ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ

ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ

ASHWASURYA/SHIVAMOGGA

SUDHIR VIDHATA

ಅಶ್ವಸೂರ್ಯ/ಪುತ್ತೂರು : ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿಬೇಕಾದರೆ ವಿಧಾನ ಪರಿಷತ್ ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

ಇಲ್ಲಿನ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ, ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್ ನಲ್ಲಿ ನಮ್ಮ ಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಊಟ ಶರೀರಕ್ಕೆ ತೃಪ್ತಿ ಕೊಡುತ್ತೆ, ಪಾಠ ಮೆದುಳಿಗೆ ತೃಪ್ತಿ ಕೊಡುತ್ತೆ, ಆಟ ಮನಸ್ಸಿಗೆ ತೃಪ್ತಿ ಕೊಡುತ್ತೆ, ನಿಜವಾದ ನಿಸ್ವಾರ್ಥ ಸೇವೆ ಮನಸ್ಸಿಗೆ ತೃಪ್ತಿ ಕೊಡುತ್ತದೆ, ಇಂತಹ ಸೇವಾ ಮನೋಭಾವನೆಯೊಂದಿಗೆ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ, ಪದವೀಧರ ಕ್ಷೇತ್ರದ ಸಮಸ್ಯೆಗಳ ಸಂಪೂರ್ಣ ನನಗಿದ್ದು, ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಪರಿಷತ್ ಸದಸ್ಯನಾಗಿ ಈಗಾಗಲೇ ನಾನು ಸೇವೆ ಸಲ್ಲಿಸಿದ್ದೇನೆ, ಶಿಕ್ಷಕರು, ನೌಕರರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ, ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ, ತಿದ್ದಿ ತೀಡುತ್ತಾ ಸದೃಢ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಹಾಗೂ ಪದವೀಧರ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕಂಪಲ ಅವರು ಮೈತ್ರಿ ಕೂಟದ ಅಭ್ಯರ್ಥಿಗಳ: ಪರವಾಗಿ ಮತವನ್ನು ಯಾಚಿಸಿದರು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಾಧಾಕೃಷ್ಣ ಆಳ್ವ, ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಜಗನ್ನಿವಾಸ ರಾವ್, ಪುತ್ತೂರು ಮಾಜಿ ಶಾಸಕರಾದ ಸಂಜೀವ್ ಮಠನ್ದೂರು, ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ನೈರುತ್ಯ ಪದವಿದರ ಕ್ಷೇತ್ರದ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ವಿಕಾಸ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಸೇರಿದಂತೆ ಹಲವರು ಉಪಸ್ಥಿತರಿದ್ದರು

ಸರಳ, ಸಜ್ಜನಿಕೆಯ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸೋಣ : ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ ಕಾರ್ಯಕರ್ತರಿಗೆ ಕರೆ

ಶಿವಮೊಗ್ಗ : ಸರಳ, ಸಜ್ಜನಿಕೆಯ ಹಾಗೂ ಸೇವಾ ಮನೋಭಾವವನ್ನು ಹೊಂದಿರುವ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸೋಣ ಎಂದು ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರ ನಿವಾಸದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರೂ ಎಲ್ಲ ಮತದಾರರನ್ನು ಕರೆ ತಂದು ಮತ ಹಾಕಿಸುವಂತಾಗಬೇಕು, ದೂರ ಪ್ರದೇಶದಲ್ಲಿದ್ದವರಿಗೆ ಹಾಗೂ ವಯೋ ವೃದ್ಧರಿಗೆ ವಾಹನ ವ್ಯವಸ್ಥೆಗಳ ಮೂಲಕ ಮತಗಟ್ಟೆಗೆ ಕರೆತಂದು, ವಾಪಾಸು ಮನೆಗೆ ಸುರಕ್ಷಿತವಾಗಿ ಕಳಿಸುವಂತಹ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ,ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಆಕಾಂಕ್ಷೆಯಿಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ, ಅನೇಕ ಸಾಮಾಜಿಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇನೆ, ರಾಜಕೀಯದಲ್ಲೂ ಸೇವೆ ಸಲ್ಲಿಸಲು ಭಾರತೀಯ ಜನತಾ ಪಾರ್ಟಿ ಅವಕಾಶವನ್ನು ಕೊಟ್ಟಿದೆ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ಮತ್ತು ಸೌಲಭ್ಯಗಳು ದೊರಕುವಂತಾಗಬೇಕೆಂಬುದು ನನ್ನ ಬಯಕೆ. ಪಕ್ಷದ ಕಾರ್ಯಕರ್ತರೇ ಸಂಘಟನಾ ಶಕ್ತಿಯಾಗಿದ್ದಾರೆ, ಕ್ಷೇತ್ರದಲ್ಲಿ 85 ಸಾವಿರ ಮತದಾರರಿದ್ದು, ಪ್ರತಿ ಮತದಾರರನ್ನು ಕಾರ್ಯಕರ್ತರು ತಲುಪುವ ಕೆಲಸವನ್ನು ಮಾಡಬೇಕು. ಹೋದ ಕಡೆಯಲ್ಲೆಲ್ಲಾ ಪದವೀಧರರು ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ, ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವನ್ನು ತಂದುಕೊಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಚ್. ಮಾಲತೇಶ್, ಬಿಜೆಪಿ ನಗರಾಧ್ಯಕ್ಷರಾದ ಮೋಹನ ರೆಡ್ಡಿ, ಎನ್ ಡಿ ಸತೀಶ್, ಮಲ್ಲಿಕಾರ್ಜುನ , ಮಹಾಶಕ್ತಿ ಕೇಂದ್ರದ ಪ್ರಮುಖರು ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!