ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಯನೂರು ಮಂಜುನಾಥ್ ನಾಮಪತ್ರ ಸಲ್ಲಿಕೆ
ASHWASURYA/SHIVAMOGGA
✍️ ಸುಧೀರ್ ವಿಧಾತ
ಅಶ್ವಸೂರ್ಯ/ಮೈಸೂರು: ಮೈಸೂರಿನಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಅಯನೂರು ಮಂಜುನಾಥ್ ಅವರು ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ನವರು ಮತ್ತು ಶಾಸಕ ತನ್ವೀರ್ ಸೇಠ್ , ಹೊನ್ನಾಳಿ ಶಾಸಕ ಶಾಂತನಗೌಡ ಮೊದಲಾದವರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಮೊದಲು ತಮ್ಮ ಬೆಂಬಲಿಗರು ಮತ್ತು ಆತ್ಮೀಯರ ಜೊತೆಗೆ ವಿಶ್ವ ಪ್ರಸಿದ್ಧ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದು ವಿಷೇಶವಾಗಿತ್ತು.
ಈ ಸಂಧರ್ಭದಲ್ಲಿ ಮಾತನಾಡಿದ ಸಚಿವ ಮಧುಬಂಗಾರಪ್ಪ ನವರು ಗೆಲುವು ಗ್ಯಾರಂಟಿ ನಮ್ಮದೆ ಎಂದರು ಈ ಚುನಾವಣೆಯನ್ನು ಲೋಕಸಭಾ ಚುನಾವಣೆಯ ರೀತಿಯಲ್ಲಿ ಎದುರಿಸಲಿದ್ದೇವೆ ಗೆಲುವ ವಿಶ್ವಾಸ ನಮಗಿದೆ ಎಂದರು.
ಸಮಯ ಅವಕಾಶ ಕೂಡ ಕಡಿಮೆ ಇರುವುದರಿಂದ ನಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷದ ಮುಖಂಡರು ಕಾರ್ಯಕರ್ತರು ಶ್ರಮಿಸಬೇಕು, ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಕೆಲಸವನ್ನು ಮಾಡಬೇಕು. ರಾಜ್ಯ ಸರ್ಕಾರದ ಜನಪ್ರಿಯ ಆಡಳಿತ ಪಕ್ಷ ಬಲವನ್ನು ಹೆಚ್ಚಿಸಿದೆ, ನಮ್ಮ ಅಭ್ಯರ್ಥಿಗಳ ಗೆಲವು ಗ್ಯಾರಂಟಿ ಎಂದು ಹೇಳಿದರು.
ನಾನು ಮತ್ತು ನನ್ನ ತಂಡ…..