ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಉಚ್ಚಾಟನೆ ಹೇಳಿಕೆ ಹಾಸ್ಯಾಸ್ಪದ , ನಾನು ಪಕ್ಷ ಬಿಟ್ಟು ಬಿಜೆಪಿ ಸೇರುವ ಮೊದಲು ಕಾಂಗ್ರೆಸ್ಸಿನ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜಿನಾಮೆ ನೀಡಿದ್ದೆನೆ : ಡಾ. ರಾಜನಂದಿನಿ ಕಾಗೋಡು

ಸಾಗರ, ಜೂನ್ 8: ನಾನು ಬಿಜೆಪಿ ಸೇರುವ ಮೊದಲು ಕಾಂಗ್ರೇಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿಯೆ ಬಿಜೆಪಿ ಸೇರಿದ್ದೆನೆ, ಅದರು ಕಾಂಗ್ರೇಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೇಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಡಾ. ರಾಜನಂದಿನಿ ಕಾಗೋಡು ಅವರು
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದರು…..

ಡಾ. ರಾಜನಂದಿನಿ ಕಾಗೋಡು

ಸಾಗರ, ಜೂನ್ 8:
ಕಾಂಗ್ರೇಸ್ ಪಕ್ಷದಲ್ಲಿದ್ದು ಬಿಜೆಪಿ ಪರ ಕೆಲಸ ಮಾಡಿದ್ದರೇ ಉಚ್ಚಾಟನೆಗೆ ಒಂದು ಅರ್ಥ ಇರುತಿತ್ತು. ಆದರೆ ಪಕ್ಷಕ್ಕೆ ರಾಜಿನಾಮೆ ನೀಡಿ ಎರಡು ತಿಂಗಳ ನಂತರ ಉಚ್ಚಾಟನೆ ಮಾಡಿದ್ದಾಗಿ ಹೇಳುತ್ತಿರುವ ಕಾಂಗ್ರೇಸ್ ಜಿಲ್ಲಾಧ್ಯಕ್ಷರ ನಡೆ ಹಿಂದೆ ಯಾವ ಉದ್ದೇಶವಿದೆ ಎನ್ನುವುದನ್ನು ಅವರು ಸ್ಪಷ್ಟಪಡಿಸಬೇಕು ಎಂದರು.
ಕಾಂಗ್ರೇಸ್ ಹಿಂದಿನ ಶಾಸಕರನ್ನು ನಾನು ಉಚ್ಚಾಟನೆ ಬಗ್ಗೆ ಚರ್ಚೆ ಮಾಡಿದ್ದೇನೆ. ತಾವು ಶಾಸಕರಾಗಿದ್ದಾಗ ಇಂತಹದ್ದು ನಡೆದಿರಲಿಲ್ಲ ಎಂದು ಹೇಳುತ್ತಾರೆ. ಈಗಿನ ಕಾಂಗ್ರೇಸ್ ಶಾಸಕರ ದ್ವೇಷದ ರಾಜಕಾರಣಕ್ಕೆ ಇದು ಸಾಕ್ಷಿಯಾಗಿದೆ. ನಮ್ಮ ಬೇಡಿಕೆಗೆ ವಿರುದ್ದವಾಗಿರುವ ಅಭ್ಯರ್ಥಿಗೆ ಟಿಕೇಟ್ ನೀಡಿದ್ದರಿಂದ ನಾವು ಕಾಂಗ್ರೇಸ್‌ಗೆ ರಾಜಿನಾಮೆ ನೀಡಿದ್ದೇವೆ. ಎರಡು ತಿಂಗಳ ನಂತರ ನಮ್ಮನ್ನು ಉಚ್ಚಾಟನೆ ಮಾಡಿರುವುದು ಕಾನೂನುಬಾಹಿರ ಎಂದು ಹೇಳಿದರು.
ಕಾಂಗ್ರೇಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ್ ಮಾತನಾಡಿ, ನಾವೆಲ್ಲಾ ಮೂಲ ಕಾಂಗ್ರೆಸ್ಸಿಗರು. ಗೋಪಾಲಕೃಷ್ಣ ಬೇಳೂರು ಬಿಜೆಪಿ, ಜೆಡಿಎಸ್ ಅಲೆದು ಅಲ್ಲಿ ಟಿಕೇಟ್ ಸಿಗಲಿಲ್ಲ ಎಂದು ಕಾಂಗ್ರೇಸ್‌ಗೆ ಬಂದವರು. ನಾನು ಕಾಂಗ್ರೇಸ್‌ಗೆ ರಾಜಿನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೇನೆ. ಹಿಂದೆ ಬೇಳೂರು ಶಾಸಕರಾಗಿದ್ದ ಸಂದರ್ಭದಲ್ಲಿಯೆ ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಹುಟ್ಟಿದ್ದು, ಅದನ್ನು ಈಗಲೂ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಕಾಂಗ್ರೇಸ್ ಪಕ್ಷಕ್ಕೆ ನೀತಿ ನಿಯಮ ಇದ್ದರೆ ಮೊದಲು ಜಿಲ್ಲಾಧ್ಯಕ್ಷ ಸುಂದರೇಶ್ ಅವರನ್ನು ಉಚ್ಚಾಟನೆ ಮಾಡಲಿ ಎಂದು ಒತ್ತಾಯಿಸಿದ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಕ್ಷೇತ್ರದ ಅಭಿವೃದ್ದಿ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಇಂತಹ ದ್ವೇಷದ ರಾಜಕಾರಣವನ್ನು ಮುಂದುವರೆಸುವುದನ್ನು ನಿಲ್ಲಿಸಲಿ ಎಂದು ಹೇಳಿದರು.
ಜಿ.ಪಂ. ಮಾಜಿ ಸದಸ್ಯ ರತ್ನಾಕರ ಹೊನಗೋಡು ಮಾತನಾಡಿ, ಪಕ್ಷಕ್ಕೆ ರಾಜಿನಾಮೆ ನೀಡಿದವರನ್ನು ಉಚ್ಚಾಟನೆ ಮಾಡಿದ್ದೇವೆ ಎಂದು ನೀಡಿರುವ ಹೇಳಿಕೆಯೆ ಆಶ್ಚರ್ಯಕರ ಸಂಗತಿಯಾಗಿದೆ. ಗೋಪಾಲಕೃಷ್ಣ ಬೇಳೂರನ್ನು ಮೆಚ್ಚಿಸಲು ಜಿಲ್ಲಾಧ್ಯಕ್ಷ ಸುಂದರೇಶ್ ಈ ನಿರ್ಧಾರ ಕೈಗೊಂಡಿದ್ದು ಸ್ಪಷ್ಟವಾಗುತ್ತಿದೆ. ನಾವು ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಸೇರುತ್ತೇವೆ ಎಂದು ಬೇಳೂರು ಆತುರದಲ್ಲಿ ಉಚ್ಚಾಟನೆಗೆ ಒತ್ತಡ ಹೇರಿದ್ದು ಕಂಡು ಬರುತ್ತಿದೆ. ಈಗಾಗಲೆ ಕ್ಷೇತ್ರವ್ಯಾಪ್ತಿಯಲ್ಲಿ ದುರಾಡಳಿತ ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಮುಂದಿನ ದಿನಗಳಲ್ಲಿ ಅಂಕಿಅಂಶದ ಸಹಿತ ಬಹಿರಂಗಪಡಿಸಲಾಗುತ್ತದೆ ಎಂದು ಹೇಳಿದರು


ಸುಧೀರ್ ವಿಧಾತ, ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!