ್ಕೆ ಕ್ರೀಡೆಯ ಬಗ್ಗೆ ಇರುವ ಆಸಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಕೇವಲ ಜಿಲ್ಲಾ ಕೇಂದ್ರಕ್ಕೆ ಮಾತ್ರ ನಮ್ಮ ಸರ್ಕಾರ ಕ್ರೀಡಾಂಗಣ ಅಭಿವೃದ್ದಿ ಕಾರ್ಯವನ್ನು ಕೈಗೊಳ್ಳಲಿಲ್ಲ, ಶಿಕಾರಿಪುರ, ಶಿರಾಳಕೊಪ್ಪ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ಕೂಡ ಕ್ರೀಡಾಪಟುಗಳಿಗೆ ಉತ್ತೇಜನ ಕೊಡುವಂತಹ ಅಭಿವೃದ್ದಿ ಯೋಜನೆಗಳನ್ನು ರೂಪಿಸಿದೆ ಎಂದ ಅವರು,

ನೆಹರೂ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಎಲ್ಲರೊಂದಿಗೆ ಚರ್ಚಿಸಿ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

ಈ ಬಾರಿಯ ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಚುನಾವಣೆಯಾಗಿದೆ. ಪ್ರತಿಯೊಬ್ಬ ಕೂಲಿ ಕಾರ್ಮಿಕ, ಆಟೋಚಾಲಕ, ಪಾನಿಪೂರಿ ಅಂಗಡಿಯವರು ಹೀಗೆ ಎಲ್ಲಾ ಸಮುದಾಯದವರು ಈ ರಾಷ್ಟ್ರಕ್ಕೆ ಮೋದಿ ಬೇಕು ಎಂದು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಬಾ ಕ್ಷೇತ್ರ ಮೋದಿಯವರಿಗೆ ದೊಡ್ಡ ಮಟ್ಟದ ಬೆಂಬಲವನ್ನು ಈ ಚುನಾವಣೆಯಲ್ಲಿ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ್‌ರೆಡ್ಡಿ, ಎಸ್.ಎಸ್,ಜ್ಯೋತಿಪ್ರಕಾಶ್, ದಿವಾಕರ್‌ಶೆಟ್ಟಿ, ರಾಜೇಶ್ ಕಾಮತ್, ಬಾಳೆಕಾಯಿ ಮೋಹನ್, ಮಹೇಶ್‌ಮೂರ್ತಿ, ವಿನೋದ್ ಕುಮಾರ್, ದೀನ್ ದಯಾಳ್,ರಾಜೇಶ್ ಕಾಮತ್, ಮಾಲತೇಶ್, ಸೋಮೇಶ್, ಭಾನುಮತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಕುಂಬಾರಗುಂಡಿ,ಸಿನಿಮಾರಸ್ತೆ, ಬಟ್ಟೆ ಮಾರುಕಟ್ಟೆ, ನೆಹರೂ ಕ್ರೀಡಾಂಗಣ, ಅಲ್ಲಮಪ್ರಭು ಮೈದಾನ ಈ ಭಾಗದಲ್ಲಿ ಮತಯಾಚನೆಗೆ ತೆರಳಿದಾಗ ಅಲ್ಲಿ ನೆರೆದಿದ್ದವರು ರಾಘವೇಂದ್ರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರಲ್ಲದೇ ಮತ್ತೊಮ್ಮೆ ರಾಘಣ್ಣ, ಮತ್ತೊಮ್ಮೆ ಮೋದಿ ಎಂಬ ಘೋಷಣೆಗಳನ್ನು ಕೂಗಿದರು. ಅಲ್ಲದೇ ಸಂಸದರೊಂದಿಗೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು.

Leave a Reply

Your email address will not be published. Required fields are marked *

Optimized by Optimole
error: Content is protected !!