ಶಿವಮೊಗ್ಗ ನಗರದ ಮಿಳಘಟ್ಟ 27 ನೇ ವಾರ್ಡಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್ ಮತಯಾಚನೆ
ASHWASURYA/SHIVAMOGGA
ಸುಧೀರ್ ವಿಧಾತ
ಅಶ್ವಸೂರ್ಯ/ಶಿವಮೊಗ್ಗ: ವಾರ್ಡ್ ನಂಬರ್ 27ರ ಮಿಳಘಟ್ಟ ಬಡಾವಣೆಗೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮನೆ ಮನೆಗೆ ತೆರಳಿ ಮತ ಯಾಚಿಸಿದರು. ರಾಜ್ಯ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಐದು ಗ್ಯಾರಂಟಿಗ ಫಲಾನುಭವಿಗಳನ್ನು ಮಾತನಾಡಿಸಿ. ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿದರೆ ಜಾರಗೆ ತರಲಿರುವ ಕೇಲವು ಗ್ಯಾರಂಟಿಗಳನ್ನು ಮತದಾರರಿಗೆ ಮನವರಿಕೆ ಮಾಡಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ವಿಧಾನ ಸಭೆ ಅಭ್ಯರ್ಥಿ ಆಗಿದ್ದ ಹೆಚ್.ಸಿ.ಯೋಗೇಶ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಂ ಪಾಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿ.ಜು.ಪಾಶ, ವಾರ್ಡ್ ಅಧ್ಯಕ್ಷ ರಾಮ್ ನಾಥ್,ನೂರುಲ್ಲ, ವಸೀಂ ಅಲೀ ಖಾನ್, ಶಮೀಮ್ ಬಾನು ಸೇರಿದಂತೆ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.