ಜೆಡಿಎಸ್ ಜೊತೆ ಹೊಂದಾಣಿಕೆ ಆನೆ ಬಲ ಬಂದಂತಾಗಿದೆ : ಬಿಜೆಪಿ ಅಭ್ಯರ್ಥಿ ಸಂಸದ ಬಿ ವೈ ರಾಘವೇಂದ್ರ

ಜೆಡಿಎಸ್ ಜೊತೆ ಹೊಂದಾಣಿಕೆ ಆನೆ ಬಲ ಬಂದಂತಾಗಿದೆ : ಬಿಜೆಪಿ ಅಭ್ಯರ್ಥಿ ಸಂಸದ ಬಿ ವೈ ರಾಘವೇಂದ್ರ

ASHWASURYA/SHIVAMOGGA

✍️ ಸುಧೀರ್ ವಿಧಾತ

ಅಶ್ವಸೂರ್ಯ/ಶಿವಮೊಗ್ಗ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ ವೈ ರಾಘವೇಂದ್ರ ಹೇಳಿದರು, ಹುಂಚ ಮಂಡಲ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಹಲವು ವರ್ಷಗಳ ಕಾಲ ಬಿಜೆಪಿಯ ತತ್ವ ಸಿದ್ಧಾಂತವನ್ನು ದ್ವೇಷಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಂತಹ ಒಂದು ಕರೆಗೆ ರಾಷ್ಟ್ರದ ಹಿತ ದೃಷ್ಟಿಯಿಂದ ಬಿಜೆಪಿಯೊಂದಿಗೆ ಕೈಜೋಡಿಸಿರುವುದು ಅತ್ಯಂತ ಒಳ್ಳೆಯ ಬೆಳವಣಿಗೆಯಾಗಿದೆ ಎಂದರು,


ರಾಷ್ಟ್ರದ ಹಿತ ದೃಷ್ಟಿಯಿಂದ ಕಾಂಗ್ರೆಸ್ಸೇತರ ಪಕ್ಷಗಳು ಒಂದಾಗಬೇಕು ಎಂಬ ನರೇಂದ್ರ ಮೋದಿಯವರ ಮನವಿಗೆ ಸ್ಪಂದಿಸಿದ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಈ ಇಳಿ ವಯಸ್ಸಿನಲ್ಲಿಯೂ ಕೂಡ ರಾಜ್ಯ ಸುತ್ತುವ ಮೂಲಕ ಎರಡು ಪಕ್ಷಗಳ ಅಭ್ಯರ್ಥಿಯ ಗೆಲುವಿಗೆ ಹಗಲು ಎನ್ನದೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು
ದೇಶದ ರಕ್ಷಣೆಗಾಗಿ ಮಹಿಳೆಯರ ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಅಭಿವೃದ್ಧಿ ಕಾರ್ಯಗಳು ಆಗಲು ಸಾಧ್ಯ ಎಂಬುದನ್ನು ಅರಿತಿರುವ ಜಾತ್ಯತೀತ ಜನತಾದಳದ ಮುಖಂಡರು ಇಂದು ನಮ್ಮೊಂದಿಗೆ ಕೈಜೋಡಿಸುವ ಮೂಲಕ ಒಳ್ಳೆಯ ಬೆಳವಣಿಗೆಗೆ ನಾಂದಿ ಹಾಡಿದ್ದಾರೆ ಎಂದು ಹೇಳಿದರು.


ವಿಶ್ವವೇ ಭಾರತವನ್ನು ಗಮನಹರಿಸುತ್ತಿದೆ ಅತ್ಯಂತ ಹಿಂದುಳಿದ ರಾಷ್ಟ್ರಗಳಲ್ಲಿ ಒಂದಾಗಿದ್ದ ಭಾರತ ಇಂದು ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ತಲೆ ಎತ್ತಿ ನಿಂತಿದೆ ಇದಕ್ಕೆ ಮೋದಿಯವರ ಆಡಳಿತ ಶೈಲಿಯೇ ಕಾರಣವಾಗಿದೆ ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಭಾರತವನ್ನು ಗೌರವದಿಂದ ನೋಡುವಂತಹ ಕಾರ್ಯವನ್ನು ಮಾಡುತ್ತಿವೆ ಆಮಟ್ಟಕ್ಕೆ ಭಾರತ ಬೆಳೆದು ನಿಂತಿರುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿ ಆಗಿದೆ ಎಂದು ಹೇಳಿದರು.


ಯಾವುದೇ ಹೊಸ ಯೋಜನೆಯನ್ನ ಜಾರಿಗೆ ತರಲಿಲ್ಲ ಆದರೆ ಕಳೆದ ಹತ್ತು ವರ್ಷಗಳಲ್ಲಿ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಸರ್ವ ಜನಾಂಗಕ್ಕೆ ಅನುಕೂಲವಾಗುವಂತಹ ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಇದರ ಪರಿಣಾಮವಾಗಿ ಇಂದು ದೇಶದ ಎಲ್ಲಾ ಸಮುದಾಯಗಳು ಅತ್ಯಂತ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ ಎಂದು ಹೇಳಿದರು.


ಜಿಲ್ಲೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರುವ ಪರಿಕಲ್ಪನೆ ನಮ್ಮ ಮನದಲ್ಲಿದೆ ಈ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ
ಈ ಮೂಲಕ ಮತ್ತೊಮ್ಮೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರನ್ನಾಗಿ ಆಯ್ಕೆ ಮಾಡಿ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಪರವಾಗಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಬೇಕೆಂದು ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಆಲ್ದಳ್ಳಿ ವೀರೇಶ್, ಹರಿಕೃಷ್ಣ, ಸುಬ್ರಹ್ಮಣ್ಯ, ಮಲ್ಲಿಕಾರ್ಜುನ ಅಕ್ರೆ ಮುಂತಾದವರು ಉಪಸ್ಥಿತರಿದ್ದರು.

ಸಾವಿರಾರು ಕೋಟಿ ಅನುದಾನಗಳನ್ನ ಕ್ಷೇತ್ರಕ್ಕೆ ತರುವ ಮೂಲಕ ಹಿಂದೆಂದೂ ಕಂಡಿರಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಜನಸಾಮಾನ್ಯರ ಕೈಗೆ ಸುಲಭವಾಗಿ ಸಂಸದ ಬಿ ವೈ ರಾಘವೇಂದ್ರ ಇಂಥವರನ್ನ ಪುನಃ ಆರಿಸಬೇಕಾಗಿರದು ನಮ್ಮೆಲ್ಲರ ಕರ್ತವ್ಯ ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕಾಗಿದೆ

Leave a Reply

Your email address will not be published. Required fields are marked *

Optimized by Optimole
error: Content is protected !!