ಉಡುಪಿ ಜಿಲ್ಲೆಯ ಕುಂದಾಪುರ ಮಂಡಲದ ಬಿಜೆಪಿ ಕಚೇರಿಯ ಕಾರ್ಯಕರ್ತರ ಸಭೆಯಲ್ಲಿ ಡಾಕ್ಟರ್ ಧನಂಜಯ ಸರ್ಜಿ

ಉಡುಪಿ ಜಿಲ್ಲೆಯ ಕುಂದಾಪುರ ಮಂಡಲದ ಬಿಜೆಪಿ ಕಚೇರಿಯ ಕಾರ್ಯಕರ್ತರ ಸಭೆಯಲ್ಲಿ ಡಾಕ್ಟರ್ ಧನಂಜಯ ಸರ್ಜಿ

ASHWASURYA/SHIVAMOGGA

 SUDHIR VIDHATA 

ಅಶ್ವಸೂರ್ಯ/ಉಡುಪಿ: ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಗುರುವಾರ ಉಡುಪಿ ಜಿಲ್ಲೆಯ ಕುಂದಾಪುರ ಮಂಡಲದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು
ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ನೈರುತ್ಯ ಪಧವೀದರ ಕ್ಷೇತ್ರ 85000 ಪದವೀಧರ ಮತದಾರರನ್ನು ಹೊಂದಿರುವ ದೊಡ್ಡ ಕ್ಷೇತ್ರ .ಇಂತಹ ದೊಡ್ಡ ಕ್ಷೇತ್ರದಲ್ಲಿ ಮತದಾರರನ್ನು ತಲುಪುವ ಶಕ್ತಿ ಇರುವುದು ಕಾರ್ಯಕರ್ತರಿಂದ ಮಾತ್ರ ಸಾಧ್ಯ .ದೇವದುರ್ಲಭ ಕಾರ್ಯಕರ್ತರು ತಾವೇ ಅಭ್ಯರ್ಥಿಗಳು ಎಂದುಕೊಂಡು ನನ್ನ ಪರವಾಗಿ ಮತಯಾಚಿಸಬೇಕು ಎಂದು ವಿನಂತಿಸಿದರು.

ಇತ್ತೀಚಿಗಷ್ಟೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಬಂದಿದೆ , ಇಡೀ ರಾಜ್ಯದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿರುವುದು ಉಡುಪಿ ಜಿಲ್ಲೆ , ಎರಡನೇ ಸ್ಥಾನವನ್ನು ದಕ್ಶಿಣ ಕನ್ನಡ , ಮೂರನೇ ಸ್ಥಾನವನ್ನು ಶಿವಮೊಗ್ಗ ಪಡೆದುಕೊಂಡಿದೆ. ಇಡೀ ರಾಜ್ಯದಲ್ಲಿ ಮೊದಲ ಮೂರು ಸ್ಥಾನವನ್ನು ಪಡೆದುಕೊಂಡಿರುವುದು ನೈರುತ್ಯ ಪದವೀಧರ ಕ್ಷೇತ್ರದ ಜಿಲ್ಲೆಗಳು, ರಾಜ್ಯದಲ್ಲಿ ಪ್ರತಿ ವರ್ಷ 2 ಲಕ್ಷ ಹೆಣ್ಣು ಮಕ್ಕಳು 1ಲಕ್ಷದ 76000 ಗಂಡುಮಕ್ಕಳು ಪದವೀಧರರಾಗಿ ಹೊರಹೊಮ್ಮುತ್ತಿದ್ದಾರೆ. ಹಾಗಾಗಿ ಪದವೀಧರರು ಹಾಗೂ ಶಿಕ್ಷಕರಿಗೆ ವೈದಕೀಯ ಸೌಲಭ್ಯಗಳು ಹೆಚ್ಚು ಹೆಚ್ಚು ಸಿಗಬೇಕು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ದೇಶದ ಪ್ರತಿಯ್ತೊಬ್ಬ ನಾಗರಿಕನಿಗೂ ಅರೋಗ್ಯ ಸೌಲಭ್ಯ ಸಿಗಬೇಕು ಎಂದು ಆ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸರ್ಕಾರಿ ವೈದಕೀಯ ಕಾಲೇಜುಗಳು ಇರಬೇಕು , ಉಡುಪಿ ಜಿಲ್ಲೆಗೂ ಒಂದು ಸರಕಾರಿ ವೈದಕೀಯ ಕಾಲೇಜು ಸಿಗಬೇಕು, ಈ ರೀತಿಯ ಅನೇಕ ಸವಾಲುಗಳಿವೆ, ಈ ನಿಟ್ಟಿನಲ್ಲಿ ಪದವೀಧರರ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ನಿಮ್ಮ ಪ್ರತಿನಿಧಿಯಾಗಿ ಇರುತ್ತೇನೆ , ನನ್ನ ಎಲ್ಲಾ ನಿಷ್ಠಾವಂತ ಕಾರ್ಯಕರ್ತರು ನನ್ನ ಪರವಾಗಿ ಮತಯಾಚಿಸಿ ಅತಿ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ , ವಿಧಾನ ಪರಿಷತ್ ನ ವಿರೋಧಪಕ್ಷದ ನಾಯಕರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ , ಚುನವಣಾ ಸಹ ಪ್ರಭಾರಿಗಳಾದ ಬೈ ಕೊಡು ಸುಪ್ರದ ಶೆಟ್ಟಿ , ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ. ಎಸ್, ರಾಜ್ಯ ಮಹಿಳಾ ಕಾರ್ಯದರ್ಶಿಗಳಾದ ಶಿಲ್ಪಿ ಜಿ , ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್ ದತ್ತಾತ್ರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್. ಮಾಲತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!