ಈ ಬಾರಿಯ ನಿರ್ಧಾರ – ಮತ್ತೊಮ್ಮೆ ಮೋದಿ ಸರ್ಕಾರ: ಸಂಸದ ಬಿ ವೈ ರಾಘವೇಂದ್ರ
ASHWASURYA/SHIVAMOGGA
ಸುಧೀರ್ ವಿಧಾತ
ಅಶ್ವಸೂರ್ಯ/ಶಿವಮೊಗ್ಗ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಸಾಗರ ರಸ್ತೆಯಲ್ಲಿರುವ ಪ್ರೇರಣ ಕನ್ವೆನ್ಷನ್ ಹಾಲ್ ನಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಆಯೋಜಿಸಿದ್ಧ ಬೃಹತ್ “ಸಾರ್ವಜನಿಕ ಸಭೆ” ಯಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿ ಚುನಾವಣಾ ಪ್ರಚಾರ ನಡೆಸಲಾಯಿತು.
ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಜನಮೆಚ್ಚಿದ ಆಡಳಿತ ನೀಡಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿರುವ ಐತಿಹಾಸಿಕ ಯೋಜನೆಗಳ ಕುರಿತು ಹಾಗೂ ನನ್ನ ಲೋಕಸಭಾ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅನುಷ್ಠಾನಗೊಳಿಸಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಅಲ್ಲಿ ನೆರೆದಿದ್ದ ಮತದಾರ ಬಾಂಧವರ ಮುಂದೆ ಮುಕ್ತವಾಗಿ ತೆರೆದಿಡಲಾಯಿತು.
ರಾಜ್ಯದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಆಡಳಿತ ನಡೆಸಿದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆ, ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಯೋಜನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಇನ್ನೂ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರ ಜೀವನ ಮಟ್ಟ ಸುಧಾರಣೆಗೆ ತರಲು ಶ್ರಮಿಸಿದ್ದನ್ನು ಇದೇ ವೇದಿಕೆಯಲ್ಲಿ ನೆನಪು ಮಾಡಿಕೊಳ್ಳಲಾಯಿತು.
ಬರುವ ಮೇ 7 ರಂದು ಕ್ರಮ ಸಂಖ್ಯೆ 2ರ “ಕಮಲ” ದ ಗುರುತಿಗೆ ತಮ್ಮ ಅತ್ಯಮೂಲ್ಯ ಮತವನ್ನು ನೀಡುವುದರ ಮೂಲಕ ಅತ್ಯಧಿಕ ಮತಗಳ ಅಂತರದಿಂದ ವಿಜಯಮಾಲೆಯನ್ನು ಧರಿಸಲು ಸಹಕಾರ ನೀಡುವಂತೆ ಈ ಮೂಲಕ ದೇಶದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಲು ಸಹಕರಿಸುವಂತೆ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಅವರು, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಕಡಿದಾಳ್ ಗೋಪಾಲ್ ಅವರು, ಶಾಸಕರಾದ ಶ್ರೀ ರುದ್ರೇಗೌಡ ಅವರು, ಶ್ರೀಮತಿ ಶಾರದಾ ಪೂರ್ಯ ನಾಯಕ್ ಅವರು, ಶ್ರೀ ಭೋಜೆಗೌಡ ಅವರು, ಮುಖಂಡರಾದ ಶ್ರೀ ಹರತಾಳು ಹಾಲಪ್ಪ ಅವರು, ಶ್ರೀ ರಘುಪತಿ ಭಟ್ ಅವರು, ಶ್ರೀ ಗಿರೀಶ್ ಪಟೇಲ್ ಅವರು, ಶ್ರೀ ಜಗದೀಶ್ ಅವರು, ಶ್ರೀ ಧನಂಜಯ ಸರ್ಜಿ ಅವರು ಸೇರಿದಂತೆ ಇನ್ನು ಅನೇಕ ಪ್ರಮುಖರು ಉಪಸ್ಥಿತರಿದ್ದರು.