ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಂದ ಭದ್ರಾವತಿಯಲ್ಲಿ ಭರ್ಜರಿ ರೋಡ್ ಷೋ ತೆರೆದ ವಾಹನದಲ್ಲಿ ಮತಯಾಚನೆ

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಂದ ಭದ್ರಾವತಿಯಲ್ಲಿ ಭರ್ಜರಿ ರೋಡ್ ಷೋ ತೆರೆದ ವಾಹನದಲ್ಲಿ ಮತಯಾಚನೆ

ASHWASURYA/SHIVAMOGGA

ಸುಧೀರ್ ವಿಧಾತ

ಅಶ್ವಸೂರ್ಯ/ಭದ್ರಾವತಿ: ಉಕ್ಕಿನ ನಗರಿ ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಸಂಜೆ ಸಹಸ್ರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ರೋಡ್ ಷೊ ನಡೆಸಿದರು.
ರೋಡ್‌ ಷೋನಲ್ಲಿ ಕಾರ್ಯಕರ್ತರು “ಗೀತಕ್ಕ” ಅವರನ್ನು ಬೆಂಬಲಿಸಿ ಎಂದು ಘೋಷಣೆ ಕೂಗುವ ಮೂಲಕ ಮತಯಾಚಿಸಿದರು.

ರೋಡ್‌ ಷೊ ಸಂಜೆ 6 ಗಂಟೆಗೆ ತಾಲ್ಲೂಕಿನ ಬೊಮ್ಮನಕಟ್ಟೆಯಿಂದ ಆರಂಭವಾಯಿತು. ರೋಡ್‌ ಷೊ ಮೂಲಕ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಸಾಗುತ್ತಿದ್ದಾಗ ಮಹಿಳೆಯರು ಆರತಿ ಬೆಳಗುವುದರ ಮೂಲಕ ಸ್ವಾಗತಿಸಿದರು ಹಾಗೂ ಕಾರ್ಯಕರ್ತರು ಹೂವಿನ ಹಾರ ಹಾಕುವ ಮೂಲಕ ಶುಭ ಕೋರಿದರು. ತೆರೆದ ವಾಹನದಲ್ಲಿ ಗೀತಾ ಶಿವರಾಜಕುಮಾರ್ ಪತಿ ನಟ ಶಿವರಾಜಕುಮಾರ್ ಮತ್ತು ಸ್ಥಳೀಯ ಶಾಸಕರಾದ ಬಿ ಕೆ ಸಂಗಮೇಶ್,ಇನ್ನೂ ಮುಂತಾದ ಕಾಂಗ್ರೆಸ್ ಮುಖಂಡರು ಸಾಥ್‌ ನೀಡಿದರು.
ರೋಡ್ ಷೋ ಪೇಪರ್ ಟೌನ್- ಚೌಡಮ್ಮನ ದೇವಸ್ಥಾನ, ಕೂಲಿ ಬ್ಲಾಕ್ ಸೆಡ್, ಮೇಲೂರ್ ಸೆಡ್, ಉಜ್ಜಯಿನಿಪುರ,ಸುರ್ಗಿತೋಪು, ಆಂಜನೇಯ ಅಗ್ರಹಾರ, ಜಿಂಕ್ ಲೈನ್ ಮುಖಾಂತರ ಸಾಗಿತು ರಸ್ತೆ ಉದ್ದಕ್ಕೂ ಗೀತಾ ಶಿವರಾಜಕುಮಾರ್ ಮತಯಾಚನೆ ಮಾಡಿದರು.

ರೋಡ್ ಷೋ ನ ಕೊನೆಯ ವರೆಗೂ ಅತ್ಯುತ್ಸಾಹದಲ್ಲಿ ಪಾಲ್ಗೊಂಡಿದ್ದ ನೂರಾರು ಯುವಕರು ಕಾರ್ಯಕರ್ತರು ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ, ಸಂಭ್ರಮಿಸಿದರು. ರಸ್ತೆಯ ಇಕ್ಕೆಲಗಳಲ್ಲೂ ಕಿಕ್ಕಿರಿದು ಸೇರಿದ್ದ ಸಾವಿರಾರು ಜನರು ಗೀತಾ ಶಿವರಾಜಕುಮಾರ್ ಅವರ ಉತ್ಸಾಹ ಇಮ್ಮಡಿಗೊಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ ಮಹಿಳೆಯರು ಮನಸ್ಸು ಮಾಡಿದರೆ ಏನು ಬೇಕಾದರು ಸಾಧಿಸಬಹುದು. ಇಲ್ಲಿನ ವಿಐಎಸ್ ಎಲ್ ಕಾರ್ಖಾನೆ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳು ಭದ್ರಾವತಿಯಲ್ಲಿ ಗಾಢವಾಗಿ ಬೇರೂರಿ ನಿಂತಿವೆ. ಈ ಎಲ್ಲಾ ಸಮಸ್ಯೆಗಳಿಗೆ ಕೇಂದ್ರದ ಹಂತದಲ್ಲಿ ಪರಿಹಾರ ಒದಗಿಸಲು ನನಗೊಂದು ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.

ಶಾಸಕ ಬಿ.ಕೆ.ಸಂಗಮೇಶ್ ಮಾತನಾಡಿ, ಜಿಲ್ಲೆಯ ಸರ್ವೋತೋಮುಖ ಏಳಿಗೆಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಬಲ್ಕೀಸ್ ಭಾನು ಮಾತನಾಡಿ, ಇಲ್ಲಿನ ಸ್ಥಳೀಯ ಸಮಸ್ಯೆಗಳ ಪರಿಹರಿಸಲು ಶಾಸಕ ಸಂಗಮೇಶ್ ಅವರ ಕೈ ಬಲಪಡಿಸಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಕೋರಿದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್, ಮುಖಂಡರಾದ ಬಿ.ಕೆ.ಮೋಹನ್, ಭದ್ರಾವತಿ ಕಾಂಗ್ರೆಸ್ ಸಂಯೋಜಕ ಬಿಆರ್ ಪಿ ರಮೇಶ್ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!